ಸಿಎಎ: ಕಾಂಗ್ರೆಸ್‌ ಜನರ ದಾರಿ ತಪ್ಪಿಸುತ್ತಿದೆ


Team Udayavani, Jan 20, 2020, 3:00 AM IST

caa-jana

ದೇವನಹಳ್ಳಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದು ಪಡಿ ಕಾನೂನಿಂದ ದೇಶದ ಯಾವುದೇ ಮುಸಲ್ಮಾನರಿಗೆ ತೊಂದರೆ ಆಗುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಂದಾಯ ಮತ್ತಪೌರಾಡಳಿತ ಸಚಿವ ಆರ್‌.ಅಶೋಕ್‌ ತಿಳಿಸಿದರು.

ನಗರದ ಗಿರಿಯಮ್ಮ ವೃತ್ತದಲ್ಲಿರುವ ಬಿ.ಆರ್‌ ಅಂಬೇಡ್ಕರ್‌ ಭವನದಲ್ಲಿ ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ವತಿಯಿಂದ ದೇವನಹಳ್ಳಿ ಮಂಡಲದ ನೂತನ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳ ಪದಗ್ರಹಣ ಸಮಾರಂಭ ಮತ್ತು ಬಿಜೆಪಿ ಕಾರ್ಯಕರ್ತರಿಗೆ ಸನ್ಮಾನ ಹಾಗೂ ವಿವಿಧ ಪಕ್ಷಗಳ ಮುಖಂಡರುಗಳ ಪಕ್ಷ ಸೇರ್ಪಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹಲವು ವರ್ಷಗಳ ಪ್ರಯತ್ನ: ದೇಶದಲ್ಲಿ ಪೌರತ್ವ ಕಾಯಿದೆಗೆ ತಿದ್ದುಪಡಿ ತರಲು ಸುಮಾರು ವರ್ಷಗಳಿಂದ ಹಲವಾರು ನಾಯಕರು ಪ್ರಯತ್ನಿಸಿದ್ದಾರೆ.ಯುಪಿಎ ಅವಧಿ ಯಲ್ಲಿ ಪ್ರಧಾನಿಯಾಗಿದ್ದ ಮನಮೋಹನ್‌ ಸಿಂಗ್‌ ಅವರು ಪೌರತ್ವ ತಿದ್ದುಪಡಿಗೆ ಸಂಬಂಧಸಿದಂತೆ ಲೋಕ ಸಭೆಯಲ್ಲಿ ಮಾತ‌ನಾಡಿದ್ದರು ಎಂದು ತಿಳಿಸಿದರು. ಇದರ ಬಗ್ಗೆ ಕಾಂಗ್ರೆಸ್‌ ಹಾಗೂ ಎಡ ಪಕ್ಷಗಳು ದೇಶದ ಜನರ ದಾರಿ ತಪ್ಪಿಸುತ್ತಿದ್ದಾರೆ.

ಯಾರಿಗೂ ತೊಂದರೆ ಇಲ್ಲ: ಪೌರತ್ವ ತಿದ್ದುಪಡಿ ಕಾನೂನಿನ ಬಗ್ಗೆ ಪ್ರತಿಯೊಬ್ಬರೂ ತಿಳಿಯಬೇಕು. ಇದರಿಂದ ಯಾರಿಗೂ ತೊಂದರೆ ಆಗುವುದಿಲ್ಲ. ಪಾಕಿಸ್ತಾನ, ಆಫ್ಘಾನಿಸ್ಥಾನ, ಬಾಂಗ್ಲಾದೇಶಗಳಲ್ಲಿ ಹಿಂದೂಗಳು ಸೇರಿದಂತೆ ಇತರೆ ಅಲ್ಪಸಂಖ್ಯಾತರನ್ನು 2ನೇ ದರ್ಜೆಯ ಪ್ರಜೆಗಳಂತೆ ನಡೆಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.

ಪಕ್ಷ ಸಂಘಟಿಸಿ: ಇತಿಹಾಸದಲ್ಲಿ ಮೊದಲ ಬಾರಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿದೆ. ಹೊಸಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ನಮ್ಮ ಪಕ್ಷದವರೆ ಚೂರಿ ಹಾಕಿದ್ದರಿಂದ ಅಲ್ಲಿ ನಮ್ಮ ಅಭ್ಯರ್ಥಿ ಸೋಲುವಂತಾಯಿತು.ಕೇಂದ್ರ ಹಾಗೂ ರಾಜ್ಯದಲ್ಲಿ ನಮ್ಮದೇ ಪಕ್ಷ ಅಧಿಕಾರದಲ್ಲಿದ್ದು, ಸರ್ಕಾರಗ ಅಭಿವೃದ್ಧಿ ಕಾರ್ಯಕ್ರಮಗಳು, ಯೋಜನೆಗಳ ಬಗ್ಗೆ ಜನರಿಗೆ ತಿಳಿಸಬೇಕು. ಸ್ವಾರ್ಥ, ಸ್ವಹಿತಾಸಕ್ತಿ ಬಿಟ್ಟು ಪಕ್ಷ ಸಂಘಟನೆ ಮಾಡಬೇಕು.

ಟಿಕೆಟ್‌ ಕೇಳಲು ಬರಬೇಡಿ: ಕೇವಲ ನಾಯಕರುಗಳ ಮನೆಗಳನ್ನು ಸುತ್ತಿಕೊಂಡು ಇದ್ದರೆ ಸಾಲದು, ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷವನ್ನು ತಳ ಮಟ್ಟದಿಂದ ಬಲಗೊಳಿಸಬೇಕು. ಮುಂದಿನ ಗ್ರಾಪಂ, ಜಿಪಂ , ತಾಪಂ , ಚುನಾವಣೆಗಳಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಬೇಕು. ಇಲ್ಲವಾದರೆ, ವಿಧಾನಸಭಾ ಚುನಾವಣೆಯ ಟಿಕೇಟ್‌ ಕೇಳಲು, ನಮ್ಮ ಮನೆ ಬಾಗಲಿಗೆ ಯಾರೂ ಬರಬೇಡಿ ಎಂದರು.

ಬಜೆಟ್‌ ನಂತರ ಅಭಿವೃದ್ಧೀ ಪರ್ವ: ನೆರೆ ಹಾವಳಿ ಯಿಂದ ರಾಜ್ಯದ ಅಭಿವೃದ್ಧಿ ಕಾರ್ಯದಲ್ಲಿ ಒಂದಿಷ್ಟು ಹಿನ್ನಡೆಯಾಗಿದೆ.ಬಜೆಟ್‌ ನಂತರ ಅಭಿವೃದ್ಧಿ ಕಾರ್ಯಗಳು ಸಮಾರೋಪ ಹಾದಿಯಲ್ಲಿ ಸಾಗುತ್ತದೆ. ನೂತನ ಅಧ್ಯಕ್ಷರು, ಪದಾಧಿಕಾರಿಗಳು ಪಕ್ಷದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ವಿದೇಶದಿಂದ ಬಂದ ನಂತರ ವಿಸ್ತರಣೆ: ಮುಖ್ಯ ಮಂತ್ರಿಗಳು ವಿದೇಶ ಪ್ರವಾಸಕ್ಕೆ ಹೋಗುತ್ತಿದ್ದು ಅವರು ಬಂದ ಕೂಡಲೇ ಸಚಿವ ಸಂಪುಟ ರಚನೆ ಆಗುತ್ತದೆ. ದೇವನಹಳ್ಳಿ ಮುಂದಿನ ಹತ್ತು ವರ್ಷದಲ್ಲಿ ಬೆಂಗಳೂರು ಸಿಟಿತಯಂತೆ ಬೆಳೆಯಲಿದೆ. ದೇವನಹಳ್ಳಿಗೆ ಸಾಕಷ್ಟು ಇತಿಹಾಸವಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇವನಹಳ್ಳಿ ವಿಶ್ವದ ಗಮನ ಸೆಳೆದಿದೆ ಎಂದು ಹೇಳಿದರು.  ನೂತನ ದೇವನಹಳ್ಳಿ ಮಂಡಲ ಅಧ್ಯಕ್ಷ ಬೊಮ್ಮವಾರ ಸುನೀಲ್‌ ಮಾತನಾಡಿ, ಪಕ್ಷದ ಎಲ್ಲಾ ಕಾರ್ಯಕರ್ತರು ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆ ಮಾಡಲಾಗುವುದು ಎಂದರು.

ಮಾಜಿ ಶಾಸಕ ಜಿ.ಚಂದ್ರಣ್ಣ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಎಚ್‌.ಎಂ ರವಿಕುಮಾರ್‌, ಪ್ರಭಾಕರ್‌, ಬಿಜೆಪಿ ರಾಷ್ಟ್ರೀಯ ಪರಿಷತ್‌ ಸದಸ್ಯ ಎ.ಸಿ ಗುರುಸ್ವಾಮಿ, ಬಿಜೆಪಿ ರಾಜ್ಯ ಪರಿಷತ್‌ ಸದಸ್ಯ ದೇಸು ನಾಗರಾಜ್‌, ರಾಜ್ಯ ರೈತ ಮೋರ್ಚಾ ಮಾಜಿ ಉಪಾಧ್ಯಕ್ಷ ನಾರಾಯಣ ಗೌಡ, ತಾ.ಸೊಸೈಟಿ ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಕೆ.ನಾಗೇಶ್‌, ಜಿಲ್ಲಾ ಪ್ರ.ಕಾರ್ಯದರ್ಶಿ ನಾರಾಯಣಸ್ವಾಮಿ,

ರೈತ ಮೋರ್ಚಾ ಜಿಲ್ಲಾಧ್ಯಕ್ಷ ಎನ್‌.ರಾಜ ಗೋಪಾಲ್‌, ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ನೀಲೇರಿ ಮಂಜುನಾಥ್‌, ರವಿಕುಮಾರ್‌,ಮೇಳೆಕೋಟೆ ಗ್ರಾಪಂ ಉಪಾಧ್ಯಕ್ಷ ಚಿದಾನಂದ್‌, ಪುರಸಭಾ ಸದಸ್ಯೆ ಲಕ್ಷ್ಮೀ, ತಾ.ಮಹಿಳಾ ಘಟಕದ ಅಧ್ಯಕ್ಷೆ ನಾಗವೇಣಿ, ಪ್ರಧಾನ ಕಾರ್ಯದರ್ಶಿ ವಿಮಲಾ, ಜಿಲ್ಲಾ ಮಹಿಳಾ ಘಟಕದ ಪ್ರ.ಕಾರ್ಯದರ್ಶಿ ಗಾಯಿತ್ರಿ, ಎಸ್‌ ಟಿ ಮೂರ್ಚಾ ಜಿಲ್ಲಾಧ್ಯಕ್ಷ ಮುನಿ ಕೃಷ್ಣಪ್ಪ, ಶಿವಪ್ರಸಾದ್‌ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

1-gopal

Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ

5

Chocolate ಕೇವಲ ಸಸ್ಯಾಹಾರವೇ? ಸಸ್ಯಾಹಾರಿಗಳೇ ಗಮನಿಸಿ…

jairam ramesh

Maharashtra polls; ಫಲಿತಾಂಶದ ಬಳಿಕವೇ ಸಿಎಂ ಯಾರೆಂದು ನಿರ್ಧಾರ: ಕಾಂಗ್ರೆಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

9

Kasaragod: ಪಟಾಕಿ ದುರಂತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

death

Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ

4

Kasaragod: ಸ್ಕೂಟರ್‌ ಅಪಘಾತ; ಸವಾರನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.