ಜಮೀರ್‌ ಬೆಂಬಲಕ್ಕೆ ನಿಂತ ಪಾಷಾ


Team Udayavani, Apr 29, 2018, 11:49 AM IST

zameer.jpg

ಬೆಂಗಳೂರು: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಟಿಕೆಟ್‌ ವಂಚಿತ, ಪಾಲಿಕೆ ಸದಸ್ಯ ಇಮ್ರಾನ್‌ ಪಾಷಾ ಇದೀಗ ಬಹಿರಂಗವಾಗಿ ಕಾಂಗ್ರೆಸ್‌ ಅಭ್ಯರ್ಥಿ ಜಮೀರ್‌ ಆಹಮದ್‌ ಖಾನ್‌ ಅವರ ಬೆಂಬಲಕ್ಕೆ ನಿಂತಿದ್ದಾರೆ. ಅಷ್ಟೇ ಅಲ್ಲ, ಅವರ ಕುಟುಂಬ ಸದಸ್ಯರೆಲ್ಲರೂ ಜಮೀರ್‌ ಪರ ಕೆಲಸ ಮಾಡಲು ಮುಂದಾಗಿದ್ದಾರೆ.

ಇದಲ್ಲದೆ, ಜಮೀರ್‌ ಅಹಮದ್‌ ಅವರಿಗೆ ಒಳಿತಾಗಬೇಕು ಎಂದು ಹಾರೈಸಿ ಇಮ್ರಾನ್‌ ಪಾಷಾ ಕುಟುಂಬ ಗುರುವಾರ ರಾತ್ರಿ ತಮ್ಮ ಮನೆಯಲ್ಲಿ ಕುರಾನ್‌ ಖಾನಿ ಪ್ರಾರ್ಥನೆ ಇಟ್ಟುಕೊಂಡಿದ್ದರು. ಮುಸ್ಲಿಂ ಸಮುದಾಯದಲ್ಲಿ ಯಾರಿಗಾದರೂ ಒಳಿತಾಗಬೇಕು ಎಂದು ಪ್ರಾರ್ಥಿಸಿ ಸಾಮೂಹಿಕ ಕುರಾನ್‌ ಪಠಣ ಮಾಡುವ (ಕುರಾನ್‌ ಖಾನಿ) ಸಂಪ್ರದಾಯವಿದೆ. ಅದರಂತೆ ಜಮೀರ್‌ ಅಹಮದ್‌ ಪರ ಕುರಾನ್‌ ಕಾನಿ ಪ್ರಾರ್ಥನೆ ಏರ್ಪಾಟು ಮಾಡಲಾಗಿತ್ತು.

ಇದರಿಂದಾಗಿ ಜಮೀರ್‌ ಅಹದ್‌ಗೆ ತಿರುಗೇಟು ನೀಡಲು ಮುಂದಾಗಿದ್ದ ಜೆಡಿಎಸ್‌ಗೆ ಕ್ಷೇತ್ರದಲ್ಲಿ ತೀವ್ರ ಹಿನ್ನಡೆಯಾದಂತಾಗಿದೆ. ಚಾಮರಾಜಪೇಟೆ ಕ್ಷೇತ್ರದ ಜೆಡಿಎಸ್‌ ಶಾಸಕರಾಗಿದ್ದ ಜಮೀರ್‌ ಅಹಮದ್‌ ಕಾಂಗ್ರೆಸ್‌ ಸೇರುವ ಯೋಚನೆ ಮಾಡಿದಾಗಿನಿಂದ ಇಮ್ರಾನ್‌ ಪಾಷಾ ಕ್ಷೇತ್ರದಿಂದ ಜೆಡಿಎಸ್‌ ಟಿಕೆಟ್‌ ಬಯಸಿ ಕೆಲಸ ಆರಂಭಿಸಿದ್ದರು. ಆದರೆ, ಕಾಂಗ್ರೆಸ್‌ ತೊರೆದ ಬಂದ ಅಲ್ತಾಫ್ ಖಾನ್‌ರನ್ನು ಜೆಡಿಎಸ್‌ಗೆ ಕರೆತಂದು ಚಾಮರಾಜಪೇಟೆ ಟಿಕೆಟ್‌ ನೀಡಲಾಗಿತ್ತು.

ಇದರಿಂದ ಇಮ್ರಾನ್‌ ಪಾಷಾ ಅಸಮಾಧಾನಗೊಂಡಿದ್ದರು. ಅಲ್ತಾಫ್ ಖಾನ್‌ ಕಾಂಗ್ರೆಸ್‌ನಲ್ಲಿರುವಾಗ ತಮ್ಮ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿದ್ದರು. ಅಂಥವರನ್ನು ಕರೆಸಿ ಟಿಕೆಟ್‌ ನೀಡಿದ್ದರಿಂದ ಯಾವುದೇ ಕಾರಣಕ್ಕೂ ಅಲ್ತಾಫ್ ಖಾನ್‌ ಬೆಂಬಲಿಸಲು ಸಾಧ್ಯವಿಲ್ಲ ಎಂದು ಹೇಳಿರುವ ಇಮ್ರಾನ್‌ ಪಾಷಾ ಬಹಿರಂಗವಾಗಿಯೇ ಕಾಂಗ್ರೆಸ್‌ನ ಜಮೀರ್‌ ಅಹಮದ್‌ಗೆ ಬೆಂಬಲ ಸೂಚಿಸಿದ್ದಾರೆ. ಇದಲ್ಲದೆ, ಇಮ್ರಾನ್‌ ಪಾಷಾ ತಂದೆ ಆರಿಫ್ ಪಾಷಾ ಸೇರಿ ಇಡೀ ಕುಟುಂಬ ಜಮೀರ್‌ ಅಹಮದ್‌ ಅವರನ್ನು ಬೆಂಬಲಿಸಲು ನಿರ್ಧರಿಸಿದೆ.

ಟಾಪ್ ನ್ಯೂಸ್

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ

IPL 2024: Pant has the ambition to become India’s cricket captain: Parth Jindal

IPL 2025: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

13-

Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.