ವಿದ್ಯುತ್ ಖಾಸಗೀಕರಣಕ್ಕೆ ಬೆಸ್ಕಾಂ ನೌಕರರ ವಿರೋಧ
Team Udayavani, Oct 6, 2020, 12:33 PM IST
ದೊಡ್ಡಬಳ್ಳಾಪುರ: ವಿದ್ಯುತ್ ವಲಯದಲ್ಲಿ ಖಾಸಗೀಕರಣ ವಿರೋಧಿಸಿ ಕರ್ನಾಟಕ ವಿದ್ಯುತ್ ಸರಬರಾಜು ಕಂಪನಿಗಳ ಗುತ್ತಿಗೆ ನೌಕರರ ಸಂಘದ ಸದಸ್ಯರು ಸೋಮವಾರ ಕಪ್ಪುಪಟ್ಟಿ ಧರಿಸಿ ಬೆಸ್ಕಾಂ ಕಚೇರಿ ಮುಂದೆ ಸಾಂಕೇಕವಾಗಿ ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ, ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಎಚ್.ಮುತ್ತುರಾಜ್, ಕಾರ್ಯದರ್ಶಿ ರಘುನಂದನ್, ಚಿಕ್ಕಪ್ಪ, ನಗರ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಎನ್.ರೋಹಿತ್, ಗ್ರಾಮೀಣ ಭಾಗದ ಎಂಜಿನಿಯರ್ ಸಿ.ಮೋಹನ್, ಕೇಂದ್ರ ಸರ್ಕಾರ ವಿದ್ಯುತ್ ಕಂಪನಿಗಳನ್ನು ಖಾಸಗೀ ಕರಣ ಮಾಡುತ್ತಿರುವುದು ನೌಕರರ ಸೇವಾ ಭದ್ರತೆಗೆ ಅಪಾಯ ಎದುರಾಗಲಿದೆ. ಸರ್ಕಾರಿ ಸ್ವಾಮ್ಯದಲ್ಲಿದ್ದ ಕಂಪನಿಗಳು ಖಾಸಗೀಕರಣಗೊಂಡ ನಂತರ ಅಲ್ಲಿನ ನೌಕರರ ಸೇವಾ ಭದ್ರತೆ ಯಾವ ಮಟ್ಟಕ್ಕೆ ತಲುಪಿದೆ ಎನ್ನುವುದು ಈಗಾಗೇ ಸಾಬೀತಾಗಿದೆ ಎಂದು ಹೇಳಿದರು.
ಕರ್ನಾಟಕ ಸರ್ಕಾರವೂ ಸೇರಿದಂತೆ ಹಲವು ರಾಜ್ಯಗಳು ಈ ಕಾಯ್ದೆ ವಿರೋಧ ವ್ಯಕ ¤ಪಡಿಸಿದ್ದವು. ಆದರೆ ಕೇಂದ್ರ ಸರ್ಕಾರ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ತರದೆ, ವಿದ್ಯುತ್ ವಿತರಣಾ ಕಂಪೆನಿಗಳನ್ನು ಖಾಸಗೀಕರಣಗೊಳಿಸಲು ಮುಂದಾಗಿದೆ. ವಿದ್ಯುತ್ ವಿತರಣೆ ಖಾಸಗೀಕರಣನಿಂದ ಸರ್ಕಾರ ನೀಡುತ್ತಿರುವ ಸಾಮಾಜಿಕ ಕಾರ್ಯ ಕ್ರಮಗಳಾದ ಕೃಷಿ ಕ್ಷೇತ್ರಕ್ಕೆ ನೀಡುತ್ತಿರುವ ಉಚಿತ ವಿದ್ಯುತ್ ಮತ್ತು ರಿಯಾಯಿತಿಗಳು ರದ್ದಾಗಲಿವೆ. ಹೋರಾಟಕ್ಕೆ ನಮ್ಮ ರಾಜ್ಯ ನೌಕರರು ಸಹಮತ ಸೂಚಿಸಿ ಬೆಂಬಲ ಸೂಚಿಸಿದ್ದಾರೆ. ಈ ನಿಟ್ಟಿನಲ್ಲಿ ಕೆಲಸಕ್ಕೆ ಹಾಜರಾಗಿ ಕಪ್ಪು ಪಟ್ಟಿ ಧರಿಸಿ ಖಾಸಗೀಕರಣಕ್ಕೆ ವಿರೋಧ ವ್ಯಕ್ತಪಡಿಸಲಾಗಿದೆ ಎಂದರು. ಪ್ರತಿಭಟನೆಯಲ್ಲಿ ಉಪವಿಭಾಗದ ಎಲ್ಲಾ ಕಾರ್ಯ ಮತ್ತು ಪಾಲನಾ ಘಟಕದ ಅಧಿಕಾರಿಗಳು, ನೌಕರರು, ಮಾಪಕ ಓದುಗರು ಹಾಗೂ ಗ್ರಾಮ ವಿದ್ಯುತ್ ಪ್ರತಿನಿಧಿಗಳು ಭಾಗವಹಿಸಿದ್ದರು.
ರಿಯಾಯಿತಿ ದರದಲ್ಲಿ ವಿದ್ಯುತ್ ಸಿಗಲ್ಲ : ಮುನಿಆಂಜಿನಪ್ಪ :
ನೆಲಮಂಗಲ: ವಿದ್ಯುತ್‌ಖಾಸಗೀಕರಣದಿಂದ ಗ್ರಾಹಕರು ಹಾಗೂ ನೌಕರರಿಗೆ ಸಮಸ್ಯೆಯಾಗುತ್ತದೆ ಎಂದು ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಮುನಿಆಂಜಿ ನಪ್ಪ ಹೇಳಿದ್ದಾರೆ.
ನಗರದ ಕೆಇಒ ಕಚೇರಿ ಆವರಣದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ ಹಾಗೂ ಬೆಸ್ಕಾಂ ನೌಕರರುಕೈಗೊಂಡ ಪ್ರತಿಭಟನೆಯಲ್ಲಿ ಮಾತನಾಡಿದರು. ರಾಜ್ಯ ಸರಕಾರದ ವಿರುದ್ದ ಘೋಷಣೆ ಕೂಗಿ ಪ್ರತಿಭಟನೆ ಮಾಡಿದರು.
ಖಾಸಗೀಕರಣದಿಂದ ಕಂಪನಿಯವರು ಹೇಳುವ ಬೆಲೆ ನೀಡುವ ಅನಿವಾರ್ಯತೆ ಎದುರಾಗಲಿದ್ದು, ಈಗ ಕೆಲಸ ನಿರ್ವಹಿಸುವ ಸಾವಿರಾರು ನೌಕರರು ಉದ್ಯೋಗ ಕಳೆದುಕೊಳ್ಳಲಿದ್ದಾರೆ. ರಾಜ್ಯದಲ್ಲಿ ಉತ್ತಮವಾಗಿ ವಿದ್ಯುತ್ ಪ್ರಸರಣಾ ವ್ಯವಸ್ಥೆ ಇದ್ದು, ಭಾಗ್ಯ ಜ್ಯೋತಿ, ರೈತರ ಕೊಳವೆ ಭಾವಿ ಸೇರಿದಂತೆ ವಿವಿಧ ಯೋಜನೆಗಳಲ್ಲಿ ನೀಡುವ ರಿಯಾಯಿತಿ ಹಣವನ್ನು ಸರಕಾರ ತಡವಾಗಿ ನೀಡಿದರೂ ವಿದ್ಯುತ್ ಸರಬರಾಜು ಮಾಡಲಾಗುತಿದೆ.ಖಾಸಗೀಕರಣ ಮಾಡಿದರೆ
ಶ್ರೀಮಂತರಿಗೂ, ಬಡವರಿಗೂ ವ್ಯತ್ಯಾಸವಿಲ್ಲದಂತೆ ಮಾಡುವ ಈ ಕಾಯ್ದೆಯಿಂದ ನೌಕರರಿಗೆ ಮತ್ತು ಗ್ರಾಹಕರಿಗೆ ಸಮಸ್ಯೆ ಎದುರಾಗಲಿದೆ. ಸಹಾಯಕ ಅಭಿಯಂತರರ ಕೇಂದ್ರ ಕಾರ್ಯಕಾರಣಿ ಸಮಿತಿ ಸದಸ್ಯ ಹೇಮಂತ್.ಎಲ್ ಮಾತನಾಡಿ, ಎಲ್ಲಾ ಸಂಘಟನೆಗಳು, ನೌಕರರ ಅಭಿಪ್ರಾಯ ಸಂಗ್ರಹಿಸಿ ಕಾಯ್ದೆ ರೂಪಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರಹೋರಾಟ ಮಾಡಲಾಗುತ್ತದೆ. ದೇಶದ ವಿವಿಧ ರಾಜ್ಯಗಳಲ್ಲಿ ವಿದ್ಯುತ್ ಖಾಸಗೀಕರಣ ಮಾಡಿದ ಪರಿಣಾಮ ಗ್ರಾಹಕರಿಗೆ ಸಮಸ್ಯೆಯಾಗಿದೆ ಎಂದರು.
ಈ ವೇಳೆ ಕರ್ನಾಟಕ ವಿದ್ಯುತ್ ಪ್ರಸರಣಾ ಮಂಡಳಿ ಸ್ಥಳೀಯ ಸಮಿತಿ ಅಧ್ಯಕ್ಷ ನಾಗರಾಜು, ಕಾರ್ಯದರ್ಶಿ ಕೃಷ್ಣಮೂರ್ತಿ, ಎಇಇ ನಾಗರಾಜು ಹೆಚ್‌ಪಿ, ಡಿಪ್ಲೋಮಾ ಜೂನಿಯರ್ ಅಸೋಶಿಯ ಶನ್ ಕೇಂದ್ರ ಕಾರ್ಯಕಾರಣಿ ಸಮಿತಿ ಸದಸ್ಯ ಸುರೇಶ್, ಲೆಕ್ಕಾಧಿಕಾರಿಗಳ ಸಂಘದ ಶ್ರೀಕಾಂತ್, ಎಸ್ಸಿ ಎಸ್ಟಿ ನೌಕರರ ಸಂಘದ ಶ್ರೀನಿವಾಸ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.