ಸರಗಳ್ಳನನ್ನು ಹಿಡಿದ ಆಟೋ ಚಾಲಕ
ಪೋಲಿಸ್ ಆಯುಕ್ತರಿಂದ ಪ್ರಂಶಸೆ
Team Udayavani, Oct 10, 2021, 10:30 AM IST
ಬೆಂಗಳೂರು: ಮಹಿಳೆಯ ಸರ ಕಳವು ಮಾಡಿ ಪರಾರಿಯಾಗುತ್ತಿದ್ದ ಆರೋಪಿಯನ್ನು ಆಟೋ ಚಾಲಕರೊಬ್ಬರು ಸುಮಾರು 2 ಕಿ.ಮೀ. ಹಿಂಬಾಲಿಸಿ ಹಿಡಿದು ಪೊಲೀಸರಿಗೊಪ್ಪಿಸಿರುವ ಪ್ರಶಂಸನಿಯ ಪ್ರಸಂಗ ಸೋಲದೇವನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದಾಬಸಪೇಟೆ ನಿವಾಸಿ ಕೇಶವಮೂರ್ತಿ(31)
ಬಂಧಿತ. ಆರೋಪಿಯಿಂದ 40 ಸಾವಿರ ರೂ. ಮೌಲ್ಯದ 9.5 ಗ್ರಾಂ ಚಿನ್ನದ ಸರ ವಶಕ್ಕೆ ಪಡೆಯಲಾಗಿದೆ. ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡುವ ಆಟೋ ಚಾಲಕ ರುದ್ರೇಶ್ ಎಂಬುವರು ಸುಮಾರು 2ಕಿ.ಮೀ. ಹಿಂಬಾಲಿಸಿ ಆರೋಪಿಯನ್ನು ಹಿಡಿದುಕೊಂಡು ಪೊಲೀಸರಿಗೊಪ್ಪಿಸಿದ್ದಾರೆ.
ರುದ್ರೇಶ್ ಕಾರ್ಯಕ್ಕೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಉತ್ತರ ವಿಭಾಗ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಚಿಕ್ಕಬಾಣವಾರ ನಿವಾಸಿ ಪುಷ್ಪಾ (32) ತಮ್ಮ ಒಂದು ವರ್ಷದ ಮಗುಹಾಗೂ ಪಕ್ಕದ ಮನೆಯ ಮಹಿಳೆಯೊಬ್ಬರ ಸಮೀಪದಲ್ಲಿರುವ ದುರ್ಗಾಪರಮೇಶ್ವರಿ ದೇವಾಲಯಕ್ಕೆ ನಡೆದುಕೊಂಡು ಹೋಗಿ, ವಾಪಸ್ ಬರುತ್ತಿದ್ದರು.
ಇದನ್ನೂ ಓದಿ;- ಭೂಕಂಪ ಅನಾಹುತಕ್ಕೆ ಸರ್ಕಾರವೇ ಹೊಣೆ
ಈ ವೇಳೆ ಹಿಂದಿನಿಂದ ಬಂದ ಆರೋಪಿ, ಪುಷ್ಪಾ ಅವರ ಚಿನ್ನದ ಸರ ಕಸಿದುಕೊಂಡಿದ್ದಾನೆ. ಆಗ ಮಹಿಳೆ ಪ್ರತಿರೋಧ ವ್ಯಕ್ತಪಡಿಸಿದ್ದಾರೆ. ಆದರೂ ಆರೋಪಿ, ಮಗುವಿನ ಸಮೇತ ಮಹಿಳೆಯನ್ನು ತಳ್ಳಿ ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದ. ಅದರಿಂದ ಮಹಿಳೆಯ ಕೈ, ಕುತ್ತಿಗೆ ಭಾಗದಲ್ಲಿ ಗಾಯಗಳಾಗಿವೆ. ಆರೋಪಿ ಓಡುವಾಗ ಮಹಿಳೆ ಜೋರಾಗಿ ಕೂಗಿಕೊಂಡಿದ್ದಾರೆ.
ಅಲ್ಲೇ ಇದ್ದ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡುವ ಆಟೋ ಚಾಲಕ ರುದ್ರೇಶ್ ಆರೋಪಿಯನ್ನು ಸುಮಾರು ಎರಡು ಕಿ.ಮೀಟರ್ ಹಿಂಬಾಲಿಸಿದ್ದಾರೆ. ಆಗ ಆರೋಪಿ ಬಡಿಗೆಯಿಂದ ರುದ್ರೇಶ್ ಮೇಲೆ ಹಲ್ಲೆ ನಡೆಸಿದ್ದಾನೆ. ಆದರೂ ಬಿಡದ ರುದ್ರೇಶ್ ಆರೋಪಿಯನ್ನು ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ಸ್ಥಳಕ್ಕೆ ಧಾವಿಸಿದ ಪಿಎಸ್‌ಐ ಎಂ.ಜೆ.ಶಿವರಾಜು ಮತ್ತು ತಂಡ ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ಆರೋಪಿ ಪಿಯುಸಿ ವ್ಯಾಸಂಗ ಮಾಡಿದ್ದು, ನರ್ಸಿಂಗ್ ಹೋಮ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ. ಒಂದು ತಿಂಗಳ ಹಿಂದೆ ಕೆಲಸ ಬಿಟ್ಟಿದ್ದ. ಯಾವುದೇ ಕೆಲಸವಿಲ್ಲದೆ, ಜೀವನ ನಿರ್ವಹಣೆಗಾಗಿ ಕಳ್ಳತನ ಕೃತ್ಯದಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ಹೇಳಿದರು.
ಬಹುಮಾನ ಘೋಷಣೆ
ಧೈರ್ಯ ಪ್ರದರ್ಶಿಸಿ ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಆಟೋ ಚಾಲಕ ರುದ್ರೇಶ್‌ಗೆ ನಗರ ಪೊಲೀಸ್ ಆಯುಕ್ತರು ಮತ್ತು ಉತ್ತರ ವಿಭಾಗ ಉಪ ಪೊಲೀಸ್ ಆಯುಕ್ತರು ಬಹುಮಾನ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.