
ಆಯುಷ್ಮಾನ್ ಭಾರತ್ ಬಡವರ ಪಾಲಿನ ಸಂಜೀವಿನಿ: ನಾಗೇಶ್
Team Udayavani, Sep 27, 2019, 3:14 PM IST

ಆನೇಕಲ್: ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯು ಬಡವರ ಪಾಲಿನ ಸಂಜೀವಿನಿಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಗುಡ್ಡಹಟ್ಟಿ ನಾಗೇಶ್ ರೆಡ್ಡಿ ತಿಳಿಸಿದರು. ತಾಲೂಕಿನ ನೆರಳೂರು ಗ್ರಾಮದಲ್ಲಿ ಅರ್ಹ ಪಲಾನುಭಗಳಿಗೆ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯಆರೋಗ್ಯ ಕಾರ್ಡ್ ಗಳನ್ನು ವಿತರಿಸಿ ಮಾತನಾಡಿದರು.
ಈ ಯೋಜನೆಯಲ್ಲಿ ಪ್ರತಿ ವರ್ಷ ಬಿಪಿಎಲ್ ಕುಟುಂಬಗಳಿಗೆ 5 ಲಕ್ಷ ರೂ. ವರೆಗೆ ಉಚಿತ ಚಿಕಿತ್ಸೆ ಹಾಗೂ ಎಪಿಎಲ್ ಕುಟುಂಬಗಳಿಗೆ ಸರ್ಕಾರಿ ಪ್ಯಾಕೇಜ್ ದರದಲ್ಲಿ ಶೇ 30 ರಷ್ಟು ವೆಚ್ಚ ಲಭ್ಯವಿದೆ ಎಂದರು. ಈ ಯೋಜನೆಯಲ್ಲಿ ಕಾರ್ಡ್ ಪಡೆದರು ನಿಗದಿತಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯ ಬಹುದಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ನೆರಳೂರು ಮಲ್ಲಿಕಾರ್ಜುನ್, ನೆರಳೂರು ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಶಶಿ ಮತ್ತಿತರು ಇದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.