ತ್ಯಾಜ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ್ರೆ ಕ್ರಮ

Team Udayavani, Sep 17, 2022, 2:25 PM IST

TDY-7

ದೇವನಹಳ್ಳಿ: ಜಿಲ್ಲೆಯ ಪುರಸಭೆ, ನಗರಸಭೆಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ, ವೈಜ್ಞಾನಿಕ ಘನತ್ಯಾಜ್ಯ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದರೊಂದಿಗೆ, ಸಾರ್ವಜನಿಕರಲ್ಲಿ ತ್ಯಾಜ್ಯ ನಿರ್ವಹಣೆಯ ಬಗ್ಗೆ ಅರಿವು ಮೂಡಿಸಬೇಕು. ತ್ಯಾಜ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್‌.ಲತಾ ಸೂಚಿಸಿದರು.

ತಾಲೂಕಿನ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಘನತ್ಯಾಜ್ಯ ನಿರ್ವ ಹಣೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೆಲವು ಘನತ್ಯಾಜ್ಯ ವಿಲೇವಾರಿ ಘಟಕ ಹೊರತು ಪಡಿಸಿದರೆ ಉಳಿದ ಘನತ್ಯಾಜ್ಯ ವಿಲೇವಾರಿ ಘಟಕಗಳ ನಿರ್ವಹಣೆ ತೃಪ್ತಿದಾಯಕವಾಗಿಲ್ಲ. ಎಲ್ಲಾ ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಅವುಗಳ ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು ಎಂದರು.

ಜನರಿಗೆ ಅರಿವು ಮೂಡಿಸಿ: ಸಾರ್ವಜನಿಕರು ಮನೆಯಲ್ಲಿ ಹಸಿ ಕಸ, ಒಣ ಕಸ ವಿಂಗಡಿಸಬೇಕು. ಕಸವನ್ನು ಎಲ್ಲೆಂದರಲ್ಲಿ ಬಿಸಾಡದೇ ನಗರ ಸ್ಥಳೀಯ ಸಂಸ್ಥೆಗಳ ಕಸದ ವಾಹನಗಳಲ್ಲೇ ಹಾಕಬೇಕು. ಸ್ವತ್ಛತಾ ಕ್ರಮಗಳ ಪಾಲನೆ ಕುರಿತು ಕರಪತ್ರ, ಭಿತ್ತಿ ಪತ್ರಗಳ ಸೇರಿದಂತೆ ಹೆಚ್ಚಿನ ಅರಿವು ಮೂಡಿಸುವ ಕೆಲಸವನ್ನು ನಗರ ಸ್ಥಳೀಯ ಸಂಸ್ಥೆಗಳು ಮಾಡ ಬೇಕು. ನಿಯಮ ಉಲ್ಲಂ ಸಿದ್ದಲ್ಲಿ ಘನತ್ಯಾಜ್ಯ ನಿರ್ವಹಣಾ ನಿಯಮಗಳ ಅನ್ವಯ ಸಾರ್ವಜನಿ ಕರಿಗೆ ದಂಡ ವಿಧಿಸುವಂತೆ ಸೂಚನೆ ನೀಡಿದರು.

ಜವಾಬ್ದಾರಿಯಿಂದ ಕೆಲಸ ನಿರ್ವಹಿಸಿ: ಪೌರ ಕಾರ್ಮಿಕರು ವಾಹನದ ಮೂಲಕ ಮನೆ ಮನೆಗೆ ತೆರಳಿ ಕಸ ಸಂಗ್ರಹಿಸಿಬೇಕು. ಈ ವೇಳೆ ತ್ಯಾಜ್ಯ ಬೇರ್ಪಡಿಸಿಬೇಕು. ಬೀದಿಬದಿ ಹಾಗೂ ಸಂತೆಯ ವ್ಯಾಪಾರಿ ಸಂಜೆ ವೇಳೆ ಕಸವನ್ನು ರಸ್ತೆ ಬದಿಗೆ ಎಸೆದು ಹೋಗುತ್ತಾರೆ. ಇದನ್ನು ನಿಯಂತ್ರಿಸಲು ವ್ಯಾಪಾರಿಗಳಿಗೆ, ಸಾರ್ವಜನಿಕರಿಗೆ ಸ್ವತ್ಛತೆಯ ಕುರಿತು ಅರಿವು ಮೂಡಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು ಎಂದರು.

ನಿಯಮ ಉಲ್ಲಂಘಿಸಿದ್ರೆ ದಂಡ ವಿಧಿಸಿ: ಎಲ್ಲಾ ನಗರಸಭೆ, ಪುರಸಭೆಗಳಲ್ಲಿ ಪಾರ್ಕ್‌ ಉದ್ಯಾನ ವನಗಳಲ್ಲಿ ರಾಸಾಯನಿಕ ಗೊಬ್ಬರ ಬಳಸದಂತೆ ಕ್ರಮವಹಿಸಬೇಕು. ಘನ ತ್ಯಾಜ್ಯ ವಸ್ತು ನಿರ್ವಹಣೆಯಲ್ಲಿ ನಿಯಮ 2016ರಂತೆ ಕ್ರಮ ಕೈಗೊಳ್ಳದೇ ಇದ್ದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಸ್ಥಳೀಯ ಸಂಸ್ಥೆಗಳಿಗೆ ದಂಡ ವಿಧಿಸಬೇಕು ಎಂದರು.

ಅಧಿಕಾರಿಗಳಿಗೆ ನೋಟಿಸ್‌ ಜಾರಿ: ಘನ ತ್ಯಾಜ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿ ಗಳಿಗೆ ಈಗಾಗಲೇ ನೋಟಿಸ್‌ ಜಾರಿ ಮಾಡಲಾಗಿದೆ. ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನರಿತು ಪ್ರಾಮಾ ಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಶಾಲಿನಿ, ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಅಧಿಕಾರಿ ಅನಿಲ್‌ ಕುಮಾರ್‌, ರಮೇಶ್‌. ಕೆ.ಎಂ, ಮರಿಮಾದಯ್ಯ ಹಾಗೂ ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳು, ಹಾಗೂ ಪರಿಸರ ಅಭಿಯಂತರರು ಇದ್ದರು.

ಟಾಪ್ ನ್ಯೂಸ್

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.