ಸಮಸ್ಯೆ ಬಗೆ ಹರಿಸಲು ಶೀಘ್ರದಲ್ಲೇ ಕ್ರಮ


Team Udayavani, Nov 3, 2020, 3:17 PM IST

ಸಮಸ್ಯೆ ಬಗೆ ಹರಿಸಲು ಶೀಘ್ರದಲ್ಲೇ ಕ್ರಮ

ನೆಲಮಂಗಲ: ಪುರಸಭೆ ಉನ್ನತೀಕರಣಗೊಂಡು ನಗರಸಭೆಯಾಗಿ ಬದಲಾವಣೆಯಾದ ನಂತರ ಸೃಷ್ಟಿಯಾದ ಅನೇಕ ಗೊಂದಲಗಳಿಗೆ ಸ್ಪಷ್ಟನೆ ಕೇಳಿ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗಿದೆ. ವಾರ್ಡ್‌ವಾರು ಮರು ವಿಂಗಡಣೆ ಕೆಲಸ ಅಂತಿಮ ಹಂತದಲ್ಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ನಗರಸಭೆ ಆಡಳಿತಾಧಿಕಾರಿ ಪಿ. ಎನ್‌.ರವೀಂದ್ರ ತಿಳಿಸಿದರು.

ನಗರಸಭೆ ಕಚೇರಿಗೆ ಭೇಟಿ ನೀಡಿ ಪೌರಾಯುಕ್ತರು ಹಾಗೂ ನಗರಸಭೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗಳ ಒತ್ತಡದಲ್ಲಿ ಆಡಳಿತಾಧಿಕಾರಿಯಾದ ನಂತರ ನಗರಸಭೆಗೆ ಬರಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಸೋಮವಾರ ನಗರಸಭೆ ವ್ಯಾಪ್ತಿಯ ಪರಿಶೀಲನೆಗಾಗಿ ಬಂದಿದ್ದೇನೆ. ಅನೇಕ ಸಮಸ್ಯೆಗಳನ್ನು ಪಟ್ಟಿ ಮಾಡಿಕೊಂಡಿದ್ದು, ಶೀಘ್ರದಲ್ಲಿ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ನಗರಸಭೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶೀಘ್ರದಲ್ಲಿ ಶಂಕುಸ್ಥಾಪನೆ ಮಾಡಲಿದ್ದು, ಆರಂಭದಲ್ಲಿ 5 ಕೋಟಿ ರೂ. ಹಣ ಬಳಕೆ ಮಾಡಿಕೊಳ್ಳಲಿದ್ದೇವೆ ಎಂದರು.

ಕೆರೆ ಕಾಮಗಾರಿ ಆರಂಭ: ನಗರದಲ್ಲಿನ ಅಮಾನಿಕೆರೆಯಲ್ಲಿ ಗಲೀಜು ನೀರು ತುಂಬಿ ಜನರಿಗೆ ಸಮಸ್ಯೆಯಾಗುತ್ತಿರುವಬಗ್ಗೆ ಮಾಹಿತಿ ಬಂದಿದ್ದು, ಈಗಾಗಲೇ ಸರ್ಕಾರದಿಂದ ಬಿಡುಗಡೆಯಾದ 1 ಕೋಟಿ ರೂ. ಖರ್ಚುಮಾಡಿರುವ ಬಗ್ಗೆ ಮಾಹಿತಿ ತೆಗೆದುಕೊಳ್ಳಲಾಗಿದೆ. ಹಾಗೂಎನ್‌ಪಿಎಯಿಂದ 4 ಕೋಟಿ ಅನುದಾನವಿದ್ದು, ಕೆರೆಯ ಹೂಳೆತ್ತುವುದು, ರಸ್ತೆ,ಸ್ವಚ್ಛತೆ, ಪಾರ್ಕ್‌ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಆರಂಭಿಸಲಾಗುವುದು. ಹಾಗೂ ಸಾಮಾಜಿಕ ಸೇವಾ ಯೋಜನೆಯಡಿ ಯಾವುದಾದರೂ ಸಂಸ್ಥೆಗಳು ಸಹಕರಿಸಿದರೆ, ಕೆರೆಯನ್ನು ಮತ್ತಷ್ಟು ಅಭಿವೃದ್ಧಿ ಮಾಡಲಾಗುತ್ತದೆ ಎಂದರು.

ತನಿಖಾ ಅಧಿಕಾರಿಗಳ ನೇಮಕ: ನಗರಸಭೆ ವ್ಯಾಪ್ತಿಯ ಕಿರು ನೀರು ಸರಬರಾಜು ಕಚೇರಿಯ ಆವರಣದಲ್ಲಿದ್ದ ಮರಗಳನ್ನು ಅಧಿಕಾರಿಗಳಿಗೆ ಮಾಹಿತಿ ನೀಡದೇ ತೆರವು ಮಾಡಿರುವ ಬಗ್ಗೆ “ಉದಯವಾಣಿ’ ಸುದ್ದಿ ಪ್ರಕಟ ಮಾಡಿದ ಬೆನ್ನಲ್ಲೆ ತನಿಖಾ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಅಂತಿಮ ವರದಿಯ ನಂತರ ಅದರಲ್ಲಿ ಪಾಲುದಾರರಾದ ಪ್ರತಿಯೊಬ್ಬರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಗೊಂದಲ ಬೇಡ: ಆಡಳಿತ ಮಂಡಳಿ ಸಭೆಯಾಗುವರೆಗೂ ಯಾರು ಸದಸ್ಯರಾಗಿ ಅಧಿಕಾರ ಚಲಾಯಿಸುವಂತಿಲ್ಲ. ಈ ಪ್ರಕರಣ ನ್ಯಾಯಾಲಯದಲ್ಲಿರುವ ಕಾರಣ ಜಿಲ್ಲಾಧಿಕಾರಿಯಾದ ನಮ್ಮನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿದ್ದು, ಯಾವುದೇ ತೀರ್ಮಾನ ಗಳನ್ನು ಅಧಿಕಾರಿಗಳೆ ಮಾಡುತ್ತಾರೆ. ಇದರ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಸಾರ್ವಜನಿಕರಿಗೆ ಮಾಹಿತಿ ನೀಡಿದರು.

ಈ ವೇಳೆ ನಗರಸಭೆ ಪೌರಾಯುಕ್ತ ಎಲ್‌. ಮಂಜುನಾಥ್‌ ಸ್ವಾಮಿ, ಕಂದಾ ಯ ಅಧಿಕಾರಿ ಸವಿತಾ. ನಗರಸಭೆ ಅಭಿ ಯಂತರ ಎಂ.ಬಿ.ನಾಗರಾಜ್‌, ಸಾರ್ವ ಜನಿಕರು ಉಪಸ್ಥಿತರಿದ್ದರು.

ಸಾರ್ವಜನಿಕರ ಸಮಸ್ಯೆಗೆ ಸ್ಪಂದನೆ :  ನಗರಸಭೆ ಆಡಳಿತಾಧಿಕಾರಿಯಾದ ನಂತರ ತಾಲೂಕಿಗೆ ಮೊದಲ ಬಾರಿ ಆಗಮಿಸಿದ ಜಿಲ್ಲಾಧಿಕಾರಿಗಳು ಸೋಮವಾರ ಬೆಳಗ್ಗೆ 10 ಗಂಟೆಗೆ ಸುಮಾರಿಗೆ ನಗರಸಭೆ ಕಚೇರಿಗೆ ಆಗಮಿಸಿ 1 ಗಂಟೆ ವರೆಗೂ ಅಧಿಕಾರಿಗಳ ಜತೆ ಚರ್ಚೆ ನಡೆಸಿ, ನಂತರ ನಗರಸಭೆ ವ್ಯಾಪ್ತಿಯ ಕೆರೆಗಳು ಹಾಗೂ ಸಾರ್ವಜನಿಕರ ದೂರಿನ ಮೇರೆಗೆ ವಿವಿಧ ಪ್ರದೇಶಗಳನ್ನು ಪರಿಶೀಲನೆ ನಡೆಸಿ ಸಂಪೂರ್ಣ ನಗರಸಭೆ ವ್ಯಾಪ್ತಿಯ ಪ್ರದೇಶಗಳನ್ನು ಸುತ್ತುವ ಮೂಲಕ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿದರು.

ಟಾಪ್ ನ್ಯೂಸ್

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.