ಗಣರಾಜ್ಯೋತ್ಸವ ಸಂವಿಧಾನ ಜಾರಿ ದಿನವಾಗಿ ಆಚರಿಸಿ


Team Udayavani, Jan 27, 2019, 7:46 AM IST

ambdkr.jpg

ಆನೇಕಲ್‌: ಗಣರಾಜ್ಯೋತ್ಸವವನ್ನು ಸಂವಿಧಾನ ಜಾರಿ ದಿನವನ್ನಾಗಿ ಆಚರಣೆ ಮಾಡಬೇಕು ಎಂದು ಪ್ರಜಾ ವಿಮೋಚನ ಚಳವಳಿ ಸಂಘಟನೆ ರಾಜ್ಯಾಧ್ಯಕ್ಷ ಆನೇಕಲ್‌ ಕೃಷ್ಣಪ್ಪ ಒತ್ತಾಯಿಸಿದರು.ಪಟ್ಟಣದಲ್ಲಿ ಪ್ರಜಾ ವಿಮೋಚನಾ ಚಳವಳಿ ಸಂಘಟನೆಯಿಂದ ಹಮ್ಮಿಕೊಂಡಿದ್ದ ಸಂವಿಧಾನದ ಜಾರಿ ದಿನಾಚರಣೆಯಲ್ಲಿ ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ದೇಶಕ್ಕೆ ದೊಡ್ಡ ಸಂವಿಧಾನ ನೀಡಿದ ಮಹಾನ್‌ ಮಾನವತಾವಾದಿ ಡಾ.ಅಂಬೇಡ್ಕರ್‌ ಎಲ್ಲಾ ಸಮು ದಾಯಗಳಿಗೆ ಅನುಕುಲವಾಗುವಂತೆ ಹಾಗೂ ದೇಶದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರ ವಿಚಾರ ಧಾರೆಯ ಪುಸ್ತಕಗಳು ದೇಶದಾದ್ಯಂತ ಎಲ್ಲಾ ರಾಜ್ಯಗಳ ಭಾಷೆಗಳಿಗೆ ಅನುವಾದಿಸಿ ಪ್ರಚಾರ ಮಾಡಬೇಕು ಎಂದು ಆಗ್ರಹಿಸಿದರು.

ನಿರುದ್ಯೋಗ್ಯ ಭತ್ಯೆ ನೀಡಿ: ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ನೀಡಿದರೆ ಸ್ವಲ್ಪ ಸಮಾನತೆಯನ್ನು ಕಾಣಬಹುದು. ನಿರುದ್ಯೋಗಿ ಯುವಕರಿಗೆ ನಿರು ದ್ಯೋಗ್ಯ ಭತ್ಯೆ ನೀಡಲು ಸರ್ಕಾರಗಳು ಮುಂದಾ ಗಬೇಕೆಂದು ಸಲಹೆ ನೀಡಿದರು.

ಕೇಂದ್ರದ ಕ್ರಮಕ್ಕೆ ಖಂಡನೆ: ಕೇಂದ್ರ ಸರ್ಕಾರ ಗಣರಾಜ್ಯೋತ್ಸವದ ಜಾಹಿರಾತಿನಲ್ಲಿ ಡಾ.ಅಂಬೇ ಡ್ಕರ್‌ ಭಾವಚಿತ್ರವನ್ನು ಬಳಸದಿರುವುದನ್ನು ನೋಡಿದರೆ ಪ್ರಧಾನಿ ನರೇಂದ್ರ ಮೋದಿಯವರು ದಲಿತರಿಗೆ ಯಾವ ರೀತಿ ನ್ಯಾಯ ಕೊಡುತ್ತಾರೆ ಎಂಬ ಅನು ಮಾನ ಕಾಡುತ್ತಿದೆ. ಇಂತಹ ಧೋರಣೆಯನ್ನು ಖಂಡಿಸುತ್ತೇವೆ. ಸಂವಿಧಾನವನ್ನು ಜಾರಿಗೆ ತಂದ ದಿನವೇ ಅಂಬೇಡ್ಕರ್‌ ಭಾವಚಿತ್ರವಿಲ್ಲದಂತೆ ಮಾಡಿ ದ ಕೇಂದ್ರದ ಧೋರಣೆ ವಿಚಿತ್ರವಾಗಿದೆ. ದೇಶದಲ್ಲಿ ಸಂವಿಧಾನದಿಂದ ನಾನು ಗೆದ್ದು ಬಂದೆ ಎಂದು ಹೇಗೆ ಅವರು ಹೇಳುತ್ತಾರೆ ಎಂದು ಪ್ರಶ್ನಿಸಿದರು.

ಇಂಗ್ಲಿಷ್‌ ಮಾಧ್ಯಮ ಸ್ತುತ್ಯಾರ್ಹ: ರಾಜ್ಯ ಸರ್ಕಾರ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ಜಾರಿಗೆ ತರಲು ಹೊರಟಿರುವುದು ಶ್ಲಾಘನೀಯ ಕ್ರಮವಾಗಿದೆ. ಇದರಿಂದ ದೀನ, ದಲಿತರೂ ಉತ್ತ ಮ ಶಿಕ್ಷಣ ಪಡೆಯಲು ಸಾದ್ಯವಾಗಲಿದೆ. ಕೇವಲ ಮಾತನಾಡುವ ಬದಲು ಯೋಜನೆಗಳು ಕಾರ್ಯರೂ ಪಕ್ಕೆ ಬಂದಾಗ ಪ್ರಯೋಜನವಾಗಲಿವೆ ಎಂದರು.

ಬೆಂಗಳೂರು ವಿಭಾಗೀಯ ಅಧ್ಯಕ್ಷ ಯಡವನ ಹಳ್ಳಿ ಕೃಷ್ಣಪ್ಪ ಮಾತನಾಡಿ, ಸಂವಿಧಾನ ರಚನೆಗೆ ಅನೇಕ ಮಹಾನೀಯರು ದುಡಿದಿದ್ದಾರೆ. ಅದರಲ್ಲಿ ಬಹಳ ಮುಖ್ಯವಾದವರು ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್‌. ಆದರೆ, ದೇಶದಲ್ಲಿ ಕೇವಲ ಗಾಂಧೀಜಿ ಯವರನ್ನೇ ಮಾತ್ರ ಬಿಂಬಿಸಿ, ಅಂಬೇಡ್ಕರ್‌ರನ್ನು ಕಡೆಗಣಿಸಲಾಗಿದೆ. ರಾಷ್ಟ್ರೀಯ ಹಬ್ಬಗಳಿಗೆ ಮಾತ್ರ ಮಹನೀಯರು ಸೀಮಿತವಾಗಬಾರದು ಎಂದು ತಿಳಿಸಿದರು.

ಬೆಂಗಳೂರು ಜಿಲ್ಲಾಧ್ಯಕ್ಷ ಅಧ್ಯಕ್ಷ ಕೊಪ್ಪಗೇಟ್ ರಾಮಾಂಜಿನಪ್ಪ, ಕಸಬಾ ಹೋಬಳಿ ಅಧ್ಯಕ್ಷ ಯಲ್ಲಪ್ಪ, ಜಿಲ್ಲಾ ಕಾರ್ಯದರ್ಶಿ ವಿಜಯಕುಮಾರ್‌, ಸಂಘಟನೆ ಮುಖಂಡರಾದ ರಾಜಪ್ಪ, ಕೊಪ್ಪ ಗೋಪಿ, ವಜ್ರಪ್ಪ, ಮಡಿವಾಳ ನಾಗರಾಜು, ಮಂಜು ನಾಥ್‌, ಪ್ರಸನ್ನ, ರಾಜು, ಮುರಳಿ ಮತ್ತು ಉಪೇಂದ್ರ ಮುಂತಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.