ಹೈನುಗಾರಿಕೆ ಪ್ರೋತ್ಸಾಹಿಸಲು ಬದ್ಧ: ಬಚ್ಚೇಗೌಡ
Team Udayavani, Sep 16, 2019, 3:00 AM IST
ಹೊಸಕೋಟೆ: ಹೈನುಗಾರಿಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ರಾಸುಗಳ ಖರೀದಿಗೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಹಾಯಧನ ಒದಗಿಸುವ ಬಗ್ಗೆ ನಬಾರ್ಡ್ ಅಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಂಸದ ಬಿ.ಎನ್.ಬಚ್ಚೇಗೌಡ ಹೇಳಿದರು.
ನಗರದ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಾಹಕರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ತಾಲೂಕಿನ ಜನತೆ ಹೆಚ್ಚಾಗಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದು, ಪ್ರತಿದಿನ 1.36 ಲಕ್ಷ ಲೀಟರ್ ಹಾಲು ಸಂಗ್ರಹಣೆಗೊಳ್ಳುತ್ತಿದೆ. 1997ರಲ್ಲಿ ಶೀಥಲೀಕರಣ ಕೇಂದ್ರ ಸ್ಥಾಪಿಸಿದ ನಂತರ ಹಾಲು ಹಾಳಾಗಿ ರೈತರು ಅನುಭವಿಸುತ್ತಿದ್ದ ನಷ್ಟ ಈಗ ನಿವಾರಣೆಗೊಂಡಿದೆ ಎಂದರು.
ಹಸಿರು ಮೇವಿನ ಕೊರತೆ: ತಾಲೂಕಿನಲ್ಲಿ ಬರ ಪರಿಸ್ಥಿತಿಯಿಂದಾಗಿ ಹಸಿರು ಮೇವಿನ ತೀವ್ರ ಕೊರತೆಯಿದ್ದು, ರಾಸುಗಳ ಪೋಷಣೆಗೆ ಪಶು ಆಹಾರವನ್ನೆ ಅವಲಂಬಿಸಬೇಕಾಗಿದೆ. ಪ್ರತಿ ತಿಂಗಳೂ 65 ಸಾವಿರ ಮೆಟ್ರಿಕ್ ಟನ್‌ಗಳಷ್ಟು ಬೇಡಿಕೆಯಿದ್ದು ಉತ್ಪಾದನಾ ಘಟಕಗಳು ಕಡಿಮೆಯಿರುವ ಕಾರಣ ಒಕ್ಕೂಟಕ್ಕೆ 45 ಸಾವಿರ ಮೆಟ್ರಿಕ್ ಟನ್‌ಗಳನ್ನಷ್ಟೇ ಪೂರೈಸಲು ಸಾಧ್ಯವಾಗುತ್ತಿದೆ. ಇದರಿಂದಾಗಿ ರೈತರು ಅಧಿಕ ಹಣ ನೀಡಿ ಖಾಸಗಿಯಾಗಿ ಪಶು ಆಹಾರ ಖರೀದಿಸಬೇಕಾದ್ದು ಅನಿವಾರ್ಯವಾಗಿದ್ದು ರಾಸುಗಳ ನಿರ್ವಹಣಾ ವೆಚ್ಚ ಹೆಚ್ಚಾಗಿದೆ ಎಂದು ತಿಳಿಸಿದರು.
ಜಾಗ ಮಂಜೂರು: ರೈತರ ಬೇಡಿಕೆಗೆ ಅನುಗುಣವಾಗಿ ಸಕಾಲದಲ್ಲಿ ಪಶು ಆಹಾರ ಪಡೆಯುವುದೇ ಅಲ್ಲದೆ ಸ್ಥಳೀಯರಿಗೂ ಉದ್ಯೋಗವಕಾಶಗಳು ದೊರಕಲು ಒಕ್ಕೂಟ ನೀಡಿರುವ ಪ್ರಸ್ತಾವನೆ ಅನ್ವಯ ತಾಲೂಕಿನ ಜಡಿಗೇನಹಳ್ಳಿ ಹೋಬಳಿಯಲ್ಲಿ ಕನಿಷ್ಠ 25 ಎಕರೆಯಷ್ಟು ಸರಕಾರಿ ಜಾಗ ಮಂಜೂರಾತಿಗೆ ಜಿಲ್ಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಎಂದು ಹೇಳಿದರು.
ತಪಾಸಣಾ ಶಿಬಿರ: ಜಾನುವಾರುಗಳಿಗೆ ಸೋಂಕು ರೋಗ ಹರಡುವುದನ್ನು ತಡೆಗಟ್ಟಲು ಪಶುಪಾಲನಾ ಇಲಾಖೆಯ ಸಹಯೋಗದಲ್ಲಿ ಗ್ರಾಮಗಳಲ್ಲಿ ತಪಾಸಣಾ ಶಿಬಿರಗಳನ್ನು ಆಯೋಜಿಸಿ ರೈತರಿಗೆ ಸೂಕ್ತ ತಿಳಿವಳಿಕೆ ನೀಡುವ ಬಗ್ಗೆ ಒಕ್ಕೂಟ ಗಮನಹರಿಸಬೇಕು. ರಾಸುಗಳ ಪೋಷಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಆ್ಯಂಟಿಬಯೊಟಿಕ್ಸ್‌ಗೆ ಬಳಸುವ ಬದಲು ಸಾವಯವ ಉತ್ಪನ್ನಗಳನ್ನು ಬಳಸುವುದರಿಂದ ಗ್ರಾಹಕರು ಸಹ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಆಮದು ನಿಷೇಧ: ವಿದೇಶದ ಹಾಲಿನ ಉತ್ಪನ್ನಗಳ ಆಮದು ನಿಷೇಧಿಸುವ ಬಗ್ಗೆ ಕೇಂದ್ರ ಸಚಿವರಿಗೆ ಮನವಿ ಮಾಡಲಾಗುವುದು. ತಾಲೂಕಿನಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಸ್ವಂತ ಕಟ್ಟಡ ನಿರ್ಮಾಣಕ್ಕೆ ಸಂಸದರ ಸ್ಥಳೀಯ ಅಭಿವೃದ್ಧಿ ನಿಧಿಯಿಂದ ಆರ್ಥಿಕ ನೆರವು ನೀಡಲಾಗುವುದು ಎಂದು ತಿಳಿಸಿದರು. ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ನರಸಿಂಹಮೂರ್ತಿ, ನಿರ್ದೇಶಕರಾದ ಸಿ.ಮಂಜುನಾಥ್, ಕೆ.ಎಂ.ಮಂಜುನಾಥ್, ತಾಲೂಕು ಹಾಲು ಉತ್ಪಾದಕ ಸಂಘಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎನ್. ಕಾಮಯ್ಯ, ಪದಾಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.