ಅಭ್ಯರ್ಥಿಗಳ ಪರ ಘಟಾನುಘಟಿಗಳ ಪ್ರಚಾರ

Team Udayavani, Apr 11, 2019, 3:00 AM IST

abhyarthi

ದೇವನಹಳ್ಳಿ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಅಖಾಡ ರಂಗೇರಿದ್ದು, ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಘಟಾನುಘಟಿ ನಾಯಕರು ಆಗಮಿಸುತ್ತಿದ್ದಾರೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕೂ ತಾಲೂಕುಗಳು ಬರಲಿವೆ. ಅಭ್ಯರ್ಥಿಗಳು ಬೆಂಬಲಿಗರೊಂದಿಗೆ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಯುಗಾದಿ ಹಬ್ಬದ ಬಳಿಕ ಪ್ರಚಾರದ ಅಬ್ಬರ ಹೆಚ್ಚಾಗಿದೆ. ಮತ ಬೇಟೆಗಾಗಿ ಪೈಪೋಟಿ ಹೆಚ್ಚಾಗಿದೆ.

ಕೃಷ್ಣ, ದೇವೇಗೌಡ, ಸಿದ್ಧರಾಮಯ್ಯ ಪ್ರಚಾರ: ಸೋಮವಾರವಷ್ಟೇ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಎನ್‌.ಬಚ್ಚೇಗೌಡರ ಪರವಾಗಿ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ತಾಲೂಕಿನ ಚಪ್ಪರದಕಲ್ಲು ಮತ್ತು ಆವತಿ ಗ್ರಾಮಗಳಲ್ಲಿ ಕಾರ್ಯಕರ್ತರ ಸಭೆಗಳಲ್ಲಿ ಭಾಗವಹಿಸಿ ಮಾತನಾಡಿದರು.

ಮಂಗಳವಾರ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಂ.ವೀರಪ್ಪ ಮೊಯ್ಲಿ ಪರವಾಗಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಜಂಟಿಯಾಗಿ ಪ್ರಚಾರ ನಡೆಸಿದರು.

ತಂದೆಯ ಪರ ಮಕ್ಕಳ ಪ್ರಚಾರ: ಬುಧವಾರ ವಿಜಯಪುರ ನಗರದಲ್ಲಿ ಸಚಿವ ಡಿ.ಕೆ.ಶಿವಕುಮಾರ್‌ ಸಹ ಪ್ರಚಾರದಲ್ಲಿ ತೊಡಗಿದ್ದರು. ಈಗಾಗಲೇ ಅಭ್ಯರ್ಥಿಗಳು 4 ತಾಲೂಕುಗಳಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಬಿ.ಎನ್‌.ಬಚ್ಚೇಗೌಡರ ಪುತ್ರ ಶರತ್‌ ಬಚ್ಚೇಗೌಡ ನಗರ ಮತ್ತು ಗ್ರಾಮಗಳಲ್ಲಿ ತಂದೆಯ ಪರವಾಗಿ ಪ್ರಚಾರದಲ್ಲಿ ತೊಡಗಿದ್ದಾರೆ. ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ತಂದೆಯ ಪರವಾಗಿ ಪ್ರಚಾರ ಮಾಡಿದರು. ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಪಕ್ಷದ ಅಭ್ಯರ್ಥಿ ಪ್ರಚಾರ ನಡೆಸಿದರು.

ರಂಗೇರಿದ ಚುನಾವಣಾ ಕಣ: ಮಂಕು ಕವಿದಿದ್ದ ಪ್ರಚಾರ ಹಬ್ಬದ ನಂತರ ಚುರುಕುಗೊಂಡಿದೆ. ಚುನಾವಣಾ ಕಣದಲ್ಲಿ ಬಿಎಸ್‌ಪಿ, ಸಿಪಿಎಂ, ಕೆಜೆಪಿ ಪಕ್ಷಗಳ ಅಭ್ಯರ್ಥಿಗಳು ಇದ್ದಾರೆ. ಆದರೆ, ಜೆಡಿಎಸ್‌, ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿ ಹಾಗೂ ಬಿಜೆಪಿ ಅಭ್ಯರ್ಥಿಗಳ ನಡುವೆ ನೇರ ಹಣಾಹಣಿ ನಡೆಯುತ್ತಿದೆ.

ನಾಮಪತ್ರ ಸಲ್ಲಿಸಿದ ನಂತರ ಇಲ್ಲಿಯವರೆಗೂ ಕ್ಷೇತ್ರದಲ್ಲಿ ಸ್ಟಾರ್‌ ಪ್ರಚಾರಕರಾಗಲಿ ಅಥವಾ ಪಕ್ಷಗಳ ಘಟಾನುಘಟಿಗಳು ಪ್ರಚಾರಕ್ಕೆ ಬಾರದ್ದರಿಂದ ಚುನಾವಣಾ ಕಣಕ್ಕೆ ಮಂಕು ಕವಿದಿತ್ತು. ಈಗಾಗಲೇ ಗ್ರಾಮಗಳಲ್ಲಿ ಮತ್ತು ನಗರಗಳಲ್ಲಿ ಅಭ್ಯರ್ಥಿಗಳ ಪರವಾಗಿ ಬಿಸಿಲನ್ನೂ ಲೆಕ್ಕಿಸದೆ ವಿವಿಧ ರೀತಿಯಲ್ಲಿ ಭರದ ಪ್ರಚಾರ ನಡೆಯುತ್ತಿದೆ.

ಚುನಾವಣೆಗೆ ಇನ್ನು 10 ದಿನಗಳು ಬಾಕಿ ಇರುವುದರಿಂದ ಅಭ್ಯರ್ಥಿಗಳು ಮತಕ್ಕಾಗಿ ಅನೇಕ ಕಸರತ್ತುಗಳನ್ನು ಮಾಡುತ್ತಿದ್ದಾರೆ. ಕ್ಷೇತ್ರದಲ್ಲಿ ಬಿಎಸ್‌ಪಿ ಅಭ್ಯರ್ಥಿ ದ್ವಾರಕಾನಾಥ್‌ ಮತ್ತು ಸಿಪಿಎಂ ಅಭ್ಯರ್ಥಿ ವರಲಕ್ಷ್ಮೀ, ಕೆಜೆಪಿ ಅಭ್ಯರ್ಥಿ ನಾಗೇಂದ್ರ ರಾಮ್‌ ಶಿಂಧೆ ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ.

ಮತದಾರರ ನಾಡಿ ಮಿಡಿತ ನಿಗೂಢ: ಚುನಾವಣೆಯಲ್ಲಿ ತಮ್ಮ ತಮ್ಮ ಪಕ್ಷಗಳ ಅಭ್ಯರ್ಥಿಗಳನ್ನು ಗೆಲ್ಲಿಸಲು ಘಟಾನುಘಟಿ ನಾಯಕರು ಜಿಲ್ಲೆಯಲ್ಲಿ ಸಭೆ, ಸಮಾರಂಭ, ರೋಡ್‌ ಶೋ ಮುಂತಾದವುಗಳ ಮೂಲಕ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.

ಪ್ರಚಾರದ ವೇಳೆ ಮತದಾರರನ್ನು ಸೆಳೆಯಲು ಇನ್ನಿಲ್ಲದ ಆಶ್ವಾಸನೆ, ಘೋಷಣೆ, ಭರವಸೆಗಳನ್ನು ಮೊಳಗಿಸುತ್ತಿದ್ದಾರೆ. ಆದರೆ, ಮತದಾರ ಪ್ರಭುವಿನ ನಾಡಿ ಮಿಡಿತ ಮಾತ್ರ ಇನ್ನೂ ನಿಗೂಢವಾಗಿದೆ. ಯಾವ ಪಕ್ಷದ ಅಭ್ಯರ್ಥಿಗೆ ವಿಜಯ ಮಾಲೆ ಪ್ರಾಪ್ತವಾಗುತ್ತದೆ ಎಂಬುದು ಮಾತ್ರ ತೀವ್ರ ಕುತೂಹಲ ಕೆರಳಿಸಿದೆ.

* ಎಸ್‌ ಮಹೇಶ್‌

ಟಾಪ್ ನ್ಯೂಸ್

Eshwar–forest

Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ

Congress-Symbol

Commission: 60 ಪರ್ಸೆಂಟ್‌ ಕಮಿಷನ್‌: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Eshwar–forest

Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ

Congress-Symbol

Commission: 60 ಪರ್ಸೆಂಟ್‌ ಕಮಿಷನ್‌: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.