ಮಕ್ಕಳೇ ಈಜು ಕಲಿತು ಆರೋಗ್ಯ ವೃದ್ಧಿಸಿಕೊಳ್ಳಿ

Team Udayavani, Jan 30, 2019, 7:29 AM IST

makkale.jpg

ದೇವನಹಳ್ಳಿ: ತಾಲೂಕಿನ ಚೌಡಪ್ಪನಹಳ್ಳಿ ನಳಂದ ಇಂಟರ್‌ನ್ಯಾಷನಲ್‌ ಶಾಲೆ ಗ್ರಾಮಿಣ ಪ್ರದೇಶದಲ್ಲಿ ವಿದ್ಯಾದಾನದೊಂದಿಗೆ ಪಠ್ಯೇತರ ಚಟುವಟಿಕೆ ಗಳಿಗೂ ಪ್ರೋತ್ಸಾಹ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷೆ ಭಾರತಿ ಲಕ್ಷ್ಮಣ್‌ಗೌಡ ತಿಳಿಸಿದರು. ತಾಲೂಕಿನ ಚೌಡಪ್ಪನಹಳ್ಳಿ ನಳಂದ ಇಂಟರ್‌ನ್ಯಾಷನಲ್‌ ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ ನೂತನವಾಗಿ ನಿರ್ಮಿಸಿರುವ ಈಜುಗೊಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈಜು ಜೀವನಕ್ಕೆ ಸ್ಫೂರ್ತಿ: ವಿದ್ಯಾರ್ಥಿಗಳು ಮರ ಹತ್ತುವುದು, ಈಜು ಕಲಿತರೆ ಆರೋಗ್ಯಕ್ಕೆ ಒಳ್ಳೆಯದು. ಈಜುವುದು ಒಂದು ಕಲೆ. ಮಕ್ಕಳಿಗೆ ಈಜುವ ಕಲೆಯಲ್ಲಿ ವಿಶೇಷ ಆಸಕ್ತಿ ಇರುತ್ತದೆ. ಜೀವನಕ್ಕೆ ಸ್ಫೂರ್ತಿ ನೀಡಿ, ಆರೋಗ್ಯಕರ ಜೀವನ ಶೈಲಿ ಅಳವಡಿಸಿಕೊಳ್ಳಲು ಈಜು ಸಹಕಾರಿಯಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳ್ಳಲಿ: ಸಂಸ್ಥೆಗೆ ಉಜ್ವಲ ಭವಿಷ್ಯವಿದ್ದು, ಮಾದರಿ ಶಿಕ್ಷಣದ ಮೂಲಕ ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳ್ಳುವಂತೆ ಮಾಡಲಿ ಎಂದು ಶುಭ ಹಾರೈಸಿದರು. ಅಲ್ಲದೇ, ಸಂಸ್ಥೆಯ ವಿದ್ಯಾರ್ಥಿಗಳು ಬುದ್ಧಿವಂತರಾದರೆ ದೇಶ ಕ್ಕೆ ಮಾದರಿಯಾಗುತ್ತಾರೆಂದು ಅಭಿಪ್ರಾಯಪಟ್ಟರು.

ಆರೋಗ್ಯ ವೃದ್ಧಿಗೆ ಈಜು ಸಹಕಾರಿ: ಸಂಸ್ಥೆಯ ಅಧ್ಯಕ್ಷ ಲೋಕೇಶ್‌ ಮಾತನಾಡಿ, ದೇಹದ ಸಂಪೂರ್ಣ ಆರೋಗ್ಯ ವೃದ್ಧಿಗೆ ಈಜು ಒಂದು ಪ್ರಮುಖ ಕ್ರೀಡೆಯಾಗಿದೆ. ದೇಶದಲ್ಲಿ ಕ್ರಿಕೆಟ್‌ಗೆ ನೀಡಿದಂತಹ ಪ್ರಾಶಸ್ತ್ಯ ಈಜಿಗೆ ಸಿಗುತ್ತಿಲ್ಲ. ಈ ನಿಟ್ಟಿನಲ್ಲಿ ಈಜು ಕ್ರೀಡೆಯನ್ನು ಹೆಚ್ಚು ಹೆಚ್ಚು ಪ್ರಚು ರಗೊಳಿಸಲು ಶಾಲೆಯ ಆಡಳಿತ ಮಂಡಳಿಯಿಂದ ಸ್ಪರ್ಧೆ ಹಾಗೂ ಅನೇಕ ಚಟುವಟಿಕೆಗಳ ಮೂಲಕ ಉತ್ತೇಜನ ನೀಡಲಾಗುತ್ತಿದೆ ಎಂದು ಹೇಳಿದರು.

ರಾಷ್ಟ್ರಕ್ಕೆ ಕೀರ್ತಿ ತನ್ನಿ: ಬೂದಿಗೆರೆ ಗ್ರಾಮ ಪಂಚಾ ಯಿತಿ ಅಧ್ಯಕ್ಷ ಶ್ರೀನಿವಾಸಗೌಡ ಮಾತನಾಡಿ, ಹಿಂದಿನ ಕಾಲದಲ್ಲಿ ಮಕ್ಕಳಿಗೆ ಈಜು ಕಲಿತರೆ ನೀರಿನಲ್ಲಿ ಮುಳುಗಿದವರನ್ನು ಆಪತ್ತಿನಿಂದ ರಕ್ಷಿಸ ಬಹುದು ಎಂದು ಹೇಳುತ್ತಿದ್ದರು. ಮರ ಹತ್ತು ವುದನ್ನು ಕಲಿತರೆ ಕೈ ಕಾಲು ಮುರಿಯುತ್ತದೆ. ಆದರೆ, ಈಜು ಕಲಿತರೆ ಎಲ್ಲಾ ದೈಹಿಕ ವ್ಯಾಯಾ ಮಗಳ ತಾಯಿ ಈಜಿನಿಂದ ದೈಹಿಕ ಸ್ವಾಸ್ಥ ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ. ಮುಂದಿನ ದಿನಗಳಲ್ಲಿ ಉತ್ತಮ ಈಜುಪಟುಗಳನ್ನು ಬೆಳೆಸಿ, ರಾಷ್ಟ್ರಕ್ಕೆ ಕೀರ್ತಿ ತರುವಂತಾಗಲಿ ಎಂದು ಹಾರೈಸಿದರು.

ಈ ವೇಳೆ ವಿಎಸ್‌ಎಸ್‌ಎನ್‌ ಅಧ್ಯಕ್ಷ ಶಂಕರಪ್ಪ, ಗಂಗವಾರ-ಚೌಡಪ್ಪನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ಪ್ರೇಮಾ ರಾಮಸ್ವಾಮಿ, ಹೆಗಡೆಹಳ್ಳಿ ಗ್ರಾಪಂ ಅಧ್ಯಕ್ಷೆ ಎಸ್‌.ಗಾಯಿತ್ರಿ ತಿಮ್ಮರಾಯಪ್ಪ, ಗಂಗ ವಾರ-ಚೌಡಪ್ಪನಹಳ್ಳಿ ನಾರಾಯಣಮ್ಮ ಮಂಜು ನಾಥ್‌, ಎಂ.ರಾಜಣ್ಣ, ಸರಸ್ವತಿ ರಾಮಚಂದ್ರ, ವಕೀಲ ಮಹೇಶ್‌ ದಾಸ್‌, ಪ್ರಾಂಶುಪಾಲೆ ಮೇರಿ ಸೇಲ್ವಿ ಸೇರಿದಂತೆ ಮಕ್ಕಳ ಪೋಷಕರು, ವಿದ್ಯಾರ್ಥಿ ಗಳು ಮುಮತಾದವ‌ರು ಭಾಗವಹಿಸಿದ್ದರು.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.