ಕೆರೆಯಲ್ಲಿನ ಜಾಲಿ ಮರ ತೆರವುಗೊಳಿಸಿ


Team Udayavani, Feb 23, 2019, 7:29 AM IST

kerey.jpg

ದೇವನಹಳ್ಳಿ: ಸಾರ್ವಜನಿಕರಿಗೆ ಕೆರೆ ಅಂಗಳಗಳಲ್ಲಿ ಬೆಳೆದು ನಿಂತಿರುವ ಜಾಲಿ ಮರಗಳಿಂದ ತೊಂದರೆಯಾಗುತ್ತಿದ್ದು, ಜಿಲ್ಲೆಯ ಎಲ್ಲಾ ಕೆರೆಗಳಲ್ಲಿರುವ ಜಾಲಿ ಮರಗಳನ್ನು ಕೂಡಲೇ ತೆರವುಗೊಳಿಸಬೇಕೆಂದು ಸಂಸದ ಎಂ.ವೀರಪ್ಪ ಮೊಯ್ಲಿ ಅಧಿಕಾರಿಗಳಿಗೆ ತಾಕೀತು ಮಾಡಿದರು.  ತಾಲೂಕಿನ ಚಪ್ಪರದಕಲ್ಲು ಸರ್ಕಲ್‌ ಬಳಿಯ ಜಿಪಂ ಸಭಾಂಗಣದಲ್ಲಿ 2018-19ನೇ ಸಾಲಿನ ಮೂರನೇ ತ್ತೈಮಾಸಿಕ ದಿಶಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಎಸ್ಸೆಸ್ಸೆಲ್ಸಿ ಕೇಂದ್ರ ಬದಲಿಸಿದ್ದೇಕೆ?: ವಿಶ್ವನಾಥಪುರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರವನ್ನು ಯಾವ ರೀತಿ ಅಧಿಕಾರಿಗಳು ಬದಲಾಯಿಸಿದ್ದಾರೆ. ಅದಕ್ಕೆ ಕಾರಣಗಳೇನು ಎಂಬುದು ಸರಿಯಾದ ಮಾಹಿತಿಯನ್ನು ಅಧಿಕಾರಿಗಳು ಮೊದಲು ನೀಡಬೇಕು. ನಾನು ಮುಖ್ಯಮಂತ್ರಿಯಾಗಿದ್ದ ವೇಳೆ ಪ್ರೌಢಶಾಲೆ ಮತ್ತು ಕಾಲೇಜನ್ನು ಮಂಜೂರು ಮಾಡಿಕೊಡಲಾಗಿತ್ತು. ಎಲ್ಲಾ ರೀತಿಯ ಮೂಲಭೂತ ಸೌಲಭ್ಯ ಆ ಕೇಂದ್ರದಲ್ಲಿದೆ. ಉಪನಿರ್ದೇಶಕರ ಕಚೇರಿ ಅಲ್ಲಿಗೆ ಸ್ಥಳಾಂತರಗೊಂಡರೆ ಅಲ್ಲಿ ಪರೀಕ್ಷಾ ಕೇಂದ್ರ ಇರಬಾರದೆಂಬ ನಿಯಮವೇನೂ ಇಲ್ಲ. ಖಾಸಗಿ ಶಾಲೆಗೆ ನೀಡಿರುವುದು ತಪ್ಪಾಗಿದೆ.

ಅಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿದೆ. ವಿದ್ಯಾರ್ಥಿಗಳಿಗೆ ಇದರಿಂದ ಅನಾನುಕೂಲವೇ ಹೆಚ್ಚಾಗಿದೆ. ಕಳೆದ 18 ವರ್ಷಗಳಿಂದ ಪರೀಕ್ಷಾ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, ಇದುವರೆಗೂ ಯಾವುದೇ ಒಂದು ಕಪ್ಪು ಚುಕ್ಕೆಯೂ ಇಲ್ಲ. ಈಗಾಗಲೇ ಈ ವಿಚಾರವಾಗಿ ಮೇಲಾಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ವಿಶ್ವನಾಥಪುರದಲ್ಲಿಯೇ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರವನ್ನು ಮುಂದುವರೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.  

1,200 ಕೋಟಿ ರೂ. ಬಾಕಿ: ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆಗೆ ಕಳೆದ ನಾಲ್ಕೂವರೆ ವರ್ಷದಲ್ಲಿ ಒಂದು ನಯಾಪೈಸೆ ಸಹ ನೀಡಿಲ್ಲ. ಉದ್ಯೋಗ ಖಾತ್ರಿ ಯೋಜನೆಯಲ್ಲಿ 1,200 ಕೋಟಿ ರೂ. ಅನುದಾನವನ್ನು ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿದೆ. ಈ ಬಗ್ಗೆ 2 ತಿಂಗಳ ಹಿಂದಷ್ಟೆ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಭೆ„ರೇಗೌಡ ಸೇರಿದಂತೆ ಸಂಸದರ ನಿಯೋಗ ಕೇಂದ್ರ ಸಚಿವರನ್ನು ಭೆೇಟಿ ಮಾಡಿ ಮನವಿ ಮಾಡಿದೆ.

ಆದರೂ ಅನುದಾನ ಬಿಡುಗಡೆಯಾಗಿಲ್ಲ. ಪ್ರತಿ ಮೂರು ತಿಂಗಳಿಗೊಮ್ಮೆ ದಿಶಾ ಸಭೆಯನ್ನು ಮಾಡಿ ಕೇಂದ್ರ ಸರ್ಕಾರದಿಂದ ಬರುವ ಅನುದಾನಗಳು ಹಾಗೂ ಅವು ಕಾರ್ಯಗತ ಆಗಿವೆಯೋ ಇಲ್ಲವೋ ಎಂಬುವುದರ ಬಗ್ಗೆ ಚರ್ಚಿಸಿ ತೀರ್ಮಾನಗಳನ್ನು ಕೈಗೊಳ್ಳುತ್ತೇವೆ ಎಂದು ಹೇಳಿದರು. ಯೋಜನೆಗಳ ಜಾರಿಗೆ ಶ್ರಮಿಸಿ: ಬೇಸಿಗೆ ಸಮೀಪಿಸುತ್ತಿದ್ದು, ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಜನ,

ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಗಳಿವೆ. ಅಧಿಕಾರಿಗಳು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರದೆ, ಕುಡಿಯುವ ನೀರಿನ ಸಮಸ್ಯೆ ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಜನರ ಕಲ್ಯಾಣಕ್ಕೆ ನೆರವಾಗುವ ಕೇಂದ್ರ ಸರ್ಕಾರದ ಬಹಳಷ್ಟು ಪ್ರಾಯೋಜಿತ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗಬೇಕಾದರೆ, ಅಧಿಕಾರಿಗಳ ಸಹಕಾರ ಹಾಗೂ ಮುಂದಾಳತ್ವ ಬಹಳ ಅಗತ್ಯ ಎಂದು ತಿಳಿಸಿದರು.  

ಅನುದಾನ ಖಾಲಿ ಮಾಡಿ: ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ ಪ್ರತಿ ತಾಲೂಕಿಗೆ 2 ಕೋಟಿ ರೂ. ಅನುದಾನವನ್ನು ಕೇಂದ್ರ ಸರ್ಕಾರ ಮಂಜೂರು ಮಾಡಿದೆ ಎಂದು ಇಲಾಖೆ ಅಧಿಕಾರಿ ಸಭೆಗೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಂಸದರು, ಕೇಂದ್ರ ಸರ್ಕಾರದ ಯಾವುದೇ ಅನುದಾನ ವೆಚ್ಚವಾಗದೆ ಹಿಂದಿರುಗಬಾರದು. ಮಾರ್ಚ್‌ ಅಂತ್ಯದೊಳಗೆ ಅನುದಾನವನ್ನು ಸಮಪರ್ಕವಾಗಿ ಬಳಕೆ ಮಾಡಿಕೊಳ್ಳಬೇಕೆಂದು ಸೂಚಿಸಿದರು.  

ಜಿಲ್ಲಾಧಿಕಾರಿ ಸಿ.ಎಸ್‌.ಕರೀಗೌಡ ಮಾತನಾಡಿ, ಜಾಲಿ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಕ್ರಮ ವಹಿಸಬೇಕೆಂದು ಆದೇಶಿಸಲಾಗಿದೆ. ತ್ಯಾಜ್ಯ ವಿಲೇವಾರಿ ಘಟಕಕ್ಕೆ 72 ಗ್ರಾಮಗಳಿಗೆ ಜಿಪಂ ಜಾಗ ಕೇಳಿದ್ದು, ಈಗಾಗಲೇ ತಹಶೀಲ್ದಾರ್‌ರಿಗೆ ಜಾಗ ಗುರುತಿಸುವಂತೆ ಆದೇಶ ಮಾಡಲಾಗಿದೆ. ಬೂದಿಗೆರೆ ಗ್ರಾಮದಲ್ಲಿ ತಾಪಂ ಅಧ್ಯಕ್ಷರು ಜಾಗ ಗುರುತಿಸಿಕೊಡುವಂತೆ ಸಭೆಯ ಗಮನಕ್ಕೆ ತಂದಿರುವುದರಿಂದ ಆದ್ಯತೆ ಮೆರೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ತಾಪಂ ಅಧ್ಯಕ್ಷೆ ಭಾರತಿ ಮಾತನಾಡಿ, ಬೂದಿಗೆರೆ ಗ್ರಾಮಕ್ಕೆ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಾಗ ನೀಡುವಂತೆ ಹಲವಾರು ಬಾರಿ ಮನವಿ ಮಾಡಿದರೂ ಗುರುತಿಸಿಕೊಟ್ಟಿಲ್ಲ. ಕೂಡಲೇ ಕ್ರಮ ಕೈಗೊಳ್ಳಬೇಕೆಂದರು. ಜಾಗೃತಿ ಸಮಿತಿ ಸದಸ್ಯ ಕಾರಹಳ್ಳಿ ಜಯರಾಮ್‌ ಮಾತನಾಡಿದರು. ಈ ವೇಳೆ ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ, ಜಿಪಂ ಸಿಇಒ ಆರ್‌.ಲತಾ, ಉಪ ಕಾರ್ಯದರ್ಶಿ ಕರಿಯಪ್ಪ, ಮುಖ್ಯ ಲೆಕ್ಕಾಧಿಕಾರಿ ಶೋಭಾ, ಯೋಜನಾಧಿಕಾರಿ ವಿನುತಾರಾಣಿ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

13

Kundapura: ಮನೆಗೆ ನುಗ್ಗಿ ಚಿನ್ನಾಭರಣ ಕಳವು

POlice

Brahmavar: ಬೆಳ್ಮಾರು; ಕೋಳಿ ಅಂಕಕ್ಕೆ ದಾಳಿ

dw

Kundapura: ಮಲಗಿದಲ್ಲೇ ವ್ಯಕ್ತಿ ಸಾವು

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.