ಗುಣಮಟ್ಟದ ರಸ್ತೆ ನಿರ್ಮಾಣ ಮಾಡಿ
Team Udayavani, May 24, 2020, 5:54 AM IST
ಆನೇಕಲ್: ಕನಕಪುರದಿಂದ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪೆರಿಫೆರಲ್ರಿಂಗ್ ರೋಡ್ ರಾಷ್ಟ್ರೀಯ ಹೆದ್ದಾರಿ ಗುಣಮಟ್ಟದಂತೆ ಇರಬೇಕಿದ್ದು ತ್ವರಿತಗತಿಯಲ್ಲಿ ಕೆಲಸ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದರು. ಪಟ್ಟಣದ ಪರಿವೀಕ್ಷಣಾ ಮಂದಿರದಲ್ಲಿ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡುವ ವೇಳೆ ನಿಯಮಗಳಿರುತ್ತವೆ. ಅದೇ ಮಾದರಿಯಲ್ಲಿ ಎಲ್ಲಾ ರಿಂಗ್ ರೋಡ್ ಗುಣಮಟ್ಟ ಕಾಪಾಡಿಕೊಳ್ಳಿ ಎಂದರು. ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಸತತ 2ತಿಂಗಳ ಕಾಲ ಕೆಲಸಗಳು ಸ್ಥಗಿತವಾಗಿದ್ದು ಕೂಡಲೇ ಕಾರ್ಮಿಕರನ್ನು ಕರೆತಂದು ಕಾಮಗಾರಿ ಕೈಗೆತ್ತಿಕೊಳ್ಳಿ ಎಂದು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ಶಾಸಕ ಬಿ.ಶಿವಣ್ಣ ಮಾತನಾಡಿ, ಪಟ್ಟಣದಲ್ಲಿ ನಿರ್ಮಾ ಣವಾಗುತ್ತಿರುವ ಅಂಬೇಡ್ಕರ್ ಭವನ ಕಟ್ಟಡಕ್ಕೆ ಜಿಲ್ಲಾಧಿಕಾರಿ ಖಾತೆಯಿಂದ ಸಮಾಜ ಕಲ್ಯಾಣ ಇಲಾಖೆ ಕೂಡಲೇ ಹಣ ವರ್ಗಾಯಿಸಬೇಕು. ರಾಜ್ಯ ಸರ್ಕಾರ ದಿಂದ ಹೂ ಬೆಳೆಗಾರರಿಗೆ ಇನ್ನೂ ಹೆಚ್ಚು ಪರಿಹಾರ ನೀಡಬೇಕು, ನೇಕಾರರಿಗೆ ತಿಂಗಳಿಗೆ 10-15 ಸಾವಿರ ರೂ. ಸಹಾಯಧನ ನೀಡಬೇಕು, ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ತಿಂಗಳಿಗೆ 10 ಸಾವಿರ ರೂ. ನೀಡುವಂತೆ ಡಿಸಿಎಂ ಗೋವಿಂದ ಕಾರಜೋಳ ಅವರ ಬಳಿ ಮನವಿ ಮಾಡಲಾಗಿದೆ ಎಂದರು.
ಪುರಸಭಾ ಸದಸ್ಯರಾದ ಎನ್.ಎಸ್.ಪದ್ಮನಾಭ್, ಕೃಷ್ಣ, ರೈತ ಮುಖಂಡರಾದ ದೊಡ್ಡ ಹಾಗಡ್ಡೆ ಹರೀಶ್ ಗೌಡ, ಅಶೋಕ್, ಮಧು, ಸುರೇಶ್, ಲೋಕೇಶ್, ಪ್ರಕಾಶ್, ಆನಂದ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.