ಬಿಜೆಪಿ ಸಂಘಟನೆಗಾಗಿ ಬೈಕ್ ರ್ಯಾಲಿ
Team Udayavani, Mar 3, 2019, 7:47 AM IST
ದೇವನಹಳ್ಳಿ: ತಾಲೂಕಿನ ಚಪ್ಪರದ ಕಲ್ಲು ಸರ್ಕಲ್‌ನಲ್ಲಿ ತಾಲೂಕು ಬಿಜೆಪಿ ಯುವ ಮೋರ್ಚಾ ಮುಖಂಡರು ಬೂತ್ ಮಟ್ಟದ ಕಾರ್ಯಕರ್ತರನ್ನು ಸಂಘಟಿಸುವ ಉದ್ದೇಶದಿಂದ ಬೈಕ್ ರ್ಯಾಲಿಗೆ ನಡೆಸಿದರು. ಈ ವೇಳೆ ಮಾತನಾಡಿದ ಮುಖಂಡರು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಷ್ಟ್ರಾದ್ಯಂತ ಏಕ ಕಾಲದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಬೈಕ್ ರ್ಯಾಲಿ ಮೂಲಕ ಸಂಘಟನೆ ಮಾಡಲಾಗುತ್ತಿದೆ ಎಂದರು.
ಕಾರ್ಯಕರ್ತರು ತಾಲೂಕಿನ ಗ್ರಾಮಗಳಲ್ಲಿ ಬೈಕ್‌ಗಳಲ್ಲಿ ಸಾಗಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪರ ಘೋಷಣೆಗಳನ್ನು ಕೂಗುತ್ತ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ರಾಜಣ್ಣ ಮಾತನಾಡಿ, ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಆದೇಶದಂತೆ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಯುವಕರ ಪಡೆ ಕೇಂದ್ರ ಸರ್ಕಾರದ ಸಾಧನೆಗಳು ಮತ್ತು ಮೈತ್ರಿ ಸರ್ಕಾರದ ವೈಫಲ್ಯಗಳನ್ನು ಜನರಿಗೆ ಮನದಟ್ಟು ಮಾಡುತ್ತಿದ್ದಾರೆ.
ಲೋಕಸಭಾ ಕ್ಷೇತ್ರದ ನಮ್ಮ ಅಭ್ಯರ್ಥಿಯ ಗೆಲವಿಗೆ ಹಾಗೂ ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡಲು ಶ್ರಮಿಸಬೇಕು. ಯುವಕರು ಮನೆ ಮನೆಗೆ ತೆರಳಿ ಪಕ್ಷ ಸಂಘಟನೆ ಮಾಡಬೇಕು ಎಂದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಎಚ್.ಎಂ.ರವಿಕುಮಾರ್ ಮಾತನಾಡಿ, ಯುವಕರು ಮನಸ್ಸು ಮಾಡಿದರೆ ಏನ್ನಾದರೂ ಸಾಧನೆ ಮಾಡಬಹುದು. ಎಲ್ಲರೂ ಒಗ್ಗಟ್ಟಿನಿಂದ ಪಕ್ಷದ ಸಂಘಟನೆಗೆ ಶ್ರಮಿಸಬೇಕು. ಯುವಕರು ಬೈಕ್ ರ್ಯಾಲಿಯಲ್ಲಿ ಉಮ್ಮಸ್ಸಿನಿಂದ ಭಾಗವಹಿಸಿದ್ದಾರೆ ಎಂದು ಹೇಳಿದರು. ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಅಂಬರೀಶ್ ಗೌಡ ಮಾತನಾಡಿದರು.
ಈ ವೇಳೆ ರಾಜ್ಯ ಪರಿಷತ್ ಸದಸ್ಯ ದೇಸು ನಾಗರಾಜ್, ತಾಲೂಕು ರೈತ ಮೋರ್ಚಾ ಉಪಾಧ್ಯಕ್ಷ ಗೋಕರೆ ಗೋಪಾಲ್, ತಾಲೂಕು ಉಪಾಧ್ಯಕ್ಷ ಕೆಸಿ ಮುನಿರಾಜು, ಖಜಾಂಚಿ ಮಂಜುನಾಥ್, ಯುವ ಮೋರ್ಚಾ ಅಧ್ಯಕ್ಷ ಆನಂದ್‌ಗೌಡ, ಟೌನ್ ಬಿಜೆಪಿ ಅಧ್ಯಕ್ಷ ಮಂಜುನಾಥ್, ಮುಖಂಡ ಕೆಂಪಣ್ಣ, ಮಂಜುನಾಥ್, ನಾಗರಾಜ್, ಹನಮಂತೇಗೌಡ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
MUST WATCH
ಹೊಸ ಸೇರ್ಪಡೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.