ಕಾನೂನು ಸೇವೆಗಳ ಬೃಹತ್ ಶಿಬಿರದಲ್ಲಿ ಅರಿವು ಮೂಡಿಸಿ
Team Udayavani, Nov 10, 2019, 3:00 AM IST
ದೇವನಹಳ್ಳಿ: ಕಾನೂನು ಸೇವೆಗಳ ಬೃಹತ್ ಶಿಬಿರವನ್ನು ಜಿಲ್ಲೆಯಲ್ಲಿ ಏರ್ಪಡಿಸಿ ವಿವಿಧ ಇಲಾಖೆಗಳಿಂದ ನೀಡಲಾಗುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಕುರಿತು ಜನರಿಗೆ ಮಾಹಿತಿ ನೀಡುವ ಮೂಲಕ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಸೂಚಿಸಿದರು.
ತಾಲೂಕಿನ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರಿಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ಕಾನೂನು ಸೇವೆಗಳ ಬೃಹತ್ ಶಿಬಿರ ಆಯೋಜಿಸಲು ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿವಿಧ ಇಲಾಖೆಗಳಿಂದ ಲಭ್ಯವಿರುವ ಸೇವಾ ಸೌಲಭ್ಯದ ಯೋಜನಾ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡುವ ಪವರ್‌ಪಾಯಿಂಟ್ ಪ್ರಸೆಂಟೇಷನ್ ಮತ್ತು ಇಲಾಖೆಯ ಆಶಯಗಳನ್ನು ತಿಳಿಸುವ ಕರಪತ್ರಗಳನ್ನು ಮುದ್ರಿಸಿ, ಆಯಾ ಇಲಾಖೆಗಳ ವತಿಯಿಂದ ಸ್ಟಾಲ್‌ಗಳನ್ನು ನಿರ್ಮಿಸಿ ಜನರಿಗೆ ಸಂಪೂರ್ಣ ಮಾಹಿತಿ ನೀಡುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರಲ್ಲದೆ ಶಿಬಿರ ನಡೆಯುವ ದಿನಾಂಕ ಹಾಗೂ ಸ್ಥಳವನು ಶೀಘ್ರದಲ್ಲೇ ತಿಳಿಸಲಾಗುವುದು ಎಂದರು.
ಕಾನೂನು ಸೇವೆಗಳ ಪ್ರಾಧಿಕಾರದ ಬೃಹತ್ ಶಿಬಿರದಲ್ಲಿ ಶಿಕ್ಷಣ, ಕೃಷಿ, ಆರೋಗ್ಯ ಮೊದಲಾದ ಇಲಾಖೆಗಳ ವತಿಯಿಂದ ಇರುವಂತಹ ಕಾರ್ಯಕ್ರಮಗಳು ಮತ್ತು ಯೋಜನೆಗಳು, ಹಿರಿಯ ನಾಗರೀಕರಿಗೆ ಮತ್ತು ನಿರಾಶ್ರಿತರಿಗೆ ಲಭ್ಯವಿರುವ ಪುನರ್ವಸತಿ ಸೌಲಭ್ಯದ ಬಗ್ಗೆ ಮಾಹಿತಿ ನೀಡಿ, ವೃದ್ಯಾಪ್ಯ ಜೀವನದಲ್ಲಿ ಮಕ್ಕಳು ಸರಿಯಾಗಿ ನೋಡಿಕೊಳ್ಳದೇ ಇದ್ದಲ್ಲಿ ಕಾನೂನಾತ್ಮಕವಾಗಿ ದಾವೆ(ದೂರು) ಸಲ್ಲಿಸುವುದರ ಬಗ್ಗೆ ಹಾಗೂ ಅಸಂಘಟಿತ ಕಾರ್ಮಿಕರಿಗೆ ಇರುವಂತಹ ಸೇವಾ ಕಾರ್ಯಕ್ರಮಗಳ ಬಗ್ಗೆ ಹೆಚ್ಚು ಒತ್ತು ನೀಡಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಗಮನ ಹರಿಸಿ, ವಿವಿಧ ಇಲಾಖೆಗಳು ಅರ್ಥಪೂರ್ಣವಾಗಿ ಕಾರ್ಯಕ್ರಮ ರೂಪಿಸಿ ಶಿಬಿರದ ಉದ್ದೇಶ ಮತ್ತು ಆಶಯಗಳನ್ನು ತಿಳಿಸಲು ಸಿದ್ಧರಾಗಬೇಕೆಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಜಗದೀಶ್ ಕೆ ನಾಯ್ಕ, ಜಿ.ಪಂ. ಉಪಕಾರ್ಯದರ್ಶಿ ಕೆ. ಕರಿಯಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.