ಅತೃಪ್ತರ ಭೇಟಿಗೆ ಮುಂಬೈಗೆ ಹಾರಿದ ಬಿಜೆಪಿಗರು

Team Udayavani, Jul 25, 2019, 3:00 AM IST

atrupta

ದೇವನಹಳ್ಳಿ: ರಾಜ್ಯದಲ್ಲಿ ಆಡಳಿತದಲ್ಲಿದ್ದ ಮೈತ್ರಿ ಸರ್ಕಾರ ಪತನದ ಹಿನ್ನಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಹಲವು ಬಿಜೆಪಿ ಶಾಸಕರು ಕೆಂಪೇಗೌಡ ವಿಮಾನ ನಿಲ್ದಾಣದಿಂದ ಮುಂಬೈ, ಪುಣೆಗೆ ಅತೃಪ್ತ ಶಾಸಕರನ್ನು ಭೇಟಿಯಾಗಲು ತೆರಳಿದರು.

ಬಿಜೆಪಿ ಶಾಸಕ ಅಶ್ವತ್ಥ ನಾರಾಯಣ್‌, ಮುಂಬೈಗೆ ತೆರಳಿದರೆ, ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಪುಣೆಗೆ ತೆರಳಿದರು. ಮುಂಬೈಗೆ ತೆರಳಿದ ಅಶ್ವತ್ಥ ನಾರಾಯಣ್‌, ವಿಮಾನ ನಿಲ್ದಾಣದಲ್ಲಿಯೇ ಶಾಸ ಸತೀಶ್‌ ರೆಡ್ಡಿ ಜತೆಗೆ ಚರ್ಚೆ ನಡೆಸಿದರು. ಅಲ್ಲದೆ ಅನರ್ಹತೆ ಭೀತಿಯಲ್ಲಿರುವ ಅತೃಪ್ತರಿಗೆ ಧೈರ್ಯ ತುಂಬಲಿದ್ದಾರೆ ಎಂಬ ಮಾತುಗಳು ಕೇಳಿದವು.

ಶಾಸಕ ಸತೀಶ್‌ ರೆಡ್ಡಿ ಸುದ್ದಿಗಾರರೊಂದಿಗೆ ಮಾತನಾಡಿ, ಮಂಗಳವಾರವಷ್ಟೇ ಕುಮಾರಸ್ವಾಮಿ ಸರ್ಕಾರ ಪತನವಾಗಿದೆ. ಎಚ್‌ಡಿಕೆ ಅಪವಿತ್ರ ಮೈತ್ರಿ ಮುರಿದಿದೆ. ಹೈಕಮಾಂಡ್‌ನಿಂದ ಸೂಚನೆ ಬರಲಿದ್ದು, ಇನ್ನೆರಡು ದಿನಗಳಲ್ಲಿ ಸರ್ಕಾರ ರಚನೆ ಪ್ರಕ್ರಿಯೆ ಪ್ರಾರಂಭವಾಗುತ್ತದೆ. ಬಿಜೆಪಿ, ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಿದ್ದರೂ ಸಹ ವಿರೋಧ ಪಕ್ಷದಲ್ಲಿ ಕುಳಿತು ಯಡಿಯೂರಪ್ಪ 14 ತಿಂಗಳಿನಿಂದ ಹೋರಾಟ ನಡೆಸಿಕೊಂಡು ಬಂದಿದ್ದರು.

ಈಗ ಅದಕ್ಕೊಂದು ಅತ್ಯದೊರೆತಿದೆ. ಹೈಕಮಾಂಡ್‌ ಸೂಚನೆಗೆ ಕಾಯುತ್ತಿದ್ದೇವೆ. ಅತೃಪ್ತ ಶಾಸಕರಿಗೂ ನಮಗೂ ಸಂಬಂಧವಿಲ್ಲ. ಅವರ ಪಕ್ಷದಲ್ಲಿ ಅವರವರೇ ಕಿತ್ತಾಡಿಕೊಂಡು ಅಂತರ ಕಾಯ್ದುಕೊಂಡಿದ್ದಾರೆ. ಪಕ್ಷೇತರರು ನಮ್ಮನ್ನು ಬೆಂಬಲಿಸಲಿದ್ದಾರೆ ಎಂದು ಹೇಳಿದರು.

ಆಪರೇಶನ್‌ ಸಂಸ್ಕೃತಿ ಅಂತ್ಯವಾಗಲಿ: ಸ್ಪೀಕರ್‌ ರಮೇಶ್‌ಕುಮಾರ್‌, ಅತೃಪ್ತರಿಗೆ ಮುಂಬೈನಿಂದ ವಾಪಸ್‌ ಬರಲು ಸೂಚಿಸಿದ್ದಾರೆ. ಅಲ್ಲದೆ ವಿಪ್‌ ಉಲ್ಲಂಘನೆಗೆ ಉತ್ತರ ನೀಡಬೇಕಿದ್ದು, ಏನು ಉತ್ತರ ನೀಡಲಿದ್ದಾರೆ ಎಂಬುದನ್ನು ನೋಡಲಿದ್ದೇವೆ.

ಬಳಿಕ ಹಿರಿಯರು ಏನು ಕ್ರಮಕೈಗೊಳ್ಳಬೇಕು ಎಂಬುದನ್ನು ನಿರ್ಧರಿಸಲಿದ್ದಾರೆ. ಬಹುತೇಕ ಶಾಸಕರನ್ನು ಅನರ್ಹಗೊಳಿಸಲಾಗುವುದು. ಅಲ್ಲದೆ ಆಪರೇಶನ್‌ ಸಂಸ್ಕೃತಿ ಅಂತ್ಯವಾಗಬೇಕು. ಬಿಜೆಪಿಗೆ ಇದೇನು ಹೊಸದಲ್ಲ. ಇದು 2ನೇ ಬಾರಿ ಆಪರೇಷನ್‌ ಆಗಿದೆ ಎಂದು ಕಾಂಗ್ರೆಸ್‌ ಶಾಸಕ ಶಿವಾನಂದ ಪಾಟೀಲ್‌ ಅಸಮಾಧಾನ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

16

Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.