12 ಎಕರೆ ಜಮೀನು ಸ್ವಾಧೀನ
Team Udayavani, Jul 29, 2020, 10:28 AM IST
ಹೊಸಕೋಟೆ: ತಾಲೂಕಿನ ಗೊಟ್ಟಿಪುರ ಗ್ರಾಮದಲ್ಲಿ ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಒಳಪಟ್ಟು ಒತ್ತುವರಿಯಾಗಿದ್ದ ಸುಮಾರು 12 ಎಕರೆ ಜಮೀನನ್ನು ಅಧಿಕಾರಿಗಳು ಸ್ವಾಧೀನಕ್ಕೆ ಪಡೆದುಕೊಂಡಿದ್ದಾರೆ.
ಅರಣ್ಯ ಪ್ರದೇಶ ಒಟ್ಟು 237 ಎಕರೆ 12 ಗುಂಟೆಯಷ್ಟು ವಿಸ್ತೀರ್ಣ ಹೊಂದಿದ್ದು ಸುತ್ತಮುತ್ತಲಿನ ಕೆಲವು ಪ್ರಭಾವಶಾಲಿ ವ್ಯಕ್ತಿಗಳು, ಒತ್ತುವರಿ ಮಾಡಿಕೊಂಡಿದ್ದರು. ಈ ಬಗ್ಗೆ ಅರಣ್ಯ ಇಲಾಖೆ ಮೇಲಧಿಕಾರಿಗಳಿಗೆ ನೀಡಿದ್ದ ದೂರಿನ ಅನ್ವಯ ಪರಿಶೀಲನೆ ನಡೆಸಿ ಕಂದಾಯ ಇಲಾಖೆಯಿಂದ ಜಮೀನಿನ ನಕಾಶೆ ಸಿದ್ಧಪಡಿಸಿ ಅದರಂತೆ ಅರಣ್ಯ ಇಲಾಖೆಗೆ ಸೇರಿದ ಸ್ವತ್ತಿನ ಸುತ್ತಲೂ ಮತ್ತೆ ಅತಿಕ್ರಮಣ ಮಾಡುವುದನ್ನು ತಡೆಗೆ ಕಂದಕಗಳನ್ನು ನಿರ್ಮಿಸಿ ಸಸಿ ನೆಡಲಾಗಿದೆ. ಶೀಘ್ರದಲ್ಲಿಯೇ ಸುತ್ತಲೂ ತಂತಿ ಬೇಲಿ ಅಳವಡಿಸಿ ರಕ್ಷಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂತೋಣಿ ಮರಿಯಪ್ಪ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ಟಾರಾವ್ ಮಾರ್ಗದರ್ಶನದಲ್ಲಿ ತಾಲೂಕು ವಲಯ ಅರಣ್ಯಾಧಿಕಾರಿ ವರುಣ್‌ಕುಮಾರ್ ಸಿಬ್ಬಂದಿ ವರ್ಗದವರೊಂದಿಗೆ ತೆರವು ಕಾರ್ಯಾಚರಣೆ ಕೈಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Manipur: ಸಿಎಂ ಬಿರೇನ್ ಸಿಂಗ್ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.