520 ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ
Team Udayavani, Apr 12, 2021, 12:02 PM IST
ನೆಲಮಂಗಲ: ಪ್ರತಿ ತಾಲೂಕಿಗೆ 130ರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 520 ಗ್ರಾಮಗಳಲ್ಲಿ ಡಾ.ಬಿ. ಆರ್.ಅಂಬೇಡ್ಕರ್ 130ನೇ ಜನ್ಮ ದಿನವನ್ನು ಆಚರಣೆ ಮಾಡಲಾಗುತ್ತಿದೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಎಂ.ಎನ್.ರಾಮ್ ತಿಳಿಸಿದರು.
ತಾಲೂಕಿನ ಡಾ.ಬಿಆರ್ ಅಂಬೇಡ್ಕರ್ ನಗರದಲ್ಲಿ ಬಿಜೆಪಿ ಎಸ್ಸಿ ಮೋರ್ಚಾದಿಂದಆಯೋಜಿಸಿದ್ದ 130ನೇ ಡಾ.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರನ್ನು ಸನ್ಮಾನಿಸಿಮಾತನಾಡಿ, ಪ್ರತಿ ತಾಲೂಕಿನಲ್ಲಿ 130ಗ್ರಾಮಗಳಲ್ಲಿ ಸರಳವಾಗಿ ಅಂಬೇಡ್ಕರ್‌ಜಯಂತಿ ಆಚರಣೆ ಮಾಡಲಾಗುತ್ತಿದೆ.ಈ ಮೂಲಕ “ಮಹಾನಾಯಕನ’ ಸೇವಯನ್ನು ನೆನೆಯಲಾಗುತ್ತಿದೆ ಎಂದು ಹೇಳಿದರು.
ಕಾಂಗ್ರೆಸ್ 1950 ಮತ್ತು 1952ರಲ್ಲಿದೇಶದ ಸಾರ್ವತ್ರಿಕ ಚುನಾವಣೆಯಲ್ಲಿ ಅಂಬೇಡ್ಕರ್ ಅವರನ್ನು ಸೋಲಿಸಿತು, ಅವರ ಮರಣ ನಂತರ ನವದೆಹಲಿಯಲ್ಲಿ ಶವಸಂಸ್ಕಾರಕ್ಕೆ ಅವಕಾಶ ನೀಡಲಿಲ್ಲ, ಇದು ಕಾಂಗ್ರೆಸ್ ಕೊಡುಗೆ.ಪ್ರಧಾನಿ ನರೇಂದ್ರ ಮೋದಿ ಅಂಬೇಡ್ಕರ್‌ಅವರ ಸೇವೆಗಾಗಿ ಪಂಚತೀರ್ಥ ಕ್ಷೇತ್ರಗಳನ್ನು ಮಾಡಿ, ಜನರ ಮನಸ್ಸಿನಲ್ಲಿ ಸಂವಿಧಾನ ಶಿಲ್ಪಿ ಸದಾ ನೆಲೆನಿಲ್ಲುವಂತೆ ಮಾಡಿದ್ದಾರೆ ಎಂದು ತಿಳಿಸಿದರು.
ಬಿಜೆಪಿ ತಾಲೂಕು ಕಾರ್ಯದರ್ಶಿ ರವಿಕುಮಾರ್, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಸೈಯದ್ ಅಹಮದ್,ನಗರ ಶಕ್ತಿಕೇಂದ್ರದ ಅಧ್ಯಕ್ಷ ರವಿ,ಮಾಧ್ಯಮ ಪ್ರಮುಖ್ ಸಿದ್ದರಾಜು, ನಗರಸಭೆ ನಾಮ ನಿರ್ದೇಶನ ಸದಸ್ಯೆರಾಜಮ್ಮ, ಯುವಮೋರ್ಚಾ ತಾಲೂಕುಅಧ್ಯಕ್ಷ ವಿಜಯಕುಮಾರ್, ಮುಖಂಡ ಮುನಿರಾಮಣ್ಣ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.