ಕಕ್ಷಿದಾರರಿಗಿಲ್ಲ ಶುದ್ಧ ಕುಡಿವ ನೀರು

Team Udayavani, Nov 19, 2019, 3:00 AM IST

kakshidara

ನೆಲಮಂಗಲ: ತಾಲೂಕಿನ ನ್ಯಾಯಾಲಯದ ಸಂಕೀರ್ಣದಲ್ಲಿ ಶುದ್ಧ ಕುಡಿಯುವ ನೀರಿನ ಸೌಕರ್ಯವಿಲ್ಲದೆ ಪ್ರತಿನಿತ್ಯ ಕಕ್ಷಿದಾರರು, ವಕೀಲರು, ಪೊಲೀಸರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.  ಪಟ್ಟಣ ಸಮೀಪದ ಸೊಂಡೆಕೊಪ್ಪ ರಸ್ತೆಯ ನ್ಯಾಯಾಲಯದ ಸಂಕೀರ್ಣದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಲು ಹೈಕೋರ್ಟ್‌ ಆದೇಶದಂತೆ 7.5 ಲಕ್ಷ ರೂ. ಅನುದಾನವನ್ನು ಖಾಸಗಿ ಕಂಪನಿಗೆ ನೀಡಲಾಗಿತ್ತು.

ಅದರಂತೆ ಘಟಕ ನಿರ್ಮಾಣವಾಗಿ ವರ್ಷ ಕಳೆದರೂ ಉದ್ಘಾಟನೆ ಭಾಗ್ಯ ಮಾತ್ರ ದೊರಕಿಲ್ಲ. ಘಟಕದ ಸುತ್ತಲು ಗಿಡಗಳು ಬೆಳೆದಿವೆ, ಶುದ್ಧೀಕರಿಸುವ ಯಂತ್ರಗಳು ತುಕ್ಕು ಹಿಡಿಯುವ ಹಂತ ತಲುಪಿವೆ, ಲಕ್ಷಾಂತರ ಹಣ ಖರ್ಚು ಮಾಡಿ ನಿರ್ಮಾಣ ಮಾಡಿದ ಘಟಕ ಉಪಯೋಗಕ್ಕೆ ಬಾರದೇ ಹಾಳಾಗುತಿದ್ದರೂ ಅಧಿಕಾರಿಗಳು ಮಾತ್ರ ಮೌನವಾಗಿದ್ದಾರೆ.

ನೀರಿಗಾಗಿ ಪರದಾಟ: ತಾಲೂಕಿನ ನ್ಯಾಯಾಲಯದ ಸಂಕೀರ್ಣದಲ್ಲಿ ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾಲಯ, 1ನೇ ಮತ್ತು 2ನೇ ಶ್ರೇಣಿಯ ಅಧಿಕ ಹಿರಿಯ ಶ್ರೇಣಿಯ ನ್ಯಾಯಾಲಯ, ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳು, ಪ್ರಧಾನ ಸಿವಿಲ್‌ ನ್ಯಾಯಾಲಯಗಳಿಗೆ ಪ್ರತಿದಿನ ಆಗಮಿಸುವ ಸಾವಿರಾರೂ ಕಕ್ಷಿದಾರರು ಬೆಳಗ್ಗೆಯಿಂದ ಸಂಜೆಯವರೆಗೂ ನ್ಯಾಯಾಲಯದ ಆವರಣದಲ್ಲಿ ಇರುವುದರಿಂದ ಕುಡಿಯಲು ನೀರಿಗಾಗಿ ಪರದಾಡುವ ದುಸ್ಥಿತಿ ಎದುರಾಗಿದೆ.

ನಿರ್ಮಾಣವಾಗಿ ವರ್ಷ ಕಳೆದಿದೆ: 2018ರ ಬೇಸಿಗೆಯಲ್ಲಿ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಲು ಟೆಂಡರ್‌ ಮಾಡಿಕೊಂಡ ಅಕ್ವಾéಜ್‌ ಶೈನ್‌ ಕಂಪನಿ ಘಟಕ ನಿರ್ಮಾಣ ಮಾಡಿ ವರ್ಷ ಕಳೆದರೂ ಉಸ್ತುವಾರಿ ವಹಿಸಿಕೊಂಡಿರುವ ಲೋಕೋಪಯೋಗಿ ಅಧಿಕಾರಿಗಳು ಘಟಕ ಆರಂಭಿಸಲು ಮುಂದಾಗಿಲ್ಲ. ವಕೀಲರಿಗೆ , ಕಕ್ಷಿದಾರರಿಗೆ ನೀರಿನ ಸಮಸ್ಯೆ ಎಂದು ಹೇಳಿಕೊಂಡು ವರ್ಷದಿಂದ ಮೀನಮೇಷ ಮಾಡುತ್ತಿದ್ದಾರೆ.

ನೀತಿ ಸಂಹಿತೆ ಮುಗಿಯಲಿ: ನ್ಯಾಯಾಲಯದ ಸಂಕೀರ್ಣದಲ್ಲಿ ವರ್ಷದಿಂದ ಉದ್ಘಾಟನೆಯಾಗದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ಮಾಡಲು ನೀತಿ ಸಂಹಿತೆ ಕಾರಣ ಹೇಳುತ್ತಿರುವ ಅಧಿಕಾರಿಗಳು, ನ್ಯಾಯಾಲಯಕ್ಕೆ ಯಾವ ನೀತಿ ಸಂಹಿತೆ, ಕಕ್ಷಿದಾರರಿಗೆ ನೀರು ಹೊದಗಿಸಲು ಯಾವ ನೀತಿ ಸಂಹಿತೆ, ರಾಜಕೀಯ ವ್ಯಕ್ತಿಗಳಿಂದ ಉದ್ಘಾಟನೆ ಮಾಡಲು ಕಾಯುತಿದ್ದಾರೆಯೇ?, ನ್ಯಾಯಾಲಯದ ಸಂಕೀರ್ಣದ ಘಟಕ ಉದ್ಘಾಟನೆಗೆ ಜನಪ್ರತಿನಿಧಿಗಳು ಕಡ್ಡಾಯವೇ? ಎಂಬುದನ್ನು ಮನಗಂಡು ಘಟಕ ಉದ್ಘಾಟನೆ ಮಾಡಿ ನೀರಿನ ಸೌಲಭ್ಯ ನೀಡಬೇಕಾಗಿದೆ.

ಶುದ್ಧ ಕುಡಿಯುವ ನೀರಿನ ಘಟಕಕ್ಕೆ ನೀರಿನ ಸೌಲಭ್ಯದ ಕೊರತೆ ಇತ್ತು, ಮಲ್ಲಪುರದಿಂದ ಪೈಪ್‌ಲೈನ್‌ ವ್ಯವಸ್ಥೆ ಮಾಡಲಾಗಿದೆ. ಶೀಘ್ರದಲ್ಲಿ ಘಟಕಕ್ಕೆ ನೀರಿನ ಸರಬರಾಜು ಮಾಡಿ ಘಟಕ ಉದ್ಘಾಟನೆ ಮಾಡಲಾಗುತ್ತದೆ.
-ಉಮೇಶ್‌, ಸಹಾಯಕ ಎಂಜಿನಿಯರ್‌, ಲೋಕೋಪಯೋಗಿ ಇಲಾಖೆ

ನ್ಯಾಯಾಲಯಕ್ಕೆ ಬೆಳಗ್ಗೆ ಕೇಸಿಗೆ ಬಂದರೆ ಕುಡಿಯಲು ನೀರಿಲ್ಲದೆ, ಬಾಯಾರಿಕೊಂಡು ನೀರಿಗಾಗಿ ಪರದಾಡಬೇಕು. ಹಣ ಇದ್ದವರು ಅಂಗಡಿಯಲ್ಲಿ ಖರೀದಿಸಿ ನೀರು ಕುಡಿಯುತ್ತಾರೆ. ನಮ್ಮಂತವರು ಬಾಯಾರಿಕೊಂಡು ಮನೆಗೆ ಹೋಗಬೇಕು. ನಿರ್ಮಾಣ ಮಾಡಿರುವ ಘಟಕ ಬಳಕೆಯಾಗದರೆ ಅನುಕೂಲವಾಗಲಿದೆ.
-ಮುತ್ತುರಾಜ್‌, ಕಕ್ಷಿದಾರ

* ಕೊಟ್ರೇಶ್‌.ಆರ್‌

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.