ನಾಡಬಾಂಬ್‌ನೊಂದಿಗೆ ಬೇಟೆಯಾಡುತ್ತಿದ್ದ ಆರೋಪಿ ಸೆರೆ


Team Udayavani, Jan 24, 2018, 11:57 AM IST

bomb.jpg

ದೊಡ್ಡಬಳ್ಳಾಪುರ: ನಾಡಬಾಂಬ್‌ ಬಳಸಿ ಕಾಡುಪ್ರಾಣಿಗಳನ್ನು ಬೇಟೆಯಾಡಲು ಮುಂದಾಗಿದ್ದ ಓರ್ವನನ್ನು ಮಂಗಳವಾರ ಸಂಜೆ ಬಂಧಿಸಿರುವ ಅರಣ್ಯ ಇಲಾಖೆ ಸಿಬ್ಬಂದಿ, ಆತನಿಂದ ಬರೋಬ್ಬರಿ 27ನಾಡಬಾಂಬ್‌(ಸಿಡಿಮದ್ದು) ಸೇರಿದಂತೆ ಉರುಳುಗಳನ್ನು ವಶಕ್ಕೆ ಪಡೆದಿದ್ದಾರೆ. 

ಬ್ಯಾಡರಹಳ್ಳಿ ಗ್ರಾಮದ ಮುತ್ತುರಾಜು (27) ಬಂಧಿತ ಆರೋಪಿ. ಈತ, ತಾಲೂಕಿನ ಸಾಸಲು ಹೋಬಳಿ ವ್ಯಾಪ್ತಿಯ ಮುದ್ದೇನಹಳ್ಳಿ ಮೀಸಲು ಅರಣ್ಯಪ್ರದೇಶದ ಚೀಲೇನಹಳ್ಳಿ ಅರಣ್ಯದಲ್ಲಿ ಬೇಟೆಯಾಡಲು ಮುಂದಾಗಿದ್ದ.

ತಿಪ್ಪೂರು ಬಳಿಯ ಅರಣ್ಯದಲ್ಲಿ ಅರಣ್ಯ ಸಿಬ್ಬಂದಿ ಹುಲಿ ಗಣತಿ ನಡೆಸುತ್ತಿದ್ದರು. ಮಾಹಿತಿ ಅರಿಯದ ಮುತ್ತುರಾಜ್‌ ಸಂಜೆಯಾಗುತ್ತಿದ್ದಂತೆ ನಾಡಬಾಂಬ್‌ನೊಂದಿಗೆ ಪ್ರಾಣಿಗಳನ್ನು ಬೇಟೆಯಾಡಲು ಅರಣ್ಯಕ್ಕೆ ಬಂದಿದ್ದ. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ವಿಚಾರಿಸಿದಾಗ ಬೇಟೆಯಾಡಲು ನಾಡಬಾಂಬ್‌ನೊಂದಿಗೆ ಬಂದಿರುವುದು ಬಹಿರಂಗವಾಗಿದೆ. ಕೂಡಲೇ ಆತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.

ಪ್ರಾಣಿಗಳ ಬೇಟೆ ಹೇಗೆ?: ಅರಣ್ಯದಲ್ಲಿ ಕಾಡುಪ್ರಾಣಿಗಳು ಓಡಾಡುವ ಆಯಾ ಕಟ್ಟಿನ ಜಾಗದಲ್ಲಿ ನಾಡಬಾಂಬ್‌ಗಳನ್ನು ಹುದುಗಿಸಲಾಗುತ್ತದೆ. ಪ್ರಾಣಿಗಳು ನಾಡಬಾಂಬ್‌ನ್ನು ತುಳಿದ ಕ್ಷಣವೇ ಸ್ಫೋಟಗೊಂಡು ಸಾವನ್ನಪ್ಪುತ್ತವೆ. ಮೃತಪ್ರಾಣಿಗಳನ್ನು ಹೊತ್ತೂಯ್ಯಲಾಗುತ್ತದೆ.  

ದೊಡ್ಡಬಳ್ಳಾಪುರ ಉಪವಲಯ ಅರಣ್ಯಾಧಿಕಾರಿ ರಾಜಶೇಖರ್‌ ಮಾಹಿತಿ ನೀಡಿ, ಕಾಡುಪ್ರಾಣಿಗಳ ಬೇಟೆ ಕುರಿತು ಹಲವು ರೈತರು ಇಲಾಖೆಗೆ ದೂರು ನೀಡಿದ್ದರು. ಈಗ ಓರ್ವ ಬಂಧಿಯಾಗಿದ್ದು, ವಿಚಾರಣೆ ಬಳಿಕ ಇನ್ನೂ ಮತ್ತಿತರು ಸಿಗುವ ಸಾಧ್ಯತೆಯಿದೆ ಎಂದರು. ಕಾರ್ಯಾಚರಣೆಯಲ್ಲಿ ಶ್ರೀನಿವಾಸರಾಯಪಲ್ಲಿ, ಕಿರಣ್‌ಕುಮಾರ್‌, ಅಯ್ನಾಳಪ್ಪ, ಸಂಜಯ್‌ಕುಮಾರ್‌ ಇದ್ದರು.

ಟಾಪ್ ನ್ಯೂಸ್

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

7

Kasaragod: ಅಂಗಡಿಗೆ ನುಗ್ಗಿದ ಕಾಡು ಹಂದಿ

5

Kadaba: ಮೇಯಲು ಬಿಟ್ಟ ದನದ ಕಾಲು ಕಡಿದ ವ್ಯಕ್ತಿ; ದೂರು

dw

Siddapura: ವಿದ್ಯುತ್‌ ಲೈನಿಗೆ ಕೊಕ್ಕೆ ತಾಗಿ ಕಾರ್ಮಿಕ ಸಾವು

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.