ಮಣಿಪುರ ವಿದ್ಯಾರ್ಥಿಗಳ ಜತೆಗೆ ಜಮೀರ್ ಹುಟ್ಟುಹಬ್ಬ ಆಚರಣೆ
Team Udayavani, Aug 2, 2023, 10:08 AM IST
ಬೆಂಗಳೂರು: ಮಣಿಪುರದ ಜನಾಂಗೀಯ ಘರ್ಷಣೆ ಹಿನ್ನೆಲೆಯಲ್ಲಿ ಆಶ್ರಯ ಕೋರಿ ಬೆಂಗಳೂರಿಗೆ ಬಂದು ಸೆಂಟ್ ತೆರೇಸಾ ಶಿಕ್ಷಣ ಸಂಸ್ಥೆಯಲ್ಲಿ ಉಳಿದುಕೊಂಡಿರುವ 29 ವಿದ್ಯಾರ್ಥಿಗಳನ್ನು ದತ್ತು ಪಡೆಯುವುದಾಗಿ ವಸತಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.
ಚಾಮರಾಜಪೇಟೆಯ ಸೆಂಟ್ ತೆರೆಸಾ ಶಿಕ್ಷಣ ಸಂಸ್ಥೆಯಲ್ಲಿ ಆಶ್ರಯ ಪಡೆಯುತ್ತಿರುವ ಮಣಿಪುರ ಮೂಲದ ವಿದ್ಯಾರ್ಥಿಗಳ ಜತೆಗೆ ಮಂಗಳವಾರ ಅವರು ಹುಟ್ಟುಹಬ್ಬ ಆಚರಿಸಿಕೊಂಡರು. 29 ವಿದ್ಯಾರ್ಥಿನಿಯರ ಸಂಪೂರ್ಣ ಶಿಕ್ಷಣ ಹಾಗೂ ಆರೈಕೆ ವೆಚ್ಚ ಭರಿಸುವುದಾಗಿ ಹೇಳಿ ಇದೇ ಸಂದರ್ಭದಲ್ಲಿ ಘೋಷಿಸಿ 2 ಲಕ್ಷ ರೂ. ನೀಡಿದರು.
ಮಣಿಪುರದಿಂದ ಆಗಮಿಸಿರುವ ವಿದ್ಯಾರ್ಥಿನಿಯರು ಎಲ್ಲಿಯವರೆಗೆ ಇಲ್ಲಿರುತ್ತಾರೋ ಅಲ್ಲಿವರೆಗೆ ಸಂಪೂರ್ಣ ಶಿಕ್ಷಣ ಮತ್ತು ದೈನಂದಿನ ಊಟ ತಿಂಡಿ ಆರೈಕೆ ವ್ಯವಸ್ಥೆ ನೋಡಿಕೊಳ್ಳುವುದಾಗಿ ಹೇಳಿದರು. ಮಣಿಪುರ ವಿದ್ಯಾರ್ಥಿಗಳ ಜತೆ ಅಲ್ಲಿನ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದರು. ಮಣಿಪುರ ವಿದ್ಯಾರ್ಥಿಗಳ ಜತೆಯೇ ಉಪಹಾರ ಸೇವಿಸಿ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ 250 ಮಕ್ಕಳಿಗೂ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ರಾತ್ರಿ ಊಟದ ವ್ಯವಸ್ಥೆ ಮಾಡಿದರು. ಒಟ್ಟು ಮಣಿಪುರದಿಂದ 200 ವಿದ್ಯಾರ್ಥಿಗಳು ಆಶ್ರಯ ಪಡೆಯಲು ಬಂದಿದ್ದು, 29 ವಿದ್ಯಾರ್ಥಿಗಳಿಗೆ ಸೆಂಟ್ ತೆರೇಸಾ ಶಿಕ್ಷಣ ಸಂಸ್ಥೆಯಲ್ಲಿ ಸಂಸ್ಥೆಯಲ್ಲಿ ಆಶ್ರಯ ನೀಡಲಾಗಿದೆ. ಉಳಿದವರಿಗೆ ಇದೇ ಸಂಸ್ಥೆಯ ಬೇರೆ ಕಡೆ ಆಶ್ರಯ ನೀಡಲಾಗಿದೆ. ಈ ವೇಳೆ ಸೆಂಟ್ ತೆರೇಸಾ ವಿದ್ಯಾ ಸಂಸ್ಥೆಯ ಶಿಕ್ಷಕ ವರ್ಗ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
Actor Darshan: ಮೈಸೂರಿಗೆ ತೆರಳಲು ದರ್ಶನ್ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.