ಪ್ರಸ್ತುತ ದಿನದಲ್ಲಿ ಸರಳ ಸಾಮೂಹಿಕ ವಿವಾಹ ಅನಿವಾರ್ಯ

ವಧು-ವರ ಮತ್ತು ಅವರ ಬಂಧುಗಳಿಗೆ ಊಟೋಪಚಾರದ ವ್ಯವಸ್ಥೆಯನ್ನು ದೇವಾಲಯದಿಂದ ಆಯೋಜಿಸಲಾಗಿತ್ತು.

Team Udayavani, Aug 26, 2022, 5:52 PM IST

ಪ್ರಸ್ತುತ ದಿನದಲ್ಲಿ ಸರಳ ಸಾಮೂಹಿಕ ವಿವಾಹ ಅನಿವಾರ್ಯ

ದೊಡ್ಡಬಳ್ಳಾಪುರ: ವಿವಾಹಗಳು ದುಬಾರಿಯಾಗುತ್ತಿರುವ ಇಂದಿನ ದಿನಗಳಲ್ಲಿ ಸರಳ ಸಾಮೂಹಿಕ ವಿವಾಹಗಳ ಅಗತ್ಯವಿದ್ದು, ಸಪ್ತಪದಿ ಸಾಮೂಹಿಕ ವಿವಾಹಗಳ ಆಯೋಜನೆ ಸ್ತುತ್ಯಾರ್ಯವಾದ ಕಾರ್ಯವಾಗಿದೆ ಎಂದು ದೇವನಹಳ್ಳಿ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.

ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ ತಾಲೂಕಿನ ಘಾಟಿ ಕ್ಷೇತ್ರದ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ನಡೆದ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನವ ವಧುವರರಿಗೆ ಶುಭ ಹಾರೈಸಿ ಮಾತನಾಡಿದ ಅವರು, ಸಮಾಜದಲ್ಲಿ ಆಡಂಬರದ ಮದುವೆಗಳು ಕಡಿಮೆಯಾದರೆ ಜನರ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ಸಾಮೂಹಿಕ ವಿವಾಹದಲ್ಲಿ ಮದುವೆಯಾದ ದಂಪತಿಗಳು ಅನ್ಯೋನ್ಯದಿಂದ ಬಾಳುವ ಮೂಲಕ ಈ ಕಾರ್ಯಕ್ರಮದ ಉದ್ದೇಶವನ್ನು ಸಾರ್ಥಕಪಡಿಸಬೇಕಿದೆ ಎಂದರು.

ಬಡವರಿಗೆ ಅನುಕೂಲ: ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಹಿಂದೆ ಕೋವಿಡ್‌ ಕಾರಣದಿಂದ ಸಾಮೂಹಿಕ ವಿವಾಹ ಮುಂದೂಡಲಾಗಿತ್ತು. ಈಗ ಪರಿಸ್ಥಿತಿ ಸುಧಾರಿಸಿರುವುದರಿಂದ ಮತ್ತೆ ಸಾಮೂಹಿಕ ವಿವಾಹ ಆರಂಭಿಸಿರುವುದು ಉತ್ತಮ ಕಾರ್ಯ. ಆರ್ಥಿಕವಾಗಿ ದುರ್ಬಲರಾಗಿರುವವರು, ಗ್ರಾಮೀಣ ಪ್ರದೇಶದಲ್ಲಿರುವವರು, ಬಡವರಿಗೆ ಸಾಮೂಹಿಕ ವಿವಾಹಗಳು ನೆರವಾಗುತ್ತಿದ್ದು, ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಿರುವುದು ನಮಗೆ ಅತೀವ ಸಂತೋಷವಾಗಿದೆ ಎಂದು ತಿಳಿಸಿದರು.

ಹೊಸ ದಾಂಪತ್ಯಕ್ಕೆ ಕಾಲಿಟ್ಟ 15 ಜೋಡಿ: ಘಾಟಿ ಕ್ಷೇತ್ರದ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಎದುರು ಸಾಮೂಹಿಕ ವಿವಾಹಕ್ಕಾಗಿಯೇ ಹಾಕಿದ್ದ ಪೆಂಡಾಲ್‌ನಲ್ಲಿ ಬೆಳಗ್ಗೆ 9ರಿಂದ 9.50ರವರೆಗಿನ ಕನ್ಯಾ ಲಗ್ನದಲ್ಲಿ, ನೋಂದಣಿಯಾಗಿದ್ದ 15 ಜೋಡಿ ವಿವಾಹವಾಗಿ ಹೊಸ ದಾಂಪತ್ಯಕ್ಕೆ ಕಾಲಿರಿಸಿದರು.

ಹಿಂದೂ ಸಂಪ್ರದಾಯದಂತೆ, ಪೌರೋಹಿತರ ವೇದ ಮಂತ್ರ ಘೋಷದೊಂದಿಗೆ ನಡೆದ ವಿವಾಹದಲ್ಲಿ ಪಾಲ್ಗೊಂಡಿದ್ದ ವರನಿಗೆ 5 ಸಾವಿರ ರೂ. ಹಾಗೂ ವಧುವಿಗೆ 10 ಸಾವಿರ ರೂ. ಮತ್ತು ಚಿನ್ನದ ತಾಳಿ ಹಾಗೂ ಎರಡು ಚಿನ್ನದ ಗುಂಡು(ಒಟ್ಟು 40 ಸಾವಿರ ರೂ ಮೌಲ್ಯ) ಒಟ್ಟು 55 ಸಾವಿರ ರೂ.ನೀಡಲಾಯಿತು. ಸಾಮೂಹಿಕ ವಿವಾಹಕ್ಕೆ ಆಗಮಿಸುವ ವಧು-ವರ ಮತ್ತು ಅವರ ಬಂಧುಗಳಿಗೆ ಊಟೋಪಚಾರದ ವ್ಯವಸ್ಥೆಯನ್ನು ದೇವಾಲಯದಿಂದ ಆಯೋಜಿಸಲಾಗಿತ್ತು.

ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಬಿ.ಸಿ.ನಾರಾಯಣಸ್ವಾಮಿ, ರಾಜ್ಯ ತೆಂಗಿನ ನಾರಿನ ಸಹಕಾರ ಮಹಾಮಂಡಳಿ ಅಧ್ಯಕ್ಷ ಎಲ್ ಎನ್‌.ವೆಂಕಟೇಶ ಬಾಬು, ಅಪರ ಜಿಲ್ಲಾಧಿಕಾರಿ ವಿಜಯಾ ಈ.ರವಿಕುಮಾರ್‌, ತಹಶೀಲ್ದಾರ್‌ ಮೋಹನ ಕುಮಾರಿ, ಮುಜರಾಯಿ ಇಲಾಖೆಯ ಜಿಲ್ಲಾ ಸಹಾಯಕ ಆಯುಕ್ತರಾದ ಜಿ.ಜೆ.ಹೇಮಾವತಿ, ಮಾಜಿ ಶಾಸಕ ಜೆ.ನರಸಿಂಹಸ್ವಾಮಿ, ಜಿಪಂ ಮಾಜಿ ಸದಸ್ಯ ಎಚ್‌.ಅಪ್ಪಯ್ಯಣ್ಣ, ಗ್ರಾಪಂ ಅಧ್ಯಕ್ಷೆ ಭಾರತಿಬಾಯಿ, ಉಪಾಧ್ಯಕ್ಷ ವಾಸು ದೇವ್‌, ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಟಿ.ವಿ. ಲಕ್ಷ್ಮೀನಾರಾಯಣ್‌, ಘಾಟಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ಯ ನಿರ್ವಾಹಕ ಅಧಿಕಾರಿ ಡಿ.ನಾಗರಾಜು, ಪ್ರಧಾನ ಆರ್ಚಕ ಸುಬ್ಬುಕೃಷ್ಣಶಾಸ್ತ್ರಿ, ಕೆಪಿಸಿಸಿ ಸದಸ್ಯ ಎಸ್‌.ಆರ್‌.ಮುನಿರಾಜು, ಮುಖಂಡ ಜಗನ್ನಾಥಾಚಾರ್‌ ಇದ್ದರು.

ಟಾಪ್ ನ್ಯೂಸ್

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.