ರಾಜ್ಯದ ಎಲ್ಲಾ ಜಿಲ್ಲೆಯಲ್ಲೂ ಕಾಂಗ್ರೆಸ್ ಪಾದಯಾತ್ರೆ
Team Udayavani, Jul 20, 2022, 12:57 PM IST
ದೇವನಹಳ್ಳಿ: 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಆ.1ರಿಂದ 10ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ75 ಕಿ.ಮೀ. ಪಾದಯಾತ್ರೆ ಹಮ್ಮಿಕೊಳ್ಳಲಾಗುತ್ತಿದೆಎಂದು ಕೇಂದ್ರ ಮಾಜಿ ಸಚಿವ ಎಂ.ವೀರಪ್ಪ ಮೊಯಿಲಿ ತಿಳಿಸಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಬೆಂಗಳೂರಿನಲ್ಲಿಜು.21ರಂದು ರಾಜಭವನ ಮುತ್ತಿಗೆ ಹಾಗೂ ಪ್ರತಿಭಟನೆ ಹಾಗೂ ಕಾಂಗ್ರೆಸ್ ಪಾದಯಾತ್ರೆಸಂಬಂಧಪಟ್ಟಂತೆ ಕುರಿತು ನಡೆದ ಪೂರ್ವಬಾವಿಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ, ರಾಜ್ಯಬಿಜೆಪಿ ಸರ್ಕಾರದ ವೈಫಲ್ಯ ಜನರಿಗೆ ಮನದಟ್ಟುಮಾಡಬೇಕು. ಕಾಂಗ್ರೆಸ್ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆಬರಲಿದೆ. ಜಿಲ್ಲೆಯ ನಾಲ್ಕು ತಾಲೂಕುಗಳಲ್ಲೂ ನಾಲ್ಕು ಶಾಸಕರನ್ನು ಗೆಲ್ಲಿಸಿಕೊಳ್ಳಬೇಕು ಎಂದರು.
ಸರ್ಕಾರದ ಸಾಧನೆ ಶೂನ್ಯ: ನ್ಯಾಷನಲ್ ಹೆರಾಲ್ಡ್ ಪ್ರಕರಣದ ಹೆಸರಲ್ಲಿ ಕೇಂದ್ರ ಸರ್ಕಾರವು ಸಂವಿಧಾನಿಕ ಸಂಸ್ಥೆ ಜಾರಿ ನಿರ್ದೇಶನಾಲಯವನ್ನು ದುರುಪಯೋಗ ಮಾಡಿಕೊಂಡು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ವಿಚಾರಣೆ ನೆಪದಲ್ಲಿ ಕಿರುಕುಳ ನೀಡಲು ಮುಂದಾಗಿರುವುದನ್ನು ಖಂಡಿಸಬೇಕು. ಕಳೆದ ಎಂಟು ವರ್ಷಗಳಲ್ಲಿ ಬಿಜೆಪಿ ಸರ್ಕಾರದ ಸಾಧನೆ ಶೂನ್ಯವಾಗಿದೆ ಎಂದರು.
ಬಿಜೆಪಿ ಸರ್ಕಾರ ಬಡವರ ಶಾಪಕ್ಕೆ ಗುರಿಯಾಗಿದೆ. ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ಮತ್ತೆಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ.ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವುದರ ಮೂಲಕಬಡವರ ಜೀವನಕ್ಕೆ ಬಿಜೆಪಿ ಸರ್ಕಾರ ಕೊಡಲಿ ಪೆಟ್ಟು ನೀಡಿದೆ ಎಂದು ಕಿಡಿಕಾರಿದರು.
ಸರ್ಕಾರದ ಕ್ರಮಕ್ಕೆ ಖಂಡನೆ: ಕೇಂದ್ರ ಮತ್ತು ರಾಜ್ಯಬಿಜೆಪಿ ಸರ್ಕಾರ ಹೊಸದಾಗಿ ಅಗತ್ಯವಸ್ತುಗಳ ಮೇಲೆ ಜಿಎಸ್‌ಟಿ ವಿಧಿಸಿ ಸಾರ್ವಜನಿಕರ ರಕ್ತವನ್ನು ಹಿರುತ್ತಿರುವ ಸರ್ಕಾರದ ಕ್ರಮವನ್ನು ಖಂಡಿಸುವಂತಹದ್ದು, ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ರಾಷ್ಟ್ರಧ್ವಜ, ರಾಷ್ಟ್ರಗೀತೆ, ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆ ಕೊಟ್ಟಿದ್ದು ಕಾಂಗ್ರೆಸ್ ಪಕ್ಷ ಎಂದರು.
ಎಂಎಲ್‌ಸಿ ರವಿ, ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕ ವೆಂಕಟರಮಣಯ್ಯ, ಮಾಜಿ ಶಾಸಕ ಮುನಿನರಸಿಂಹಯ್ಯ, ವೆಂಕಟಸ್ವಾಮಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್, ಕೆಪಿಸಿಸಿ ಸದಸ್ಯ ಚಿನ್ನಪ್ಪ, ಚೇತನ್‌ಗೌಡ, ಎಸ್.ಆರ್.ಮುನಿರಾಜು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷಶಾಂತಕುಮಾರ್, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷಸಿ.ಪ್ರಸನ್ನಕುಮಾರ್, ಜಿಪಂ ಸದಸ್ಯ ಕೆ.ಸಿ.ಮಂಜುನಾಥ್, ಮುಖಂಡ ಎಸ್.ಪಿ.ಮುನಿರಾಜು, ನಾಗೇಗೌಡ, ಲಕ್ಷ್ಮಣ್, ಎಪಿಎಂಸಿ ಸುಧಾಕರ್, ಜಿಲ್ಲಾ ಎಸ್‌ಸಿ ಘಟಕದ ಅಧ್ಯಕ್ಷ ಲೋಕೇಶ್, ಎಸ್‌ಟಿ ಘಟಕದ ಅಧ್ಯಕ್ಷ ವೆಂಕಟೇಶ್,ಉಪಾಧ್ಯಕ್ಷ ಲಕ್ಷ್ಮೀಕಾಂತ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷಕೆ.ಆರ್.ನಾಗೇಶ್, ಜಿಲ್ಲಾ ಕೆಪಿಸಿಸಿ ಉಪಾಧ್ಯಕ್ಷೆ ಪದ್ಮಾವತಿ,ಮಹಿಳಾ ಪದಾಧಿಕಾರಿ ರೇವತಿ, ಮಮತಾ, ಅಕ್ಕಯ್ಯಮ್ಮ, ಪಕ್ಷದ ಕಾರ್ಯಕರ್ತರು ಇದ್ದರು
ಸಿದ್ದರಾಮೋತ್ಸವ ವ್ಯಕ್ತಿ ಪೂಜೆ ಅಲ್ಲ: ಮೊಯಿಲಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಸರ್ಕಾರಕ್ಕೆ ಒಂದು ವರ್ಷ ಸಂದಿರುವ ಹಿನ್ನೆಲೆ ಬಿಜೆಪಿ ಹಮ್ಮಿಕೊಂಡಿರುವುದು ಸಾಧನಾಸಮಾವೇಶ ಅಲ್ಲ. ಶೂನ್ಯ ಸಮಾವೇಶ. ಸಿದ್ದರಾಮೋತ್ಸವ ಆಚರಣೆ ವ್ಯಕ್ತಿ ಪೂಜೆ ಅಲ್ಲ.ಪಕ್ಷದ ಸಂಘಟನೆ. ಬಲವರ್ಧನೆಗಾಗಿಆಯೋಜಿಸುತ್ತಿರುವ ಸಮಾವೇಶ. ಕೇಂದ್ರಸರ್ಕಾರ ಅಕ್ಕಿ ಮೇಲೆ ವಿಧಿಸುತ್ತಿರುವ ಜಿಎಸ್‌ಟಿಪರೋಕ್ಷವಾಗಿ ರೈತರ ಮೇಲೆ ಮಾಡುತ್ತಿರುವಗದಾಪ್ರಹಾರ ಎಂದು ಕೇಂದ್ರ ಮಾಜಿ ಸಚಿವ ಡಾ. ಎಂ. ವೀರಪ್ಪ ಮೊಯಿಲಿ ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.