ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ: ಡೀಸಿ

Team Udayavani, Sep 23, 2019, 3:00 AM IST

shantiyuta

ದೇವನಹಳ್ಳಿ: ಜಿಲ್ಲೆಯ ಹೊಸಕೋಟೆ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವುದರಿಂದ ಜಿಲ್ಲಾದ್ಯಂತ ಮಾದರಿ ನೀತಿ ಸಂಹಿತೆ ಚುನಾವಣಾ ಪ್ರಕ್ರಿಯೆ ಮುಗಿಯುವರೆಗೆ ಚಾಲ್ತಿಯಲ್ಲಿರುತ್ತದೆ ಎಂದು ಜಿಲಾಧಿಕಾರಿ ಎನ್‌. ರವೀಂದ್ರ ತಿಳಿಸಿದರು. ತಾಲೂಕಿನ ಚಪ್ಪರದ ಕಲ್ಲು ಸರ್ಕಲ್‌ ಬಳಿ ಇರುವ ಜಿಲ್ಲಾ ಸಂಕೀರ್ಣದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಸಂಬಂಧಿಸಿದಂತೆ ರಾಜಕೀಯ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು.

ಅ.21ಕ್ಕೆ ಮತದಾನ: ಸೆ.23ಕ್ಕೆ ಅಧಿಸೂಚನೆ ಹೊರಡಿಸಲಾಗಿದ್ದು, ಸೆ.30 ನಾಮ ಪತ್ರ ಸ್ವೀಕರಿಸಲು ಕೊನೆಯ ದಿನವಾಗಿದೆ. ಅ.1 ರಂದು ನಾಮ ಪತ್ರ ಪರಿಶೀಲನೆ, ನಾಮಪತ್ರ ಹಿಂಪಡೆಯಲು ಅ.3 ಕೊನೆಯ ದಿನವಾಗಿದ್ದು, ಅ.21 ರಂದು ಮತದಾನ ನಡೆಯಲಿದೆ. ಅ.24ಕ್ಕೆ ಮತ ಎಣಿಕೆ ನಡೆಯಲಿದೆ. ಬೆಂ.ಗ್ರಾಮಾಂತರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿದೇಶಕ ಹನುಮಂತ ರಾಯಪ್ಪ ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿಯಾಗಿ ಹೊಸಕೋಟೆ ತಾಲೂಕಿನ ತಹಶೀಲ್ದಾರ್‌ ಕಾರ್ಯ ನಿರ್ವಹಿಸಲಿದ್ದಾರೆ ಎಂದರು.

286 ಮತಗಟ್ಟೆ ಸ್ಥಾಪನೆ: ಚುನಾವಣಾಧಿಕಾರಿ ಅವರ ಕೇಂದ್ರ ಕಚೇರಿ ಕಾರ್ಯ ಸ್ಥಳ, ನಾಮ ಪತ್ರ ಇತ್ಯಾದಿ ಪ್ರಕ್ರಿಯೆಗಳು ಹೊಸಕೋಟೆ ಮಿನಿ ವಿಧಾನ ಸೌಧ ಕಟ್ಟಡ , ತಾಲೂಕು ಕಚೇರಿ ಆಗಿರುತ್ತದೆ. ಹೊಸಕೋಟೆ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 1,07,766 ಪುರುಷರು, 1,04,954 ಮಹಿಳೆಯರು, 26 ಇತರರು ಸೇರಿ ಒಟ್ಟು 2,12,748 ,ಮತದಾರರು ಇದ್ದಾರೆ. ಉಪ ಚುನಾವಣೆಯಲ್ಲಿ 286 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಗ್ರಾಮಾಂತರ ವ್ಯಾಪ್ತಿಯಲ್ಲಿ 237, ನಗರ ವ್ಯಾಪ್ತಿಯಲ್ಲಿ 49 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಮತದಾನಕ್ಕೆ ಬಿ ಇಎಲ್‌ ಸಂಸ್ಥೆಯು ಎಮ್‌ 03 ಮಾದರಿಯ ಇವಿಎಮ್‌ಗಳನ್ನು ಬಳಸಿಕೊಳ್ಳಲಾಗುವುದು ಎಂದು ತಿಳಿಸಿದರು.

ಕಟ್ಟು ನಿಟ್ಟಿನ ಕ್ರಮ: ರಾಜಕೀಯ ಪಕ್ಷಗಳ ಮುಖಂಡರು ತಮ್ಮ ಬೂತ್‌ ಮಟ್ಟದ ಪದಾಧಿಕಾರಿಗಳ ಪಟ್ಟಿಗಳನ್ನು ನೀಡಬೇಕು. ವಾಹನಗಳಿಗೆ ಹಾಗೂ ಕಾರ್ಯಕ್ರಮಗಳಿಗೆ ಅನುಮತಿ ಪಡೆಯಬೇಕು. ಹೊಸಕೋಟೆ ಮತ್ತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯ ವಾಣಿ ಕೇಂದ್ರಗಳನ್ನು ತೆರೆಯಲಾಗುವುದು. ಶಾಂತಿಯುತ ಮತದಾನಕ್ಕೆ ಎಲ್ಲಾ ರೀತಿಯ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸರ್ಕಾರ ವಿವಿಧ ಕಾರ್ಯಕ್ರಮಗಳ ಬ್ಯಾಂನರ್‌, ಪೋಸ್ಟರ್‌ಗಳನ್ನು ತೆಗೆಯಬೇಕು. ಯಾವುದೇ ಟೆಂಡರ್‌ ಪ್ರಕ್ರಿಯೆ ಮಾಡಬಾರದು.

ಪ್ರವಾಸಿ ಮಂದಿರಕ್ಕೆ ರಾಜಕೀಯ ವ್ಯಕ್ತಿಗಳು ಬರದಂತೆ ನಿಷೇಧ ಮಾಡಲಾಗುತ್ತಿದೆ. ಜಿಲ್ಲೆಯ ಅಧಿಕಾರಿಗಳು ಯಾವುದೇ ಕಾರ್ಯಕ್ರಮ ಆಯೋಜಿಸುವಂತಿಲ್ಲ ಎಂದು ಸೂಚನೆ ನೀಡಿದರು. ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಅಭ್ಯರ್ಥಿಯ ಚುನಾವಣಾ ವೆಚ್ಚವನ್ನು 28 ಲಕ್ಷ ರೂ.ಗಳಿಗೆ ಸೀಮಿತ ಗೊಳಿಸಲಾಗಿದೆ. ಸಾರ್ವತ್ರಿಕ ಚುನಾವಣೆ ನೀತಿಯಂತೆ ಉಪ ಚುನಾವಣೆಗೂ ಮಾದರಿ ನೀತಿ ಸಂಹಿತೆ ತಂಡಗಳನ್ನು ರಚಿಸಿ ಕಾರ್ಯೋನ್ಮುಖ ಗೊಳಿಸಲಾಗುವುದು ಎಂದು ಹೇಳಿದರು.

ಎಸ್ಪಿ ರವಿ ಡಿ. ಚನ್ನಣ್ಣನವರ್‌ ಮಾತನಾಡಿ, ಹೊಸಕೋಟೆ ವಿಧಾನ ಸಭಾ ಕ್ಷೇತ್ರದ 5 ಕಡೆ ಚೆಕ್‌ಪೋಸ್ಟ್‌ ನಿರ್ಮಿಸಲಾಗುತ್ತದೆ. 491 ಪರವಾನಗಿ ಗನ್‌ಗಳನ್ನು ಆಯಾ ಪೋಲೀಸ್‌ ಠಾಣೆಗಳಲ್ಲಿ ಠೇವಣಿ ಇರಿಸಲಾಗಿದೆ. 469 ರೌಡಿ ಶೀಟರ್‌ಗಳನ್ನು ಗುರುತಿ ಅವರ ಚಲನವಲನಗಳ ಮೇಲೆ ನಿಗಾ ವಹಿಸಲಾಗಿದೆ. ಕ್ಷೇತ್ರದ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು. ಈ ವೇಳೆ ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್‌ ಕೆ ನಾಯ್ಕ , ಉಪ ವಿಭಾಗಾಧಿಕಾರಿ ಮಂಜುನಾಥ್‌, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

* ಒಟ್ಟು ಮತದಾರರು 2,12,748
* ಪುರುಷರು 1,07,766
* ಮಹಿಳೆಯರು 1,04,954
* ಇತರರು 26

ಟಾಪ್ ನ್ಯೂಸ್

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.