ಮೂರು ಕ್ಷೇತ್ರದಲ್ಲಿ ಹೊಸಬರಿಗೆ ಬಿಜೆಪಿ ಮಣೆ
Team Udayavani, Apr 13, 2023, 2:13 PM IST
ದೇವನಹಳ್ಳಿ: ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಬಿಜೆಪಿ ಚುನಾವಣಾ ಹುರಿಯಾಳುಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು ಚುನಾವಣೆಯ ರಂಗು ಕಾವೇರತೊಡಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳು ಬರಲಿದ್ದು ಅದರಲ್ಲಿ ಎರಡು ವಿಧಾನಸಭಾ ಕ್ಷೇತ್ರವು ಮೀಸಲು ಕ್ಷೇತ್ರಗಳಾಗಿದ್ದು ಇನ್ನೆರಡು ಸಾಮಾನ್ಯ ಕ್ಷೇತ್ರಗಳಾಗಿವೆ. ದೇವನಹಳ್ಳಿ ವಿಧಾನಸಭಾ ಮೀಸಲು ಕ್ಷೇತ್ರದಿಂದ ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ, ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ಸಚಿವ ಎಂಟಿಬಿ ನಾಗರಾಜ್, ನೆಲಮಂಗಲ ವಿಧಾನಸಭಾ ಮೀಸಲು ಕ್ಷೇತ್ರದಿಂದ ಸಪ್ತಗಿರಿ ನಾಯಕ್, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಧೀರಜ್ ಮುನಿರಾಜು ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.
ಎಂಟಿಬಿ ನಾಗರಾಜ್ ಬಿಟ್ಟು ಎಲ್ಲಾ ಹೊಸಮುಖಗಳು: ಜಿಲ್ಲೆಯ ಕ್ಷೇತ್ರಗಳಿಗೆ ಘೋಷಿಸಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಪೌರಾ ಡಳಿತ ಸಚಿವ ಹಾಗೂ ಹಾಲಿ ವಿದಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಹೊರತುಪಡಿಸಿದರೆ ಉಳಿದವರೆಲ್ಲಾ ಹೊಸಬರು ಎನ್ನುವುದು ವಿಶೇಷ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಅವರಿಗೆ ಜೆಡಿಎಸ್ ನಿಂದ ಬಿ ಫಾರ್ಮ್ ನೀಡಲಾಗಿತ್ತು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಎಲ್.ಎನ್.ನಾರಾಯಣಸ್ವಾಮಿ ಸಿ.ಫಾರ್ಮ್ ನೀಡಲಾಗಿತ್ತು. ಕಳೆದ ಒಂದು ವರ್ಷದ ಹಿಂದೆ ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಬಿಜೆಪಿಗೆ ಸೇರ್ಪಡೆ ಗೊಂಡಿದ್ದರು. ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಸಪ್ತಗಿರಿ ನಾಯಕ್ ಕಾಂಗ್ರೆಸ್ ಪಕ್ಷದಲ್ಲಿ ಇದ್ದರು.
ಬಿಜೆಪಿ ಸೇರ್ಪಡೆಗೊಂಡನಂತರ ಅವರಿಗೆ ಟಿಕೆಟ್ ನೀಡಲಾಗಿದೆ. ನೆಲಮಂಗಲಕ್ಕೆ ಹೊಸ ಅಭ್ಯರ್ಥಿ ಯನ್ನು ಕಣಕ್ಕೆ ಇಳಿಸಿದ್ದಾರೆ. ದೊಡ್ಡಬಳ್ಳಾಪುರ ದಲ್ಲಿ ಸಮಾಜ ಸೇವಕರಾಗಿ ಹಾಗೂ ಫಲಾನುಭವಿಗಳ ಪ್ರಕೋಷ್ಟದ ಸಂಚಾಲಕರಾಗಿದ್ದ ಧೀರಜ್ ಮುನಿ ರಾಜ್ ಅವರಿಗೆ ಟಿಕೆಟ್ ವರಿಷ್ಟರು ನೀಡಿದ್ದಾರೆ. ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಎಂಟಿಬಿ ನಾಗರಾಜ್ ಪುತ್ರ ನಿತೀಶ್ ಪುರುಷೋತ್ತಮ್ ಅವರಿಗೆ ಟಿಕೆಟ್ ನೀಡಬೇಕು ಎಂದು ವರಿಷ್ಟರಲ್ಲಿ ಮನವಿ ಮಾಡಿದ್ದರು. ಎಂಟಿಬಿ ನಾಗರಾಜ್ ಅವರಿಗೆ ಟಿಕೆಟ್ ಖಾತರಿಪಡಿಸಿದ್ದಾರೆ. ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಶರತ್ ಬಚ್ಚೇಗೌಡ ವಿರುದ್ಧ ಸೋಲು ಅನುಭವಿಸಿದರು.ಅಭ್ಯರ್ಥಿಗಳು ಪೈನಲ್ ಆಗಿರುವುದರಿಂದ ಮೂರು ಪಕ್ಷಗಳಲ್ಲೂ ಗರಗೆದರಿದ ರಾಜಕೀಯ ಚಟುವಟಿಕೆಗಳು ನಡೆಯುತ್ತಿದೆ. ಬಿಜೆಪಿ ಟಿಕೆಟ್ ಕುತೂಹಲ ಪ್ರತಿಯೊಬ್ಬರಲ್ಲೂ ಇತ್ತು.
ಕಮಲ ಅರಳಿಸಲು ಸಾಕಷ್ಟು ಪ್ರಯತ್ನ : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಳೆದ ಎರಡು ಚುನಾವಣೆಗಳಿಂದ ಬಿಜೆಪಿ ಶಾಸಕರು ಗೆದ್ದಿಲ್ಲ. ಈ ಬಾರಿ ಕಮಲ ಅರಳಿಸಲು ಸಾಕಷ್ಟು ಪ್ರಯತ್ನವನ್ನು ಮಾಡುತ್ತಿದ್ದಾರೆ. 2008ರಲ್ಲಿ ನೆಲಮಂಗಲ, ದೊಡ್ಡಬಳ್ಳಾಪುರ, ಹೊಸಕೋಟೆ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಗೆದ್ದಿದ್ದರು. ತದನಂತರ ಚುನಾವಣೆಗಳಲ್ಲಿ ಬಿಜೆಪಿ ಶಾಸಕರು ಗೆದ್ದಿಲ್ಲ. ನೆಲಮಂಗಲ ಮತ್ತು ದೇವನಹಳ್ಳಿಗಳಲ್ಲಿ ಜೆಡಿಎಸ್ ಶಾಸಕರು ಗೆದ್ದಿದ್ದಾರೆ. ದೊಡ್ಡಬಳ್ಳಾಪುರ ಮತ್ತು ಹೊಸಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಗೆದ್ದಿದ್ದಾರೆ. ಈ ಬಾರಿ ಯಾವುದೇ ಕ್ಷೇತ್ರದಲ್ಲಿ ಪ್ರಯೋಗ ಮಾಡುವುದು ಬೇಡ. ಗೆಲ್ಲುವ ನಿರೀಕ್ಷೆಯಿರುವ ಸಮರ್ಥ ಅಭ್ಯರ್ಥಿ ಯನ್ನೇ ಕಣಕ್ಕೆ ಬಿಡಬೇಕೆಂಬ ಅಂತಿಮ ತೀರ್ಮಾನ ಸ್ಪಷ್ಟಗೊಂಡಿದೆ.
– ಎಸ್.ಮಹೇಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.