ಮಕ್ಕಳಿಗೆ ಬೆಳಗ್ಗಿನ ಉಪಾಹಾರ ನೀಡುವುದರಿಂದ ಅನುಕೂಲ
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಸ್ಥೆ ಯಿಂದ ಶಾಲಾ ಮಕ್ಕಳಿಗೆ ಬೆಳಗ್ಗಿನ ಉಪಾಹಾರ ನೀಡುವ ಕಾರ್ಯಕ್ರಮದಲ್ಲಿ ಜಿಪಂ ಸದಸ್ಯ ಕೆ.ಸಿ ಮಂಜುನಾಥ್ ಉಪಾಹಾರ ಬಡಿಸಿದರು.
Team Udayavani, Jul 3, 2019, 3:11 PM IST
ದೇವನಹಳ್ಳಿ : ಸಂಘ ಸಂಸ್ಥೆಗಳು ಮಕ್ಕಳ ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಶಾಲಾ ಮಕ್ಕಳಿಗೆ ಬೆಳಗ್ಗಿನ ಉಪಾಹಾರ ನೀಡುವುದರಿಂದ ಹೆಚ್ಚಿನ ಅನುಕೂಲವಾಗುತ್ತಿದೆ ಎಂದು ಜಿಪಂ ಸದಸ್ಯ ಕೆ.ಸಿ ಮಂಜುನಾಥ್ ಹೇಳಿದರು.
ತಾಲೂಕಿನ ಕಸಬ ಹೋಬಳಿ ಉಗನವಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಚಿಕ್ಕಬಳ್ಳಾಪುರ ಸತ್ಯ ಸಾಯಿ ಟ್ರಸ್ಟ್ ಹಾಗೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಸ್ಥೆಯಿಂದ ಶಾಲಾ ಮಕ್ಕಳಿಗೆ ಬೆಳಗ್ಗಿನ ಉಪಹಾರ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಬಡ ಮಕ್ಕಳಿಗೆ ಅನುಕೂಲ: ಗ್ರಾಮೀಣ ಪ್ರದೇಶದಲ್ಲಿ ಬಡ ಮಕ್ಕಳು ಸರ್ಕಾರಿ ಶಾಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ಸರಿಯಾದ ಸಮಯಕ್ಕೆ ಉಪಹಾರ ಸೇವಿಸಿ ಶಾಲೆಗೆ ಬರಲು ಕಷ್ಟ ವಾಗುವುದರಿಂದ ಶಾಲೆಯಲ್ಲಿಯೇ ಸಂಘ ಸಂಸ್ಥೆಯಿಂದ ಉಪಾಹಾರ ನೀಡುತ್ತಿರುವುದರಿಂದ ಮಕ್ಕಳ ವಿಧ್ಯಾಬ್ಯಾಸಕ್ಕೆ ಸಹಕಾರಿ ಆಗಿದೆ ಸರ್ಕಾರಿ ಶಾಲೆ ಗಳು ಖಾಸಗಿ ಶಾಲೆಗಳಿಗಿಂತಲೂ ಯಾವುದೇ ರೀತಿಯಲ್ಲಿ ಕಮ್ಮಿ ಇಲ್ಲ ಎಂದರು.
5 ಶಾಲೆಗಳಿಗೆ ಏಕ ಕಾಲದಲ್ಲಿ ಉಪಾಹಾರ ವ್ಯವಸ್ಥೆ: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಸ್ಥೆಯಿಂದ ಸಾಮಾಜಿಕ ನಿರ್ವಹಣಾ ಅನುದಾನ (ಸಿಎಸ್ ಆರ್ )ನಲ್ಲಿ ಅರದೇಶನ ಹಳ್ಳಿ ಶಾಲೆಗೆ 6 ಕೋಟಿ ವೆಚ್ಚದಲ್ಲಿ ಹಾಗೂ ಕನ್ನ ಮಂಗಲ ಶಾಲೆಗೆ 3.5 ಕೋಟಿ ವೆಚ್ಚದಲ್ಲಿ ಉತ್ತಮ ಕಟ್ಟಡ ನಿರ್ಮಾಣ ವಾಗುತ್ತಿದೆ. ಅರದೇಶನ ಹಳ್ಳಿ ಶಾಲೆಯಲ್ಲಿ ಕಟ್ಟ ಡ ನಿರ್ಮಾಣ ವಾದಮೇಲೆ 80 ಇದ್ದ ಮಕ್ಕಳ ದಾಖಲಾತಿ ಸುಮಾರು 370 ಕ್ಕೆ ಏರಿಕೆ ಆಗಿದೆ. ಚಿಕ್ಕಬಳ್ಳಾಪುರ ಸತ್ಯ ಸಾಯಿ ಟ್ರಸ್ಟ್ ಹಾಗೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಸ್ಥೆ ಶಾಲಾ ಮಕ್ಕಳಿಗೆ ಉಪಾಹಾರ ವ್ಯವಸ್ಥೆ ಮಾಡಿರುವುದಕ್ಕೆ ಜಿಪಂ ಸದಸ್ಯನಾಗಿ ಅಭಿನಂದಿಸುತ್ತೇನೆ ಈ ಸಂಸ್ಥೆಗಳು 5 ಶಾಲೆಗಳಿಗೆ ಏಕ ಕಾಲದಲ್ಲಿ ಉಪಾ ಹಾರ ವ್ಯವಸ್ಥೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಸದುಪಯೋಗ ಪಡಿಸಿಕೊಳ್ಳಿ: ಗ್ರಾಪಂ ಸದಸ್ಯ ಲಕ್ಷ್ಮೀಕಾಂತ್ ಮಾತನಾಡಿ, ಶಿಕ್ಷಣವನ್ನು ಎಷ್ಟು ಅಭ್ಯಾಸ ಮಾಡುತ್ತೇವೋ ಅಷ್ಟೇ ಜ್ಞಾನಾರ್ಜನೆ ಆಗುತ್ತದೆ. ಸರ್ಕಾರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಬಿಸಿ ಊಟ , ಉಚಿತ ಪಠ್ಯ ಪುಸ್ತಕ, ಸಮವಸ್ರ್ತ ಹಾಗೂ ಕ್ಷೀರ ಭಾಗ್ಯ, ಸೇರಿದಂತೆ ಹಲವು ಯೋಜನೆಗಳನ್ನು ಶಾಲಾ ಮಕ್ಕಳಿಗೆ ನೀಡಲಾಗುತ್ತಿದೆ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ತಾಪಂ ಮಾಜಿ ಸದಸ್ಯ ಎನ್.ಮಂಜುನಾಥ್, ಗ್ರಾಪಂ ಅಧ್ಯಕ್ಷೆ ಲೀಲಾವತಿ , ಎಂಪಿಸಿಎಸ್ ಅಧ್ಯಕ್ಷ ಜಿ ಕೃಷ್ಣಪ್ಪ, ಮಾಜಿ ಅಧ್ಯಕ್ಷ ಆಂಜಿನಪ್ಪ, ಎಸ್‌ಡಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ, ಶಾಲಾ ಮುಖ್ಯ ಶಿಕ್ಷಕ ಮುನಿ ಪಾಪಣ್ಣ, ನರಸಿಂಹ ಮೂರ್ತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy; ಅಭಿನವ್ ಮನೋಹರ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
Mangaluru: ‘ಹೆಲಿಟೂರಿಸಂ’ಗೆ ಮುನ್ನುಡಿ ಬರೆದ ‘ಕುಡ್ಲ ಹೈ’ದರ್ಶನ
Mulki: ಉಗುಳಿದರೆ ದಂಡ; ಹಾಕುವವರು ಯಾರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.