ಉಪಚುನಾವಣೆಯಲ್ಲಿ ಬಿಜೆಪಿಗೆ 3ನೇ ಸ್ಥಾನ: ಸಿದ್ದರಾಮಯ್ಯ


Team Udayavani, Nov 25, 2019, 3:00 AM IST

upachnnavane

ಹೊಸಕೋಟೆ: ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ 3ನೇ ಸ್ಥಾಲ ಪಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತಾಲೂಕಿನ ನಂದಗುಡಿಯಲ್ಲಿ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಚುನಾವಣೆಯಲ್ಲಿ ಸ್ಪರ್ಧೆಯಿರುವುದು ಕಾಂಗ್ರೆಸ್‌ ಹಾಗೂ ಪಕ್ಷೇತರ ಅಭ್ಯರ್ಥಿ ಶರತ್‌ ಬಚ್ಚೇಗೌಡ ನಡುವೆಯಷ್ಟೆ.

ಸಮ್ಮಿಶ್ರ ಸರಕಾರದಲ್ಲಿ ಸಚಿವ ಸ್ಥಾನ ನೀಡಿದ್ದರೂ ಆಸೆ ಆಮಿಷಗಳಿಗೆ ಒಳಗಾಗಿ ಕೋಮುವಾದಿ ಬಿಜೆಪಿಗೆ ಸೇರ್ಪಡೆಯಾಗಿರುವುದು ಹೆತ್ತ ತಾಯಿಗೆ ದ್ರೋಹ ಬಗೆದಂತಾಗಿದೆ. ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪದ್ಮಾವತಿ ಸುರೇಶ್‌ ಬಗ್ಗೆ ಕೀಳಾಗಿ ಮಾತನಾಡಿರುವುದಕ್ಕೆ ಕ್ಷೇತ್ರದ ಮಹಿಳೆಯರೆ ಸೂಕ್ತ ಉತ್ತರ ನೀಡಬೇಕು. ತಮ್ಮ ಅಧಿಕಾರವಧಿಯಲ್ಲಿ ಪ್ರಣಾಳಿಕೆಯಲ್ಲಿ ನೀಡಿದ್ದ 165 ಭರವಸೆಗಳನ್ನು ಈಡೇರಿಸಿ ಅನ್ನಭಾಗ್ಯ ಯೋಜನೆಯಡಿ 7 ಕೆಜಿಗಳಷ್ಟು ಅಕ್ಕಿಯನ್ನು ಸಹ ನೀಡಲಾಗಿತ್ತು.

ಸಾಲ ಮನ್ನಾ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಮಾಡಿದಾಗ ವಿಧಾನಸೌಧದದಲ್ಲಿ ನೋಟು ಮುದ್ರಣ ಯಂತ್ರ ಇಟ್ಟುಕೊಂಡಿಲ್ಲ ಎಂಬ ಬೇಜವಾಬ್ದಾರಿ ಉತ್ತರ ನೀಡಿದ್ದರು. ಪ್ರಧಾನಿ ಮೋದಿಯವರು 5 ವರ್ಷದಲ್ಲಿ 10 ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿಯೂ ರೈತರ ಆದಾಯದುಪ್ಪಟ್ಟು ಮಾಡುವುದಾಗಿ ನೀಡಿದ್ದ ಹೇಳಿಕೆಗಳನ್ನುಈಡೇರಿಸುವಲ್ಲಿ ವಿಫ‌ಲವಾಗಿದ್ದಾರೆ.

ಸರಕಾರಿ ಸ್ವಾಮ್ಯದ ಸಂಸ್ಥೆಗಳು ನಷ್ಟ ಅನುಭವಿಸಿ ಮುಚ್ಚಬೇಕಾದ ಹಂತ ತಲುಪಿವೆ. ದೇಶದಲ್ಲಿ ಹಸಿರು ಕ್ರಾಂತಿ ಮಾಡಿದ ಹೆಗ್ಗಳಿಕೆಯನ್ನು ಕಾಂಗ್ರೆಸ್‌ ಪಕ್ಷ ಹೊಂದಿದ್ದು ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದವರಾಗಿದ್ದಾರೆ. ವಿದೇಶದಿಂದ ಕಪ್ಪು ಹಣ ತರುವುದಾಗಿ ಹೇಳಿ ಇದೀಗ ಅನರ್ಹ ಶಾಸಕರಿಗೆ 25 ಕೋಟಿ ಕಪ್ಪು ಹಣವನ್ನು ಹಂಚಿಕೆ ಮಾಡಿರುವುದು ಇವರ ಸಾಧನೆಗೆ ನಿದರ್ಶನವಾಗಿದೆ.

ಇದೀಗ ಸುಳ್ಳುಗಳನ್ನು ಹೇಳುವ ಮೂಲಕ ಅಲ್ಪಸಂಖ್ಯಾತರ ಮತಗಳನ್ನು ಪಡೆಯಲು ಬಿಜೆಪಿ ಹುನ್ನಾರ ನಡೆಸುತ್ತಿದೆ. ಟಿಪ್ಪು ಜಯಂತಿಯನ್ನು ಯಾವುದೇ ಜನಾಂಗವನ್ನು ಓಲೈಸಲು ಮಾಡದೆ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ ನಾಯಕನೆಂದು ಗೌರವಿಸಿ ಆಚರಣೆ ಮಾಡಲಾಗಿತ್ತು. ಮತದಾರರು ಬಿಜೆಪಿಯ ಕುತಂತ್ರಗಳನ್ನು ಅರಿತು ಆಮಿಷ, ಬೆದರಿಕೆ ತಂತ್ರಗಳಿಗೆ ಒಳಗಾಗದೆ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು.

ಮಾಜಿ ಸಚಿವ ಕೃಷ್ಣಬೈರೇಗೌಡ ಮಾತನಾಡಿ 2018ರಲ್ಲಿ ತಾಲೂಕಿನ 30 ಕೆರೆಗಳಿಗೆ ನೀರು ತುಂಬಲು 100 ಕೋಟಿ ರೂ.ಗಳನ್ನು ಮಂಜೂರು ಮಾಡಲು ಅನುಮೋದನೆ ನೀಡಲಾಗಿತ್ತು. ಸುಪ್ರೀಂ ಕೋರ್ಟ್‌ ಅನರ್ಹರು ಎಂದು ತೀರ್ಪು ನೀಡಿದ್ದು ಇಂತಹ ನಾಲಾಯಕ್‌ ಜನರಿಂದ ಏನು ಮಾಡಲು ಸಾಧ್ಯವಿಲ್ಲ.

ಸ್ವಾರ್ಥ ಸಾಧನೆಗಾಗಿ ಉಪ್ಪು ತಿಂದ ಮನೆಗೆ ದ್ರೋಹ ಮಾಡಿ ಬಿಜೆಪಿಗೆ ಸೇರಿರುವ ಅವಕಾಶವಾದಿಗಳನ್ನು ಮತದಾರರು ತಿರಸ್ಕರಿಸಬೇಕು ಎಂದರು. ಆನೇಕಲ್‌ ಶಾಸಕ ಶಿವಣ್ಣ, ಹೆಬ್ಬಾಳ ಶಾಸಕ ಬೈರತಿ ಸುರೇಶ್‌, ಉಪಚುನಾವಣೆ ಕಾಂಗ್ರೆಸ್‌ ಅಭ್ಯರ್ಥಿ ಪದ್ಮಾವತಿ ಸುರೇಶ್‌ ಸಹ ಮಾತನಾಡಿದರು.

ಟಾಪ್ ನ್ಯೂಸ್

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

3

Kannada: ವೀರ ಕನ್ನಡಿಗ: ತನು ಕನ್ನಡ, ಮನ(ನೆ) ಕನ್ನಡ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

8-madikeri

Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.