ತೆರಿಗೆ ವಸೂಲಿಗೆ ಭಾರತ್‌ ಬಿಲ್‌ ಪೇ ವ್ಯವಸ್ಥೆ ಜಾರಿ

ಗೊಬ್ಬರ ಮಾರಾಟದಿಂದ 10 ಲಕ್ಷ ರೂ. ಹಾಗೂ ಜಾಹಿರಾತು ಶುಲ್ಕ 3 ಲಕ್ಷ ರೂ. ನಿರೀಕ್ಷಿಸಲಾಗಿದೆ

Team Udayavani, Apr 1, 2022, 6:21 PM IST

ತೆರಿಗೆ ವಸೂಲಿಗೆ ಭಾರತ್‌ ಬಿಲ್‌ ಪೇ ವ್ಯವಸ್ಥೆ ಜಾರಿ

ದೊಡ್ಡಬಳ್ಳಾಪುರ: ನಗರಸಭೆಯ ಕಾರ್ಯಾಲಯದಲ್ಲಿ ನಡೆದ 2022-23ನೇ ಸಾಲಿನ ಆಯವ್ಯಯ ವಿಶೇಷ ಸಭೆಯಲ್ಲಿ ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್‌ 1.75 ಕೋಟಿ ರೂ. ಉಳಿತಾಯದ ಬಜೆಟ್‌ ಮಂಡಿಸಿದರು.

ಸಭೆಯಲ್ಲಿ ಮಾತನಾಡಿದ ಅವರು, ನಗರದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ, ನಗರದ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸಿ, ನಗರದ ನಾಗರಿಕ ಸಮಸ್ಯೆ ಪರಿಹರಿಸುವಲ್ಲಿ ಹೆಚ್ಚಿನ ರೀತಿಯಲ್ಲಿ ಸಹಕಾರಿಯಾಗುವಂತೆ ನಗರದ ಸೀಮಿತ ಹಣಕಾಸು ಸಂಪನ್ಮೂಲವಾದ ಈ ನಗರಸಭೆಗೆ ಅತಿಮುಖ್ಯ ಆದಾಯವಾದ ಮನೆ ಕಂದಾಯ, ನೀರಿನ ತೆರಿಗೆ, ಮಳಿಗೆ ಬಾಡಿಗೆ, ಪರವಾನಿಗೆ ಶುಲ್ಕ, ಇತರೆ ತೆರಿಗೆಗಳು,ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳಾದ 15ನೇ ಹಣಕಾಸು ಯೋಜನೆ, ಎಸ್‌ಎಫ್‌ಸಿ ಮೂಲಗಳಿಂದ ಹೆಚ್ಚಿನ ಆದಾಯವನ್ನು ನಿರೀಕ್ಷಿಸಿದ್ದು, ನಗರಸಭೆಯು ಅಗತ್ಯವಾಗಿ ನಿರ್ವಹಿಸ ಬೇಕಾಗಿರುವ ನಿರ್ವಹಣೆ ಮತ್ತು ನಾಗರಿಕ ಮೂಲ ಭೂತ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

2022-23ನೇ ಸಾಲಿನ ಆಯವ್ಯಯ ಅಂದಾಜು:
2022-23ನೇ ಸಾಲಿಗೆ ಪ್ರಾರಂಭಿಕ ಶಿಲ್ಕು 1,616 ಲಕ್ಷ ರೂ. ಮತ್ತು ವರಮಾನ 5,229 ಲಕ್ಷ ರೂ. ಒಟ್ಟು 6,845 ಲಕ್ಷ ರೂ. ಆದಾಯ ನೀರಿಕ್ಷಿಸಲಾಗಿದೆ. ಒಟ್ಟು ವೆಚ್ಚ 6,670 ಲಕ್ಷ ರೂಗಳೆಂದು ಅಂದಾಜಿಸಿದ್ದು, ಅಂತಿಮ ಶಿಲ್ಕು ರೂ.175 ಲಕ್ಷಗಳು ನಿರೀಕ್ಷಿಸಲಾಗಿದೆ.

ಅಂದಾಜು ಜಮಾ: ನಗರಸಭೆಯ 2022-23ನೇ ಸಾಲಿನಲ್ಲಿ ಒಟ್ಟು ಆದಾಯ ರೂ.5,229.46 ಲಕ್ಷ ರೂ.ನೀರಿಕ್ಷಿಸಲಾಗಿದ್ದು, ಈ ಪೈಕಿ ತೆರಿಗೆ ಆದಾಯದಿಂದ 504.22 ಲಕ್ಷ ರೂ. ಆಗಿದ್ದು ಹಾಗೂ ಇತರೆ ತೆರಿಗೆಯೇತರ ಆದಾಯಗಳಾದ ನೀರು ಸರಬರಾಜು ಶುಲ್ಕ, ಒಳಚರಂಡಿ ಸಂಪರ್ಕ ಶುಲ್ಕ, ಅಂಗಡಿ ಮಳಿಗೆಗಳ ಬಾಡಿಗೆ, ಅಭಿವೃದ್ಧಿ ಮತ್ತು ಉತ್ತಮತೆ ಶುಲ್ಕ, ನೀರು ಸರಬರಾಜು ಮತ್ತು ಒಳಚರಂಡಿ ಸಂಪರ್ಕ ಶುಲ್ಕಗಳು ಮತ್ತು ಇತರೆ ಆದಾಯದಿಂದ 1304.57 ಲಕ್ಷ ರೂ.
ನಿರೀಕ್ಷಿಸಲಾಗಿದೆ ಹಾಗೂ ಸದರಿ ಸಾಲಿನಲ್ಲಿ ತೆರಿಗೆ ವಸೂಲಿಗಾಗಿ ಆಧುನಿಕ ಪದ್ಧತಿಯಾದ ಭಾರತ್‌ ಬಿಲ್‌ ಪೇ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ.

ಆರೋಗ್ಯ ಶಾಖೆಯಿಂದ ಸ್ವಂತ ಮೂಲಗಳಿಂದ ಬರುವ ಆದಾಯವಾದ ಉದ್ದಿಮೆ ಪರವಾನಿಗೆ ಶುಲ್ಕ 32 ಲಕ್ಷ ರೂ., ತ್ಯಾಜ್ಯದಿಂದ ತಯಾರಿಸಲಾದ ಗೊಬ್ಬರ ಮಾರಾಟದಿಂದ 10 ಲಕ್ಷ ರೂ. ಹಾಗೂ ಜಾಹಿರಾತು ಶುಲ್ಕ 3 ಲಕ್ಷ ರೂ. ನಿರೀಕ್ಷಿಸಲಾಗಿದೆ. ಎಂದರು.

ಆಯವ್ಯಯದ ಪಕ್ಷಿನೋಟ: ನಗರದ ಉದ್ಯಾನವನಗಳ ಅಭಿವೃದ್ಧಿಗಾಗಿ 56.35 ಲಕ್ಷ ರೂ. ಅಂದಾಜಿಸಲಾಗಿದ್ದು ಹಾಗೂ ಸದರಿ ಉದ್ಯಾನವನಗಳ ನಿರ್ವಹಣೆಗಾಗಿ 12 ಲಕ್ಷ ರೂ.. ಒಳಚರಂಡಿ ಶುದ್ಧೀಕರಣ ಫಟಕ ಸುತ್ತಲು ಸಸಿ ಮತ್ತು ಮರ ಬೆಳೆಸಲು 5 ಲಕ್ಷ ರೂ. ಹಾಗೂ ಡಿ. ಕೊಂಗಾಡಿಯಪ್ಪ ಹಸಿರು ವೃಕ್ಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು 20 ಲಕ್ಷ ರೂ. ನೂತನ ಕೆ.ಆರ್‌. ಮಾರುಕಟ್ಟೆ ಮಳಿಗೆಗಳ  ನಿರ್ಮಾಣಕ್ಕಾಗಿ 145 ಲಕ್ಷ ರೂ., ಹಾಗೂ ಡಿ.ಕ್ರಾಸ್‌ ರಸ್ತೆಯಲ್ಲಿ ನೂತನ ವಾಣಿಜ್ಯ ಮಳಿಗೆ ನಿರ್ಮಾಣಕ್ಕಾಗಿ 210.95 ಲಕ್ಷ ರೂ. ಅಂದಾಜಿಸಲಾಗಿದೆ. ಕೊಂಗಾಡಿಯಪ್ಪ ಬಸ್‌ ನಿಲ್ದಾಣ ಉನ್ನತೀಕರಣಕ್ಕಾಗಿ ಹಾಗೂ ನಗರಸಭಾ ಕಚೇರಿ ಅವರಣದಲ್ಲಿ ಪುತ್ಥಳಿ ನಿರ್ಮಾಣಕ್ಕಾಗಿ 25 ಲಕ್ಷ ರೂ. ಮೀಸಲಿರಿಸಲಾಗಿದೆ ಎಂದರು.

ರಸ್ತೆ ಅಗಲೀಕರಣಕ್ಕೆ 2 ಕೋಟಿ: ನಗರಕ್ಕೆ ಆಧುನಿಕ ಕಸಾಯಿಖಾನೆ ನಿರ್ಮಾಣಕ್ಕಾಗಿ ಜಾಗವನ್ನು ಗುರುತಿಸಲಾಗಿದ್ದು, ಸದರಿ ಜಾಗಕ್ಕೆ ಕಾಂಪೌಂಡ್‌ ಮತ್ತು ತಂತಿ ನಿರ್ಮಿಸಲು 50 ಲಕ್ಷ ರೂ. ನಗರಸಭೆ ಸ್ವತ್ತುಗಳಿಗೆ ತಂತಿ ಬೇಲಿ ಅಳವಡಿಸಲು 70 ಲಕ್ಷ ರೂ. ಅಂದಾಜಿಸಲಾಗಿದೆ. ನಗರದ ಪ್ರಮುಖ ವೆಚ್ಚಕ್ಕಾಗಿ 200 ಲಕ್ಷ ರೂ. ಅಂದಾಜಿಸಲಾಗಿದೆ. ಕ್ರೀಡಾಂಗಣ ಅಭಿವೃದ್ಧಿಗಾಗಿ ಮತ್ತು ಬಯಲು ರಂಗ ಮಂದಿರ ನಿರ್ಮಾಣಕ್ಕಾಗಿ 35 ಲಕ್ಷ ರೂ. ಅಂದಾಜಿಸಲಾಗಿದೆ. ಯುವಜನ ಕ್ರೀಡಾ ಇಲಾಖೆಯವರ ಸಹಯೋಗದೊಂದಿಗೆ ನಗರ ವ್ಯಾಪ್ತಿಯಲ್ಲಿ ಈಜುಕೊಳ ನಿರ್ಮಾಣಕ್ಕಾಗಿ 25 ಲಕ್ಷ ರೂ. ಅಂದಾಜಿಸಲಾಗಿದೆ ಎಂದರು.

ವಿಶೇಷ ಕಾರ್ಯಕ್ರಮಗಳು: ಮಳೆನೀರು ಕೊಯ್ಲು ಸಂಗ್ರಹಣೆ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವವರಿಗೆ ಉತ್ತೇಜಿಸಲು ಪ್ರೋತ್ಸಾಹಧನ ನೀಡುವುದು. ನೇಕಾರ
ಭವನ ನಿರ್ಮಾಣಕ್ಕೆ 20 ಲಕ್ಷ ರೂ. ಅಂದಾಜು, ನಗರದ ಒಳಚರಂಡಿ ರೊಚ್ಚು ನೀರನ್ನು ಆಧುನಿಕ ರೀತಿಯಲ್ಲಿ ಸಂಸ್ಕರಿಸಿ ಶುದ್ಧೀಕರಿಸಲು ಪ್ಲೂಟಿಂಗ್‌ ಎರಿಏಟರ್ಗಳ ಅಳವಡಿಕೆಗಾಗಿ 75 ಲಕ್ಷ ರೂ. ಅಂದಾಜಿಸಲಾಗಿದೆ. ಮುಖ್ಯಮಂತ್ರಿಗಳ ನಗರೋತ್ಥಾನ ಹಂತ-4ರ ಯೋಜನೆಯಡಿ ದೊಡ್ಡಬಳ್ಳಾಪುರ ನಗರಸಭೆಗೆ 30 ಕೋಟಿ ರೂ. ಕ್ರಿಯಾಯೋಜನೆ ರೂಪಿಸಲಾಗಿದ್ದು, ಈ ಯೋಜನೆಯಡಿ ಪ.ಜಾತಿ, ವರ್ಗದವರ ಕಲ್ಯಾಣ ಕಾರ್ಯಕ್ರಮಕ್ಕಾಗಿ 437 ಲಕ್ಷ ರೂ.
ಅಂದಾಜಿಸಲಾಗಿದೆ ಎಂದರು.

ಪ.ಪಂಗಡ ವರ್ಗದವರ ಕಲ್ಯಾಣಕ್ಕಾಗಿ 177ಲಕ್ಷ ರೂ. ಇತರೆ ಬಡ ಜನರ ಕಲ್ಯಾಣ ಕಾರ್ಯಕ್ರಮಕ್ಕೆ 185 ಲಕ್ಷ ರೂ. ವಿಕಲಚೇತನರ ಕಲ್ಯಾಣ ಕಾರ್ಯಕ್ರಮಕ್ಕೆ 128 ಲಕ್ಷ ರೂ., ನಗರದ ಮುಖ್ಯರಸ್ತೆಗಳಲ್ಲಿ ಟ್ರಾμಕ್‌ ಸಿಗ್ನಲ್‌ ದೀಪ ಮತ್ತು ಜನದಟ್ಟಣೆಯ ಪ್ರದೇಶಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ 40 ಲಕ್ಷ ರೂ. ಅಂದಾಜಿಸಲಾಗಿದೆ ಎಂದರು. ಸಭೆಯಲ್ಲಿ ನಗರಸಭೆ ಉಪಾಧ್ಯಕ್ಷೆ ಫರ್ಹಾನ ತಾಜ್, ಪೌರಾಯುಕ್ತ ಕೆ.ಜಿ.ಶಿವಶಂಕರ್‌ ಹಾಗೂ ನಗರಸಭೆ ಸದಸ್ಯರು, ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

1-a-ccc

INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ

1-a-shaina

Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

Yuva Rajkumar: ʼಎಕ್ಕʼ ಇದು ಯುವ ಹೊಸ ಲೆಕ್ಕ

Yuva Rajkumar: ʼಎಕ್ಕʼ ಇದು ಯುವ ಹೊಸ ಲೆಕ್ಕ

Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ!

Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾ*ಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

abhimanyu kashinath next movie suri loves sandhya

Abhimanyu Kashinath; ಸೂರಿ ಲವ್‌ ಗೆ ಉಪ್ಪಿ ಮೆಚ್ಚುಗೆ

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

1-a-ccc

INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ

arrested

Parkala; ಅಂಗಡಿಯಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಮಾಲಕ ಅರೆಸ್ಟ್

1-a-shaina

Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.