ಸರ್ಕಾರಿ ಯೋಜನೆ ಅರಿವಿಗೆ ಜನ ಜಾಗೃತಿ

Team Udayavani, Aug 29, 2019, 3:00 AM IST

sarkari

ದೇವನಹಳ್ಳಿ: ಆರೋಗ್ಯ, ಜಲ ಸಂರಕ್ಷಣೆ, ಸ್ವತ್ಛತೆ ಸೇರಿದಂತೆ ಸರ್ಕಾರದ ಪ್ರಮುಖ ಯೋಜನೆಗಳ ಕುರಿತು ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು 2 ದಿನಗಳ ಕಾಲ ಜನ ಜಾಗೃತಿ ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ತಿಳಿಸಿದರು. ತಾಲೂಕಿನ ಚಪ್ಪರದ ಕಲ್ಲು ಸರ್ಕಲ್‌ ಬಳಿ ಇರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನ ಒಳಾವರಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕುಡಿಯುವ ನೀರು, ನೈರ್ಮಲ್ಯ, ಆರೋಗ್ಯ ಕಾರ್ಯಕ್ರಮಗಳ ಕುರಿತಂತೆ ಆಯೋಜಿಸಲಾಗಿದ್ದ ಜನ ಜಾಗೃತಿ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.

ಸರ್ಕಾರಿ ಕಾರ್ಯಕ್ರಮ ಜನರಗೆ ತಲುಪಲಿ: ಸರ್ಕಾರದ ಪ್ರತಿಯೊಂದು ಕಾರ್ಯಕ್ರಮವು ಜನರಗೆ ತಲುಪಬೇಕು. ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ತಿಳಿಯಲು ಹಾಗೂ ಅನುಷ್ಠಾನಗಳ ಬಗ್ಗೆ ಮಾಹಿತಿ ಇರಬೇಕು. ಶಾಲಾ ಮಕ್ಕಳು ಈ ಜನಜಾಗೃತಿ ವಸ್ತು ಪ್ರದರ್ಶನದ ಮೂಲಕ ಅವರಲ್ಲಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಹೆಚ್ಚಿನ ಜ್ಞಾನಾರ್ಜನೆ ಹಾಗೂ ಪೋಷಕರಿಗೆ ತಿಳಿ ಹೇಳಲು ಅನುಕೂಲವಾಗುವುದು. ಚಿತ್ರಗಳ ಮೂಲಕ ಮಕ್ಕಳಿಗೆ ತಿಳಿಸುವ ಪ್ರಯತ್ನವನ್ನು ಮಾಡಲಾಗುತ್ತಿದೆ. ನಾವು ಓದುವ ಸಂದರ್ಭದಲ್ಲಿ ಇಂತಹ ಚಿತ್ರಗಳನ್ನು ನೋಡಿರುವುದನ್ನು ಇಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು.

ಪ್ರದರ್ಶನದಲ್ಲಿ ಉತ್ತಮ ಮಾಹಿತಿ ಅಳವಡಿಕೆ: ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ, ಸಂಪೂರ್ಣ ಲಸಿಕೆ-ಪರಿಪೂರ್ಣ ಆರೋಗ್ಯ, ಪೌಷ್ಟಿಕ ಆಹಾರ, ಪುನಶ್ಚೇತನ ಕೇಂದ್ರಗಳು, ಎಲ್ಲರಿಗೂ ಆರೋಗ್ಯ ಎಲ್ಲೆಡೆ ಆರೋಗ್ಯ, ರಕ್ತ ಹೀನತೆಯನ್ನು ತಡೆಗಟ್ಟುವಿಕೆ, ತುರ್ತು ಸಂದರ್ಭದಲ್ಲಿ ಜೀವ ರಕ್ಷಣೆಗೆ 108ಕ್ಕೆ ಉಚಿತ ಕರೆ ಮಾಡುವುದು, ಕ್ಷಯ ರೋಗ, ಮಾನಸಿಕ ಕಾಯಿಲೆ ರೋಗಗಳ ಉಲ್ಬಣಕ್ಕೆ ಕಾರಣಗಳು ಮತ್ತು ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳು, ಆರೋಗ್ಯ ಇಲಾಖೆಯ ಸೇವೆಗಳು ಹಾಗೂ ನೀರಿನ ಸಂರಕ್ಷಣೆ, ಶೌಚಾಲಯದ ಬಳಕೆ, ಕಸ ವಿಂಗಡಣೆ ಮಹತ್ವ ಸೇರಿದಂತೆ ಸಾಕಷ್ಟು ವಿಚಾರಗಳಿಗೆ ಸಂಬಂಧಿಸಿದಂತೆ ಅರಿವು ಮೂಡಿಸುವ ಉತ್ತಮ ಮಾಹಿತಿಗಳನ್ನು ಪ್ರದರ್ಶನದಲ್ಲಿ ಅಳವಡಿಸಲಾಗಿದೆ ಎಂದು ಹೇಳಿದರು.

ಮಾಹಿತಿ ಫಲಕ ಪ್ರದರ್ಶನ: ಜನಜಾಗೃತಿ ವಸ್ತು ಪ್ರದರ್ಶನದಲ್ಲಿ ನೀರು ಉಳಿಸಿ- ಹಸಿರು ಬೆಳೆಸಿ, ಸಮೃದ್ಧ ಕರ್ನಾಟಕದ ನಿರ್ಮಾಣಕ್ಕೆ ದೃಢ ಹೆಜ್ಜೆಗಳು, ಉಚಿತ ಆರೋಗ್ಯ ಸಹಾಯವಾಣಿ-104, ಮೀನುಗಾರರ ಸಾಲಮನ್ನಾ ಅಭಿವೃದ್ಧಿಯೇ ಆಡಳಿತ ಮಂತ್ರ, ಶೌಚಾಲಯದ ಬಳಕೆ ಬಗ್ಗೆ ಅರಿವು, ಸ್ವಚ್ಛಾಲಯ-ಶೌಚಾಲಯ, ಕಾಂಗರೂ ಮಾದರಿ ಮಗುವಿನ ಆರೈಕೆ, ತಾಯಿ ಕಾರ್ಡ್‌, ಆಸ್ಪತ್ರೆಯಲ್ಲೇ ಹೆರಿಗೆ ಮಾಡಿಸಿಕೊಳ್ಳಿ, ಜನನಿ-ಶಿಶು ಸುರಕ್ಷಾ ಕಾರ್ಯಕ್ರಮಗಳು ತಾಯಂದಿರ ಸಂಪೂರ್ಣ ವಾತ್ಸಲ್ಯ ಕಾರ್ಯಕ್ರಮಗಳು, ನವಜಾತ ಶಿಶುಗಳ ಆರೈಕೆ, ಮಾನಸಿಕ ಆರೋಗ್ಯ, ತುರ್ತು ವೈದ್ಯಕೀಯ ಸೇವೆ, ಜಲ ಸಂರಕ್ಷಣೆ ಸೇರಿದಂತೆ ಬಹಳಷ್ಟು ವಿಚಾರಗಳ ಬಗ್ಗೆ ಜಾಗೃತಿ ಮತ್ತು ಮಾಹಿತಿ ನೀಡುವ ಪ್ರದರ್ಶನ ಫಲಕಗಳನ್ನು ಪ್ರದರ್ಶಿಸಲಾಗಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ವಿನುತಾ ರಾಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಎಸ್‌.ಶಂಕರಪ್ಪ, ಸಹಾಯಕ ನಿರ್ದೇಶಕ ಮಹೇಶ್‌ ಎನ್‌.ಎಸ್‌. ಸೇರಿದಂತೆ ವಿವಿಧ ಶಾಲಾ-ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸರ್ಕಾರದ ಕಾರ್ಯಕ್ರಮಗಳು ಪರಿಚಯವಾಗುವ ಮೂಲಕ ಯೋಜನೆಗಳನ್ನು ಬಳಸಿಕೊಳ್ಳುವ ಬಗ್ಗೆ ಅರಿವು ಮೂಡಿಸುವುದು ಅವಶ್ಯವಿದೆ. ಇದಕ್ಕೆ ಬೇಕಾದ ಎಲ್ಲಾ ರೀತಿಯ ಮಾಹಿತಿಗಳನ್ನು ಜನ ಜಾಗೃತಿ ವಸ್ತು ಪ್ರದರ್ಶನದ ಮೂಲಕ ಜನರಿಗೆ ಅರಿವು ಮೂಡಿಸಲಾಗುತ್ತಿದೆ. ವಿಚಾರಗಳನ್ನು ತಿಳಿದುಕೊಳ್ಳುವುದರ ಜೊತೆಗೆ ಹಲವು ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತಿದೆ.
-ಪಿ.ಎನ್‌.ರವೀಂದ್ರ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.