ಶೀತಲ ಸರಪಳಿ ಘಟಕ

ಹಣ್ಣು, ತರಕಾರಿ ಸಂಸ್ಕರಣಾ ಘಟಕ ಕಾಮಗಾರಿ ಆರಂಭ: ನಿರ್ದೇಶಕಿ

Team Udayavani, Nov 29, 2020, 10:38 AM IST

ಶೀತಲ ಸರಪಳಿ ಘಟಕ

ದೇವನಹಳ್ಳಿ: ತಾಲೂಕಿನ ಪೂಜನಹಳ್ಳಿಯಲ್ಲಿರುವ ಗಾಂಧಿ ಶತಮಾನದ ತೋಟಕ್ಕೆ ತೋಟಗಾರಿಕಾ ಇಲಾಖೆಯ ನಿರ್ದೇಶಕಿ ಫೌಝಿಯಾ ತರುನ್ನುಮ್‌ ದಿಢೀರ್‌ ಭೇಟಿ, ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಶೀತಲ ಸರಪಳಿ ಘಟಕದ ಕಾಮಗಾರಿಯ ಮಾಹಿತಿ ಪಡೆದುಕೊಂಡರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನಿರ್ದೇಶಕಿ, ಕೆಫೆಟ್‌ ವತಿಯಿಂದ 24 ಕೋಟಿ ರೂ. ವೆಚ್ಚದಲ್ಲಿ ಶೀತಲ ಸರಪಳಿ ಮತ್ತು ಹಣ್ಣು ಮತ್ತುತರಕಾರಿಗಳ ಸಂಸ್ಕರಣಾ ಘಟಕ ನಿರ್ಮಾಣ ಮಾಡಲಾಗುತ್ತಿದೆ. ಒಂದು ತಿಂಗಳ ಹಿಂದೆಯಷ್ಟೇ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಮಳೆ, ಕೊರೊನಾದಿಂದಾಗಿ ವಿಳಂಬವಾಗಿತ್ತು. ಕಾಮಗಾರಿಯುತಳಪಾಯ ಹಂತದಲ್ಲಿದ್ದು, ಮುಂದಿನ ನವೆಂಬರ್‌ ವೇಳೆಗೆ ಮುಗಿಸಿ, ರೈತರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಹೇಳಿದರು.

ಪೂಜನಹಳ್ಳಿಯ ತೋಟಗಾರಿಕಾ ಕ್ಷೇತ್ರದನಾಲ್ಕು ಎಕರೆ ಪ್ರದೇಶದಲ್ಲಿ 24 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸಮಗ್ರ ಶೀತಲ ಘಟಕವು, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳ ಮಾವು, ದ್ರಾಕ್ಷಿ, ದಾಳಿಂಬೆ, ಗುಲಾಬಿ, ಸೇವಂತಿಗೆ ವಿವಿಧ ರೀತಿಯ ತರಕಾರಿಯನ್ನು ಬೆಳೆಯುವ ರೈತರಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.

ರೈತರಿಗೆ ಹೆಚ್ಚು ಅನುಕೂಲ: ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ರೈತರ ಉತ್ಪನ್ನಗಳನ್ನು ರಫ್ತುದಾರರು ನೇರವಾಗಿ ಖರೀದಿಸಿ, ಸಂಸ್ಕರಿಸಿ, ಪ್ಯಾಕ್‌ ಮಾಡಿ ವಿಮಾನದ ಮೂಲಕ ಹೊರರಾಜ್ಯ, ದೇಶಗಳಿಗೆ ರಫ್ತು ಮಾಡಲು ಅನುಕೂಲವಾಗಲಿದೆ. ಈ ಭಾಗದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಹೇಳಿದರು.

ಬೇಳೆ ಕಾಳು ಸಂಗ್ರಹ: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಸಮೀಪದಲ್ಲಿರುವುದರಿಂದ ಇತರೆ ದೇಶಗಳಿಗೆ ಇಲ್ಲಿಂದಲೇ ಹಣ್ಣು ರಫ್ತು ಮಾಡಲು ಸಹಕಾರಿಯಾಗಲಿದೆ. ಶೀತಲ ಸರಪಳಿ ಘಟಕ, ಶೀತಲ ಗೃಹ, ಪ್ಯಾಕ್‌ ಹೌಸ್‌, ಹಣ್ಣು ಮಾಗಿಸುವ ಘಟಕ, ಬಿಸಿ ನೀರಿನಲ್ಲಿ ಶಾಖೋಪಕರಣ ಘಟಕ, ಪ್ರಯೋಗಾಲಯ ಮುಂತಾದವುಗಳನ್ನು ಸ್ಥಾಪಿಸಲಾಗುತ್ತದೆ. ಈ ಎಲ್ಲಾ ಘಟಕಗಳಲ್ಲಿ ಒಣದ್ರಾಕ್ಷಿ, ದಾಳಿಂಬೆ, ನಿಂಬೆ ವಿವಿಧ ರೀತಿಯ ಬೇಳೆ ಕಾಳುಗಳನ್ನು ಸಂಗ್ರಹಿಸಲಾಗುವುದು ಎಂದು ಮಾಹಿತಿ ನೀಡಿದರು.

ರೈತರಿಗೆ ಸಾಕಷ್ಟು ಅನುಕೂಲವಾಗಬೇಕು. ನರೇಗಾ ಯೋಜನೆಯಡಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು. ತರಕಾರಿ ಹಣ್ಣು ಬೆಳೆಯುವ ರೈತರು ಕಂಪನಿಗಳನ್ನು ಪರಿಚಯ ಮಾಡಿಕೊಟ್ಟು, ಅವರಿಂದ ಆದಾಯವನ್ನು ರೈತರುಹೆಚ್ಚಿಸಿಕೊಳ್ಳುವಂತೆ ಆಗಬೇಕು. ರೈತರು ಬೆಳೆದರೆ ಸಾಲದು, ಆರ್ಥಿಕವಾಗಿ ಸದೃಢಗೊಳ್ಳಲು ಗುಣಮಟ್ಟದ ಬೆಳೆ ಇಟ್ಟು ಲಾಭ ಪಡೆಯುವಂತೆ ಆಗಬೇಕು ಎಂದು ವಿವರಿಸಿದರು.

ಈ ವೇಳೆಯಲ್ಲಿ ಉಪವಿಭಾಗಾಧಿಕಾರಿಅರುಳ್‌ಕುಮಾರ್‌, ತಹಶೀಲ್ದಾರ್‌ ಅಜಿತ್‌ಕುಮಾರ್‌ ರೈ, ತೊಟಗಾರಿಕೆಯ ಎಡಿಎಚ್‌ ರಾಜೇಂದ್ರ ಹಾಗೂ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

canada

Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.