ಮೈತ್ರಿ ಧರ್ಮ ಪಾಲನೆಯಿಂದ 28 ಸ್ಥಾನ ಗೆಲ್ಲಲು ಸಾಧ್ಯ

Team Udayavani, Apr 13, 2019, 3:00 AM IST

maitri

ದೊಡ್ಡಬಳ್ಳಾಪುರ: ಮೈತ್ರಿ ಧರ್ಮ ಪಾಲನೆ ಮಾಡಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಟ್ಟು ರಾಜ್ಯದಲ್ಲಿ 28 ಸ್ಥಾನಗಳನ್ನು ಗಳಿಸಲು ಸಾಧ್ಯವಿದೆ ಎಂದು ಮಾಜಿ ಶಾ ಸಕ ಹಾಗೂ ಹಿರಿಯ ಕಾಂಗ್ರೆಸ್‌ ಮು ಖಂಡ ಆರ್‌.ಜಿ.ವೆಂಕಟಾಚಲಯ್ಯ ಅಭಿಪ್ರಾಯಪಟ್ಟರು.

ತಾಲೂಕಿನ ಮಧುರೆ, ದೊಡ್ಡಬೆಳವಂಗಲ,ಸಾಸಲು,ಕೊನಘಟ್ಟ,ಬಾಶೆಟ್ಟಹಳ್ಳಿ ವ್ಯಾಪ್ತಿಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಂ.ವೀರಪ್ಪ ಮೊಯ್ಲಿ ಪರ ಮತಯಾಚನೆ ಮಾಡಿ ಅವರು ಮಾತನಾಡಿದರು.

ಭಿನ್ನಾಭಿಪ್ರಾಯ ಮರೆತು ಕೆಲಸ ಮಾಡಿ: ಕಾಂಗ್ರೆಸ್‌, ಜೆಡಿಎಸ್‌ ಮುಖಂಡರು ಹಾಗೂ ಕಾರ್ಯಕರ್ತರು ಭಿನ್ನಾಭಿಪ್ರಾಯಗಳನ್ನು ಮರೆತು ಪ್ರಾಮಾಣಿಕವಾಗಿ ಚುನಾವಣೆಯಲ್ಲಿ ಒಂದಾಗಿ ಮತಯಾಚನೆ ಮಾಡಬೇಕೆಂದು ಕಿವಿಮಾತು ಹೇಳಿದರು.

ಮೊಯ್ಲಿ ಗೆಲುವಿಗೆ ಕೈಜೋಡಿಸಿ: ಶಾಸಕ ಟಿ.ವೆಂಕಟರಮಣಯ್ಯ ಮಾ ತ ನಾ ಡಿ, ಬಯಲು ಸೀಮೆಯ ನೀರಿನ ಬವಣೆ ನೀಗಲು ಎಂ.ವೀರಪ್ಪ ಮೊಯ್ಲಿ ಆಯ್ಕೆ ಮಾಡಬೇಕಾಗಿರುವುದು ಮತದಾರ ಜವಾಬ್ದಾರಿ. ಕಳೆದ ಹತ್ತು ವರ್ಷಗಳಿಂದ ಸಂಸದರಾಗಿರುವ ವೀರಪ್ಪ ಮೊಯ್ಲಿ ಅವರು ಬಯಲು ಸೀಮೆಯ ನೀರಿನ ಬವಣೆ ನೀಗಲು ಎತ್ತಿನಹೊಳೆ ಯೋಜನೆಯನ್ನು ಪೂರ್ಣಗೊಳಿಸಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರ ಪ್ರಯತ್ನಕ್ಕೆ ಎಲ್ಲರೂ ಕೈಜೋಡಿಸಬೇಕೆಂದು ಮನವಿ ಮಾಡಿದರು.

ಕಾಂಗ್ರೆಸ್‌ ಋಣ ತೀರಿಸಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೆಡಿಎಸ್‌ ಅಧ್ಯಕ್ಷ ಬಿ.ಮುನೇಗೌಡ ಮಾತನಾಡಿ, 70ಕ್ಕೂ ಹೆಚ್ಚು ಸ್ಥಾನ ಪಡೆದಿದ್ದರು 37 ಸ್ಥಾನ ಪಡೆದ ಜೆಡಿಎಸ್‌ನ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ ಕಾಂಗ್ರೆಸ್‌ ಪಕ್ಷದ ಋಣವನ್ನು ತಾಲೂಕಿನ ಜೆಡಿಎಸ್‌ ಮತದಾರರು ಮೈತ್ರಿ ಅಭ್ಯರ್ಥಿಗೆ ಮತ ನೀಡಿ ತೀರಿಸಬೇಕಿದೆ.

ತನ್ನ ಸ್ವ ಕ್ಷೇತ್ರದಲ್ಲಿ ವಿರೋಧವಿದ್ದರೂ ಇಲ್ಲಿನ ಜನತೆಯ ನೀರಿನ ಬವಣೆ ನೀಗಿಸಲು ಭಗೀರಥ ಪ್ರಯತ್ನ ನಡೆಸುತ್ತಿರುವ ವೀರಪ್ಪ ಮೊಯ್ಲಿ ಕಾರ್ಯ ಪ್ರಶಂಸನೀಯವಾಗಿದೆ. ತುಮಕೂರಿನಲ್ಲಿ ದೇವೇಗೌಡ ಹಾಗೂ ಚಿಕಬಳ್ಳಾಪುರದಲ್ಲಿ ವೀರಪ್ಪ ಮೊಯ್ಲಿ ಗೆದ್ದಾಗ ಮಾತ್ರ ಈ ವ್ಯಾಪ್ತಿಯಲ್ಲಿನ ನೀರಿನ ಸಮಸ್ಯೆ ಬಗೆಹರಿಯಲು ಸಾಧ್ಯವೆಂದರು.

ನೀರಿನ ಬವಣೆ ನೀಗಿಸಲು ಪಣ: ಅಭ್ಯರ್ಥಿ ಡಾ.ಎಂ.ವೀರಪ್ಪ ಮೊಯ್ಲಿ ಮಾತನಾಡಿ, ಬಯಲು ಸೀಮೆಗೆ ನೀರು ಹಸಿರುವುದನ್ನು ತಡೆಯಲು ಬಿಜೆಪಿ ಅನೇಕ ಪ್ರಯತ್ನ ನಡೆಸುತ್ತಿದೆ. ಎತ್ತಿನಹೊಳೆ ಯೋಜನೆ ವಿರುದ್ಧ ಹೋರಾಟಕ್ಕೆ ಬೆಂಬಲ, ಕೆ.ಸಿ.ವ್ಯಾಲಿ ಮುಂತಾದ ಯೋಜನೆಗಳಿಗೆ ಅಡ್ಡಿಪಡಿಸುತ್ತಿದೆ.

ಆದರೆ, ಯಾವುದೇ ಅಡ್ಡಿ ಎದುರಾದರೂ ಎರಡು ವರ್ಷದಲ್ಲಿ ಕ್ಷೇತ್ರಕ್ಕೆ ಎತ್ತಿನಹೊಳೆ ನೀರನ್ನು ಹರಿಸುವುದು ನನ್ನ ಪ್ರಥಮ ಆದ್ಯತೆಯಾಗಿದೆ. ನನಗೆ ಅಧಿಕಾರದ ಅವಶ್ಯಕತೆಯಿಲ್ಲ. ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವನಾಗಿ, ಸಂಸದನಾಗಿ ಹೀಗೆ ಅನೇಕ ಹುದ್ದೆಯನ್ನು ಅನುಭವಿಸಿದ್ದೇನೆ. ಆದರೆ, ನನ್ನ ಕ್ಷೇತ್ರದ ಜನತೆಯ ನೀರಿನ ಬವಣೆ ತೀರಿಸಬೇಕೆನ್ನುವುದೇ ನನ್ನ ಗುರಿಯಾಗಿದೆ ಎಂದರು.

ಜಿಪಂ ಅಧ್ಯಕ್ಷೆ ಜಯಮ್ಮಲಕ್ಷಿನಾರಾಯಣ್‌, ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್‌, ಜೆಡಿಎಸ್‌ ತಾಲೂಕು ಅಧ್ಯಕ್ಷ ಎಂ.ಲಕ್ಷಿಪತಯ್ಯ, ಸ್ಥಾಯಿ ಸಮಿತಿ ಸದಸ್ಯ ಚುಂಚೇಗೌಡ, ತಾಪಂ ಸದಸ್ಯರಾದ ಶಂಕರಪ್ಪ, ಚನ್ನಮ್ಮ ಮಾಜಿ ಸದಸ್ಯ ದಯಾನಂದಸ್ವಾಮಿ,

ಸಾಮಾಜಿಕ ಜಾಲತಾಣ ಸಂಚಾಲಕ ಕಿರಣ್‌ ವಿ.ಗೌಡ, ಯುವ ಘಟಕದ ಪ್ರಧಾನ ಕಾರ್ಯದರ್ಶಿ ಮಲ್ಲೋಹಳ್ಳಿ ಪುನಿತ್‌, ಮುಖಂಡರಾದ ಪುಷ್ಪಾ, ರೇವತಿ, ರಾಜಗೋಪಾಲ್‌, ರಾಮಣ್ಣ, ಮುನಿಶ್ಯಾಮಣ್ಣ, ಬೈರೇಗೌಡ, ದೇವರಾಜಮ್ಮ, ಕೃಷ್ಣಮೂರ್ತಿ, ಲಕ್ಷಿನಾರಾಯಣ, ವಿಶ್ವನಾಥರೆಡ್ಡಿ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

16-onion

Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.