ಡ್ರೋನ್ ಬಳಕೆಯಿಂದ ಕೃಷಿಯಲ್ಲಿ ಕೂಲಿ ಸಮಸ್ಯೆ ನಿವಾರಣೆ
Team Udayavani, May 22, 2022, 12:04 PM IST
ದೊಡ್ಡಬಳ್ಳಾಪುರ: ಕೃಷಿಯಲ್ಲಿ ಡ್ರೋನ್‌ಗಳ ಬಳಕೆಯಿಂದ ಕೂಲಿ ಆಳು ಸಮಸ್ಯೆ ನಿವಾರಣೆಯಾಗುವುದರ ಜೊತೆಗೆ ಸಂಪನ್ಮೂಲಗಳ ಸಮರ್ಪಕ ಬಳಕೆಯಿಂದ ರಸಗೊಬ್ಬರ ಮತ್ತು ನೀರಿನ ಬಳಕೆ ಕಡಿಮೆ ಮಾಡಿ ಅಧಿಕ ಉತ್ಪಾದನೆಯನ್ನು ಪಡೆಯಬಹುದು ಎಂದು ಕೃಷಿ ಇಲಾಖೆ ಅಪರ ಕೃಷಿ ನಿರ್ದೇಶಕ ವೆಂಕಟರಾಮ ರೆಡ್ಡಿ ಪಾಟೀಲ್ ಹೇಳಿದರು.
ತಾಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ವಿಜ್ಞಾನ ಕೇಂದ್ರ, ಇಫ ಸಂಸ್ಥೆ, ಕೃಷಿ ಇಲಾಖೆ ಸಹಯೋಗದಲ್ಲಿ ನಡೆದ ಡ್ರೋನ್ ಪೈಲಟ್‌ಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನ ಮಂತ್ರಿಗಳ ಆಶಯದಂತೆ ಆತ್ಮನಿರ್ಭರ ಕೃಷಿಗೆ, ಕೃಷಿಯಲ್ಲಿ ಡ್ರೋನ್‌ಗಳ ಬಳಕೆ ಬಹಳಉಪಕಾರಿಯಾಗಿದೆ. ನ್ಯಾನೋ ರಸಗೊಬ್ಬರಗಳಬಳಕೆಗೆ ಡ್ರೋನ್ ಬಹಳ ಪರಿಣಾಮಕಾರಿಯಾಗಿದೆ ಎಂದು ತಿಳಿಸಿದರು.
ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ: ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಎ.ಪಿ. ಮಲ್ಲಿಕಾರ್ಜುನ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವೈಜ್ಞಾನಿಕ ಆವಿಷ್ಕಾರ ಮತ್ತು ಆಧುನಿಕ ಸ್ಪರ್ಶದಿಂದ ಕೂಡಿದ ಡ್ರೋನ್ ಮುಂದಿನ ದಿನಗಳಲ್ಲಿ ಕೃಷಿಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ಮಾಡುತ್ತದೆ. ದೇಶದ ರಸಗೊಬ್ಬರ ಸ್ವಾವಲಂಬನೆಗೆ ಅನುಕೂಲ ಆಗಲಿದೆ. 500 ಮಿ.ಲೀ. ನ್ಯಾನೋ ಯೂರಿಯಾ, 45 ಕಿ.ಗ್ರಾಂ. ಯೂರಿಯಾ ಗೊಬ್ಬರ (1 ಚೀಲ)ಕ್ಕೆ ಸಮವಾಗಿರುತ್ತದೆ ಎಂದರು.
ತರಬೇತಿ ಕಾರ್ಯಕ್ರಮ: ಸರ್ಕಾರವು ಪ್ರತಿ ಚೀಲ ಯೂರಿಯಾ ರಸಗೊಬ್ಬರದ ಮೇಲೆ 1,500 ರೂ.ನಿಂದ 3,500ವರೆಗೆ ಸಹಾಯಧನ ನೀಡಿ, ಯೂರಿಯಾ ರಸಗೊಬ್ಬರ ಗರಿಷ್ಠ ಮಾರಾಟ ದರವನ್ನು 266 ರೂ.ಗಳಿಗೆ ಪ್ರತಿ ಚೀಲಕ್ಕೆ ನಿಗದಿಪಡಿಸಿದೆ. ಈ ನಿಟ್ಟಿನಲ್ಲಿ ಕೃಷಿ ವಿಜ್ಞಾನ ಕೇಂದ್ರ, ಕೃಷಿ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಜೂನ್ 3ರವರೆಗೆ ಡ್ರೋನ್ ಪೈಲಟ್‌ಗಳ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.
ತರಬೇತಿ ಕಾರ್ಯಕ್ರಮದಲ್ಲಿ ಇಫ್ಕೋ ಸಂಸ್ಥೆಯ ಕರ್ನಾಟಕ ರಾಜ್ಯ ಮಾರಾಟ ವ್ಯವಸ್ಥಾಪಕ ಡಾ. ಸಿ. ನಾರಾಯಣಸ್ವಾಮಿ, ಜಿಲ್ಲಾ ಕೃಷಿ ಉಪ ನಿರ್ದೇಶಕಿ ವಿನುತಾ, ಕೃಷಿ ಇಲಾಖೆಯ ದೊಡ್ಡಬಳ್ಳಾಪುರ ತಾಲೂಕು ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ, ಇಫ್ಕೋ ಸಂಸ್ಥೆ,ಯ ಚೇತನ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.