ಯಡಿಯೂರಪ್ಪಗೆ ಮತ್ತೆ “ಭೂ’ ಕಂಟಕ

Team Udayavani, Aug 19, 2017, 6:35 AM IST

BSY-19-2017.jpg

ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನಲ್ಲಿ ಡಾ. ಶಿವರಾಮ ಕಾರಂತ ಬಡಾವಣೆ ನಿರ್ಮಾಣದ ವೇಳೆ ಭೂ ಮಾಲೀಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಡಿನೋಟಿಫಿಕೇಶನ್‌ ಮಾಡಿರುವ ಆರೋಪ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ವಿರುದ್ಧಎರಡು ಪ್ರತ್ಯೇಕ ಎಫ್ಐಆರ್‌ ದಾಖಲಿಸಿಕೊಂಡಿರುವ ಭ್ರಷ್ಟಾಚಾರ ನಿಗ್ರಹ ದಳ, ಈ ಸಂಬಂಧ ಶನಿವಾರ ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪ ಹಾಗೂ ಮತ್ತಿತರರಿಗೆ ನೋಟಿಸ್‌ ಜಾರಿಗೊಳಿಸಿದೆ.

ಎಸಿಬಿ ನೋಟಿಸ್‌ ಜಾರಿ ಹಿನ್ನೆಲೆಯಲ್ಲಿ ಶನಿವಾರ ಪ್ರಕರಣಗಳ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಖುದ್ದು ಯಡಿಯೂರಪ್ಪ ಹಾಗೂ ಇತರೆ ಆರೋಪಿತ ಅಧಿಕಾರಿಗಳು ಹಾಜರಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಎರಡನೇ ಎಫ್ಐಆರ್‌ನಲ್ಲೇನಿದೆ?: ಡಾ.ಶಿವರಾಮ ಕಾರಂತ ಬಡಾವಣೆಗೆ ಸ್ವಾಧೀನ ಪಡಿಸಿಕೊಂಡಿದ್ದ ಯಶವಂತಪುರ ಹೋಬಳಿ ಸೋಮಶೆಟ್ಟಿ ಗ್ರಾಮದ ಸರ್ವೇ ನಂಬರ್‌ 22/2ರಲ್ಲಿರುವ 18ಗುಂಟೆ ಹಾಗೂ ಸರ್ವೇ ನಂಬರ್‌ 24/ 1 ಎಕರೆ 8 ಗುಂಟೆ ಜಮೀನನ್ನು ಭೂ ಮಾಲೀಕರ ಕೋರಿಕೆಯಂತೆ, ಡಿನೋಟಿಫೈ ಸಮಿತಿಯ ಅಭಿಪ್ರಾಯವನ್ನೂ ಪಡೆಯದೆ ಈ ಭೂಮಿಯನ್ನು ಭೂ ಸ್ವಾಧೀನ ಪಡಿಸಿಕೊಳ್ಳುವ ಕ್ರಮದಿಂದ ಹಿಂದೆ ಸರಿದು, ಅಂದಿನ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ, ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಭೂ ಮಾಲೀಕರಿಗೆ ಅನುಕೂಲವಾಗುವಂತೆ ಡಿನೋಟಿಫಿಕೇಶನ್‌ ಮಾಡಿ ಕೊಟ್ಟು ಬಿಡಿಎಗೆ ನಷ್ಟವುಂಟು ಮಾಡಿದ್ದಾರೆಂಬ ಆರೋಪದ ಅನ್ವಯ ಎಫ್ಐಆರ್‌ ದಾಖಲಿಸಕೊಳ್ಳಲಾಗಿದೆ.

ಈ ಅಕ್ರಮಕ್ಕೆ ಸಹಕರಿಸಿದ ಬಿಡಿಎ ಅಂದಿನ ವಿಶೇಷ ಭೂ ಸ್ವಾಧೀನಾಧಿಕಾರಿ ಎಚ್‌.ಬಸವರಾಜೇಂದ್ರ, ಭೂ ಸ್ವಾಧೀನ ಉಪ ಆಯುಕ್ತರಾಗಿದ್ದ ಗೌರಿ ಶಂಕರ ಎಸ್‌.ಎನ್‌., ನಗರಾಭಿವೃದ್ಧಿ ಇಲಾಖೆಯ ಅಂದಿನ ಅಧೀನ ಕಾರ್ಯದರ್ಶಿ ಪ್ರೇಮಚಂದ್ರ, ಅಂದಿನ ಉಪಕಾರ್ಯದರ್ಶಿ ಬಸವರಾಜು, ನಗರಾಭಿವೃದ್ಧಿ ಇಲಾಖೆಯ ಅಪರ ಕಾರ್ಯದರ್ಶಿ ಸುಭೀರ್‌ ಹರಿಸಿಂಗ್‌ ಸೇರಿ ಏಳು ಮಂದಿ ವಿರುದ್ಧ ಭ್ರಷ್ಟಾಚಾರ ನಿಗ್ರಹ ತಡೆ ಕಾಯ್ದೆ ಹಾಗೂ ಐಪಿಸಿಯ ವಿವಿಧ ಕಲಂಗಳ ಅಡಿಯಲ್ಲಿ ಎಫ್ಐಆರ್‌ ದಾಖಲಿಸಿಕೊಂಡು ತನಿಖೆ ಮುಂದುವರಿಸಿದೆ.

18 ದೂರುಗಳ ಪರಿಶೀಲನೆ ಬಿ.ಎಸ್‌.ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ ಹೆಸರಘಟ್ಟ – ಯಲಹಂಕ ವ್ಯಾಪ್ತಿಯಲ್ಲಿ ಶಿವರಾಮ
ಕಾರಂತ ಬಡಾವಣೆ ನಿರ್ಮಾಣಕ್ಕೆ ಬಿಡಿಎ 3546 ಎಕರೆ ಜಮೀನು ಸ್ವಾಧೀನ ಪಡಿಸಿಕೊಂಡಿತ್ತು. ಈ ಪೈಕಿ ಯಡಿಯೂರಪ್ಪ ಕಾನೂನು ಬಾಹಿರವಾಗಿ 257. 25 ಗುಂಟೆ ಎಕರೆ ಡಿನೋಟಿμಕೇಶನ್‌ ಮಾಡಿದ್ದಾರೆಂದು ಡಾ. ಡಿ.ಅಯ್ಯಪ್ಪ ಎಂಬುವವರು ಆರೋಪಿಸಿದ್ದರು. ಕಾನೂನು ಬಾಹಿರವಾಗಿ ಡಿನೋಟಿಫಿಕೇಶನ್‌ ಮಾಡಿರುವ ಸಂಬಂಧ ಒಟ್ಟು 20 ದೂರುಗಳು ದಾಖಲಾಗಿದ್ದು, ಈ ಪೈಕಿ ಎರಡಲ್ಲಿ ಎಫ್ಐಆರ್‌ ದಾಖಲಿಸಿಕೊಳ್ಳಲಾಗಿದೆ. ಉಳಿದ 18 ದೂರುಗಳನ್ನೂ ಕೂಲಂಕಶವಾಗಿ ಪರಿಶೀಲಿಸುತ್ತಿದ್ದು ಬಿಎಸ್‌ವೈ ಅಧಿಕಾರ ದುರ್ಬಳಕೆ ಹಾಗೂ ನಿಯಬಾಹಿರವಾಗಿ ಡಿನೋಟಿಫಿಕೇಶನ್‌ ಮಾಡಿರುವ ಬಗ್ಗೆ ಲೋಪ ಕಂಡು ಬಂದರೆ ಎಫ್ ಐಆರ್‌ಗಳನ್ನು ದಾಖಲಿಸಿಕೊಳ್ಳಲಾಗುವುದು ಎಂದು ಎಸಿಬಿ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

3

Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.