ಕೆಎಂಎಫ್ ನಿರ್ದೇಶಕರಾಗಿ ಆನಂದ್ ಕುಮಾರ್ ಆಯ್ಕೆ
Team Udayavani, Jun 15, 2019, 12:58 PM IST
ಕೆಎಂಎಫ್ ನೂತನ ನಿರ್ದೇಶಕರಾದ ದೊಡ್ಡಬಳ್ಳಾಪುರದ ಬಿ.ಸಿ.ಆನಂದ್ ಕುಮಾರ್ ಅವರನ್ನು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅಭಿನಂದಿಸಿದರು.
ದೊಡ್ಡಬಳ್ಳಾಪುರ: ತಾಲೂಕಿನ ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಅವರು ಕರ್ನಾಟಕ ಸಹಕಾರ ಹಾಲು ಮಹಾ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾ ವಣೆಯಲ್ಲಿ 14 ನಿರ್ದೇಶಕರ ಪೈಕಿ 8 ಮತಗಳನ್ನು ಪಡೆಯುವ ಮೂಲಕ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
ಕೆಎಂಎಫ್ ನಿರ್ದೇಶಕ ಸ್ಥಾನಕ್ಕೆ ಆಯ್ಕೆಮಾಡುವ ಮೂಲಕ ಜವಾಬ್ದಾರಿ ಹೆಚ್ಚಾಗಿದೆ. ಮಹಾ ಮಂಡಳಿಯಿಂದ ರೈತರಿಗೆ ಹಾಗೂ ಬೆಂಗಳೂರು ಹಾಲು ಒಕ್ಕೂಟಕ್ಕೆ ದೊರೆಯುವ ಸೌಲಭ್ಯಗಳನ್ನು ತರುವ ಮೂಲಕ ಜಿಲ್ಲೆಯಲ್ಲಿ ಹೈನು ಗಾರಿಕೆ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಕೆ.ಎಂ.ಎಫ್ ನೂತನ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಹೇಳಿದರು.
ಕೆಎಂಎಫ್ ನೂತನ ನಿರ್ದೇಶಕರನ್ನು ಸಚಿವ ಡಿ.ಕೆ.ಶಿವಕುಮಾರ್, ಶಾಸಕ ಟಿ.ವೆಂಕಟರಮಣಯ್ಯ, ಮಾಜಿ ಶಾಸಕ ಆರ್.ಜಿ.ವೆಂಕಟಾಚಲಯ್ಯ, ಕೆಪಿಸಿಸಿ ಸದಸ್ಯರಾದ ಎಂ.ಜಿ.ಶ್ರೀನಿವಾಸ್, ಜಿ.ಲಕ್ಷ್ಮೀ ಪತಿ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಮ್ಮ, ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ಜಿಲ್ಲಾ ಪಂಚಾಯ್ತಿ ಸದಸ್ಯ ಜಿ.ಚುಂಚೇಗೌಡ, ತಾಲೂಕು ಪಂಚಾಯ್ತಿ ಅಧ್ಯಕ್ಷ ಎಚ್.ವಿ.ಶ್ರೀವತ್ಸ, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಎಂ.ಬೈರೇಗೌಡ, ನಗರ ಬ್ಲಾಕ್ ಅಧ್ಯಕ್ಷ ಕೆ.ಜಿ.ಅಶೋಕ್, ಕಸಬಾ ಬ್ಲಾಕ್ ಅಧ್ಯಕ್ಷ ವೆಂಕಟೇಶ್, ತೂಬಗೆರೆ ಬ್ಲಾಕ್ ಅಧ್ಯಕ್ಷ ಎನ್.ರಂಗಪ್ಪ, ಎಪಿಎಂಸಿ ನಿರ್ದೇಶಕ ಮಂಜುನಾಥ್, ಟಿಎಪಿಎಂಸಿಎಸ್ ನಿರ್ದೇಶಕ ಎಂ.ಗೋವಿಂದರಾಜು, ಮುಖಂಡರಾದ ಆರ್.ವಿ.ಗೌಡ, ಆರ್.ಸಿ. ರಾಲಿಂಗಯ್ಯ, ಅರಳುಮಲ್ಲಿಗೆ ವೆಂಕಟೇಶ್ ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.