ಏಡ್ಸ್- ಎಚ್‌ಐವಿ ಸೋಂಕಿತರಿಗೂ ಬದುಕುವ ಹಕ್ಕಿದೆ
Team Udayavani, Dec 2, 2020, 11:41 AM IST
ದೇವನಹಳ್ಳಿ: ಎಚ್‌ಐವಿ ಏಡ್ಸ್ ರೋಗಿಗಳಿಗೂ ಸಮಾಜದಲ್ಲಿ ಸಾಮಾನ್ಯ ಜನರಂತೆ ಬದುಕುವ ಹಕ್ಕಿದೆ. ಇಂತಹ ರೋಗಿಗಳ ವ್ಯಾಜ್ಯಗಳನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಉಚಿತವಾಗಿ ನಡೆಸಿಕೊಡಲಾಗುತ್ತದೆ ಎಂದು ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಆರ್.ನಟೇಶ್ ತಿಳಿಸಿದರು.
ದೇವನಹಳ್ಳಿ ತಾಲೂಕಿನ ಜಿಲ್ಲಾಡಳಿತ ಭವನದ ಜಿಪಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಡಿ.1 ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಜಿಲ್ಲಾಮಟ್ಟದ ವಿಶ್ವ ಏಡ್ಸ್‌ದಿನಾಚರಣೆ-2020ಕಾರ್ಯಕ್ರಮಉದ್ಘಾಟಿಸಿ ಮಾತನಾಡಿದರು. ಎಚ್‌ಐವಿ ಸೋಂಕಿತರನ್ನು ಮತ್ತು ವಿಕಲ ಚೇತನರನ್ನುಕೀಳಾಗಿ ಕಂಡರೆ, ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಎಚ್‌ಐವಿ ಸೋಂಕಿತರು ಮತ್ತು ವಿಕಲ ಚೇತನರು ಸಾಮಾನ್ಯರಂತೆ ಮುಖ್ಯ ವಾಹಿನಿಗೆ ಬರುವಂತಹ ನಿಟ್ಟಿನಲ್ಲಿ ಜಾಗೃತಿ ಮೂಡಿಸಿ, ಸಮುದಾಯದ ಬದಲಾವಣೆಯಲ್ಲಿ
ಭಾಗಿಯಾಗಬೇಕು. ಅನೈತಿಕ ದೈಹಿಕ ಸಂಬಂಧದಿಂದ ಏಡ್ಸ್ ಸೋಂಕು ಹರಡಬಹುದು. ಮುಂಜಾಗ್ರತಾ ಕ್ರಮಗಳಿಂದ ಇದನ್ನು ತಡೆಗಟ್ಟಬಹುದಾಗಿದೆ. ಏಡ್ಸ್ ಗುಣಲಕ್ಷಣಗಳು ಹಾಗೂ ನಿಯಂತ್ರಣಕ್ಕೆಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ, ಜನರಲ್ಲಿ ಏಡ್ಸ್ ಆಂದೋಲನ ಹಮ್ಮಿಕೊಂಡು ಅರಿವು ಮೂಡಿಸುವ ಪ್ರಯತ್ನ ಎಲ್ಲರಿಂದಲೂ ಆಗಬೇಕು. ಇಂದಿನ ಯುವಕರು ವೈಯಕ್ತಿಕ, ಕೌಟುಂಬಿಕ ಹಾಗೂ ಸಾಮಾಜಿಕ ಹಂತದಲ್ಲಿ ಏಡ್ಸ್ ತಡೆಗಟ್ಟುವಿಕೆಯಲ್ಲಿ ಎಚ್ಚೆತ್ತಕೊಂಡರೆ, ಆರೋಗ್ಯವಂತ ಸಮಾಜ ಸಾಧ್ಯ ಎಂದರು.
ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ್ ಮಾತನಾಡಿ, ಎಚ್‌ಐವಿ ಸೋಂಕಿತರಿಗೆ ಧೈರ್ಯ ತುಂಬುವಕೆಲಸ ಮಾಡಬೇಕು ಎಂದರು. ಜಿಪಂ ಸಿಇಒ ಎನ್.ಎಂ.ನಾಗರಾಜ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಶಕೀಲ, ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀನಿವಾಸ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.