ತೈಲ ಸಂಶೋಧನಾ ಕೇಂದ್ರ ನಿರ್ಮಾಣಕ್ಕೆ ಶಂಕು
Team Udayavani, Aug 6, 2018, 11:56 AM IST
ಹೊಸಕೋಟೆ: ದೇಶವು 2030ಕ್ಕೆ ತೈಲ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲು ನಿರ್ಮಾಣಗೊಳ್ಳಲಿರುವ ಸಂಶೋಧನಾ ಕೇಂದ್ರ ಸಹಕಾರಿಯಾಗಲಿದೆ ಎಂದು ಲೋಕಸಭಾ ಸದಸ್ಯ ಎಂ.ವೀರಪ್ಪ ಮೊಯ್ಲಿ ಹೇಳಿದರು. ತಾಲೂಕಿನ ಕಂಬಳೀಪುರದಲ್ಲಿ ಪೆಟ್ರೋಲಿಯಂ ಸಂಶೋಧನಾ ಕೇಂದ್ರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
5 ವರ್ಷಗಳ ಹಿಂದೆಯೇ ಇದಕ್ಕಾಗಿ ಜಮೀನು ಮೀಸಲಾಗಿದ್ದು ಬೇರೆಡೆಗೆ ಸ್ಥಳಾಂತರಗೊಳ್ಳುವ ಪ್ರಯತ್ನಗಳು ನಡೆಯುತ್ತಿದ್ದ ಕಾರಣ, ನಿರ್ಮಾಣ ಕಾರ್ಯ ವಿಳಂಬವಾಗಿತ್ತು. ಇದೊಂದು ದಕ್ಷಿಣ ಭಾರತದಲ್ಲಿಯೇ ಪ್ರಥಮ ಯೋಜನೆಯಾಗಿದ್ದು ಸಂಶೋಧನಾ ಕೇಂದ್ರದ ಕೊರತೆ ನಿವಾರಣೆಗೊಳ್ಳಲಿದೆ ಎಂದು ತಿಳಿಸಿದರು.
ರಾಜೀವ್ ಗಾಂಧಿ ಪೆಟ್ರೋಲಿಯಂ ಸಂಶೋಧನಾ ಕೇಂದ್ರದ ಅಧ್ಯಕ್ಷ ಕೆ.ಪಿ.ಅಖೀಲೇಶ್ ಮಾತನಾಡಿ, 150 ಎಕರೆ ಪ್ರದೇಶದಲ್ಲಿ 1650 ಕೋಟಿ ರೂ.ಗಳ ವೆಚ್ಚದಲ್ಲಿ ಸಂಶೋಧನಾ ಕೇಂದ್ರ ನಿರ್ಮಾಣಗೊಳ್ಳಲಿದೆ. ಪ್ರಸ್ತುತ ರಾಯ್ ಬರೇಲಿಯಲ್ಲಿ 40 ಎಕರೆ, ಅಸ್ಸಾಂನ ಶಿವಸಾಗರ್‌ನ 100 ಎಕರೆ ಪ್ರದೇಶದಲ್ಲಿ 2 ಸಂಶೋಧನಾ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ ಎಂದರು.
ಶಾಸಕ ಎನ್.ನಾಗರಾಜ್ ಮಾತನಾಡಿ, ಸಂಶೋಧನಾ ಕೇಂದ್ರ ಸ್ಥಾಪನೆಯಿಂದ ಸ್ಥಳೀಯವಾಗಿ ಉದ್ಯೋಗಾವಕಾಶಗಳು ಲಭ್ಯವಾಗಿ ವ್ಯಾಪಾರ ವಹಿವಾಟು ವೃದ್ಧಿಗೊಳ್ಳಲಿದೆ ಎಂದರು. ಜಿಪಂ ಅಧ್ಯಕ್ಷ ವಿ.ಪ್ರಸಾದ್, ಉಪಾಧ್ಯಕ್ಷೆ ಅನಂತಕುಮಾರಿ, ಸದಸ್ಯರಾದ ಸಿ.ನಾಗರಾಜ್, ರೂಪಾ, ತಾಪಂ ಅಧ್ಯಕ್ಷ ವಿ.ಸಿ.ಜಯದೇವಯ್ಯ, ಎಐಸಿಸಿ ಸದಸ್ಯೆ ಕಮಲಾಕ್ಷಿ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.