ಬೆಂ.ಗ್ರಾಮಾಂತರ ಕೋವಿಡ್ ಪರೀಕ್ಷೆ ಹೆಚ್ಚಳ
ಐಸೊಲೇಷನ್‌ನಲ್ಲಿ ಇರುವವರ ಆರೋಗ್ಯ ವಿಚಾರಣೆ
Team Udayavani, Oct 21, 2020, 1:34 PM IST
ದೇವನಹಳ್ಳಿ: ನಗರದ ವಿವಿಧ ವಾರ್ಡ್‌ಗಳಲ್ಲಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಐಸೊಲೇಷನ್‌ನಲ್ಲಿ ಇರುವವರ ಜಾಗೃತಿ ಬಗ್ಗೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಪರಿಶೀಲಿಸಿ ಮಾಹಿತಿ ಪಡೆದುಕೊಂಡರು.
ಈ ವೇಳೆ ಮಾತನಾಡಿದ ಅವರು, ಕೋವಿಡ್ ಸೋಂಕು ನಿಯಂತ್ರಿಸಲು ಹಲವಾರು ರೀತಿಯ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ. ಅನೇಕ ಕ್ರಮಗಳನ್ನು ಕೈಗೊಂಡು ಕೊರೊನಾ ನಿಯಂತ್ರಣಕ್ಕೆ ಶ್ರಮಿಸಲಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸುತ್ತಿದ್ದೇವೆ ಎಂದರು.
ಶೇ.100ರಷ್ಟು ಗುರಿ: ಜಿಲ್ಲೆಯಲ್ಲಿ ಶೇ.98.30ರಷ್ಟು ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ. ಪ್ರತಿದಿನ1,800 ಆರ್‌ಟಿಪಿಸಿಆರ್ ಟೆಸ್ಟ್ ಮತ್ತು 700 ರ್ಯಾಪಿಡ್ ಟೆಸ್ಟ್ ಮಾಡಲಾಗುತ್ತಿದ್ದು, ಶೇ.100ರಷ್ಟು ಗುರಿ ಹೊಂದಿದ್ದೇವೆ. ಇದರಿಂದ ಸೋಂಕಿತ ವ್ಯಕ್ತಿಗೆ ಪಾಸಿಟಿವ್ ಕಂಡು ಬಂದರೆ,ಕೂಡಲೇ ಆಸ ³ತ್ರೆಗೆ ಸೇರಿ ಗುಣಮುಖರಾಗಲು ಸಹಕಾರಿಯಾಗುತ್ತದೆ ಎಂದರು.
ಆರೋಗ್ಯ ತಪಾಸಣೆ: ಕೆಲವು ಜನರು ಹೋಂಐಸೊಲೇಷನ್‌ನಲ್ಲಿದ್ದು, ಅವರನ್ನು ಭೇಟಿ ಮಾಡಿ, ಅವರ ಆರೋಗ್ಯ ತಪಾಸಣೆಗೊಳಿಸುವ ಕಾರ್ಯಚರಣೆ ಮಾಡಿ, ಅವರ ಜೊತೆ ಸಂಪರ್ಕದಲ್ಲಿರು ವವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿ ಅವರನ್ನು ಸಹ ಕ್ವಾರೆಂಟೈನ್‌ನಲ್ಲಿಯೇ ಇರುವಂತೆ ನೋಡಿಕೊಳ್ಳಲಾಗುತ್ತಿದೆ. ಅವರ ಮೇಲೆ ನಿಗಾ ವಹಿಸಲು ತಂಡ ರಚನೆ ಮಾಡಲಾಗಿದೆ. ಆರೋಗ್ಯದಲ್ಲಿ ಸಮಸ್ಯೆ ಕಂಡುಬಂದಲ್ಲಿ ಟಿಎಚ್‌ಒ ಮೂಲಕ ಅವರಿಗೆ ಹೆಚ್ಚಿನ ಸಹಕಾರ ನೀಡಲಾಗುತ್ತದೆ ಎಂದು ಹೇಳಿದರು.
ಲ್ಯಾಬ್‌ಗಳು ಸಶಕ್ತ: ಜಿಲ್ಲೆಯಲ್ಲಿ ಇಂತಹ ಕಾರ್ಯಚರಣೆ ಮಾಡುತ್ತಿರುವುದರಿಂದ ಸಾವಿನ ಪ್ರಕರಣಗಳು ಕಡಿಮೆಯಾಗುತ್ತಿವೆ. ಪರೀಕ್ಷೆಗಳನ್ನು ಹೆಚ್ಚಿಸಿರುವುದರಿಂದ ಕಳೆದ 5 ದಿನಗಳಿಂದ 0.6ರಷ್ಟು ಸಾವಿನ ಪ್ರಕರಣ ವರದಿಯಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಲು ಲ್ಯಾಬ್‌ಗಳು ಸಶಕ್ತವಾಗಿವೆ. ಬೇಗ ವರದಿ ಬರುವಂತೆ ನೋಡಿಕೊಳ್ಳ ಬೇಕಿದ್ದು, ಸಮಸ್ಯೆ ಪರಿಹಾರದ ಕಾರ್ಯಗಳನ್ನು ಮಾಡಲಾಗುತ್ತಿದೆ. ಐಸೊಲೇಷನ್‌ನಲ್ಲಿ ಇರುವವರ ಮಾಹಿತಿಯನ್ನು ಪಡೆಯಲು ಆ್ಯಪ್‌ನಲ್ಲಿ ಅಪ್ ಲೋಡ್ ಮಾಡುವಂತೆ ಸೂಚಿಸಲಾಗಿದೆ ಎಂದರು.ಈ ವೇಳೆಯಲ್ಲಿ ಅಪರ ಜಿಲ್ಲಾಧಿಕಾರಿ ಜಗದೀಶ್ ಕೆ.ನಾಯಕ್, ಡಿಎಚ್‌ಒ ಮಂಜುಳಾದೇವಿ, ತಹಶೀಲ್ದಾರ್ ಅಜಿತ್‌ಕುಮಾರ್ ರೈ, ಟಿಎಚ್‌ಒ ಸಂಜಯ್, ಪುರಸಭೆ ಮುಖ್ಯಾಧಿಕಾರಿ ಎ.ಎಚ್. ನಾಗರಾಜ್, ಪುರಸಭೆ ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತೆರು ಆಶಾ ಕಾರ್ಯ ಕರ್ತೆಯರು ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.