ಎತ್ತಿನ ಹೊಳೆಯೋಜನೆಗೆ ಮರು ಜೀವ

ಬೈರಗೊಂಡ್ಲು ಜಲಾಶಯ ನಿರ್ಮಾಣದ ಸರ್ವೆ ಕಾರ್ಯಕ್ಕೆ ಡೀಸಿ ಆದೇಶ „ ಅವಳಿ ಜಿಲ್ಲೆಗೂ ನೀರು ಹರಿಸಲು ಅನುಕೂಲ

Team Udayavani, Jul 13, 2021, 2:08 PM IST

12_7_dbp_2_1207bg_2

ಡಿ.ಶ್ರೀಕಾಂತ

ದೊಡ್ಡಬಳ್ಳಾಪುರ: ಬಯಲು ಸೀಮೆಗೆ ನೀರುಣಿಸುವ ರಾಜ್ಯ ಸರ್ಕಾರದ ಎತ್ತಿನಹೊಳೆ ಯೋಜನೆ ಕಾಮಗಾರಿ ಗಳು ಭರದಿಂದ ಸಾಗಿವೆ. ಯೋಜನೆಯ ಪ್ರಮುಖ ಅಂಗವಾದ ಬೈರಗೊಂಡ್ಲು ಜಲಾಶಯ ನಿರ್ಮಾಣಕ್ಕೆ ಒಳಪಡುವ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಆಯ್ದ ಗ್ರಾಮಗಳಲ್ಲಿ ಸರ್ವೆ ಕಾರ್ಯ ಮತ್ತು ಜಿಯೋಟೆಕ್ನಿಕಲ್‌ ತನಿಖೆ ಮಾಡಲು ಜಿಲ್ಲಾಡಳಿತ ಸಿದ್ಧತೆ ನಡೆಸಿರುವುದು ಯೋಜನೆಗೆ ಮರು ಜೀವ ಬಂದಂತಾಗಿದೆ.

ಬೈರಗೊಂಡ್ಲು ಜಲಾಶಯ ನಿರ್ಮಾಣ: ಎತ್ತಿನಹೊಳೆ ಯೋಜನೆಗಾಗಿ ನಿರ್ಮಾಣಗೊಳ್ಳಲಿರುವ ಬೈರ ಗೊಂಡ್ಲು ಜಲಾಶಯ ನಿರ್ಮಾಣಕ್ಕಾಗಿ ದೊಡ್ಡಬಳ್ಳಾ ಪುರ ತಾಲೂಕಿನ ಸಾಸಲು ಹೋಬಳಿಯ 11 ಗ್ರಾಮಗಳು ಹಾಗೂ ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿಯ 17 ಗ್ರಾಮಗಳು ಮುಳುಗಡೆಯಾಗಲಿವೆ. ಬೈರಗೊಂಡ್ಲು ಜಲಾಶಯದ ಏರಿ ಹಾಗೂ ಮುಳಗಡೆ ಪ್ರದೇಶ ತುಮಕೂರು ಜಿಲ್ಲೆಯಕೊರಟೆಗೆರೆ ತಾಲೂಕು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಗುರುತಿಸಲಾಗಿದೆ.

ಅಂತಿಮ ಹಂತದಲ್ಲಿದೆ ಪೈಪ್‌ಲೈನ್‌ ಕಾಮಗಾರಿ: ಏರಿಯ ಉದ್ದ 4.62 ಕಿ.ಮೀ ಇದೆ. ಈ ಜಲಾಶಯದ ಒಟ್ಟಾರೆ ಮುಳುಗಡೆ ಪ್ರದೇಶ 5,200 ಎಕರೆಯಾ ಗಿದ್ದು, ತಾಲೂಕಿನ 2,534 ಎಕರೆ ಮುಳುಗಡೆ ಯಾಗಲಿದ್ದು, ಭೂ ಸ್ವಾಧೀನ ಪ್ರಕ್ರಿಯೆ ಪ್ರಗತಿಯಲ್ಲಿದೆ. ಕೊರಟಗೆರೆವರೆಗೆ ಹಾಗೂ ತಾಲೂಕಿನ ಸಾಸಲು ಹೋಬಳಿಯಲ್ಲಿ ಪೈಪ್‌ಲೈನ್‌ ಕಾಮಗಾರಿಗಳು ಅಂತಿಮ ಹಂತದಲ್ಲಿವೆ.

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಒಟ್ಟು11 ಗ್ರಾಮಗಳಲ್ಲಿ ಲಕ್ಕೇನ ಹಳ್ಳಿ, ಗರುಡುಗಲ್ಲು ಗ್ರಾಮಗಳು ಪೂರ್ಣ ಮುಳುಗಡೆ ಯಾಗಲಿದೆ. ಮಚ್ಚೇನಹಳ್ಳಿ, ಶ್ರೀರಾಮನಹಳ್ಳಿ, ಶಿಂಗೇನ ಹಳ್ಳಿ, ಭಾಗಶಃ ಮುಳುಗಡೆಯಾಗಲಿದ್ದು, ಪ್ರಸ್ತಾವನೆ ಅಂತಿಮ ಹಂತದಲ್ಲಿದೆ. ಗಾಣದಾಳು, ಕನಕೇನಹಳ್ಳಿ, ನರಸಾಪುರ, ಆಲಪ್ಪನಹಳ್ಳಿ, ಬೈಯಪ್ಪನಹಳ್ಳಿ, ಅಂಕೋನ ಹಳ್ಳಿ ಗ್ರಾಮಗಳು ಯೋಜನೆಯ ವ್ಯಾಪ್ತಿಗೆ ಒಳಪಡ ಲಿದ್ದು, ಪ್ರಸ್ತಾವನೆ ಸಲ್ಲಿಸಲಾಗಿದೆ.

ವಿವಿಧೆಡೆ ಭೂ ಸ್ವಾಧೀನ: ದೊಡ್ಡಬಳ್ಳಾಪುರದಲ್ಲಿ ಎತ್ತಿನಹೊಳೆ ಯೋಜನೆಯ ವಿಶೇಷ ಭೂ ಸ್ವಾಧೀನಾಧಿಕಾರಿಗಳ ಕಚೇರಿ ಕಾರ್ಯ ನಿರ್ವಹಿಸುತ್ತಿದೆ. ಬೈರಗೊಂಡ್ಲು ಜಲಾಶಯ ನಿರ್ಮಾಣದ ವ್ಯಾಪ್ತಿಗೆ ಟಿ.ಜಿ.ಹಳ್ಳಿ- ರಾಮನಗರ – ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ಫೀಡರ್‌ಕಾಲುವೆ ಯೋಜನೆಬರಲಿದ್ದು, ಇದರಲ್ಲಿ ನೆಲಮಂಗಲ ತಾಲೂಕಿನ 33 ಗ್ರಾಮಗಳು, ರಾಮನಗರದ ಮಾಗಡಿ ತಾಲೂಕಿನ2ಗ್ರಾಮಗಳು ಸೇರಿ 35 ಗ್ರಾಮಗಳ 83 ಎಕರೆ ಭೂ ಸ್ವಾಧೀನ ನಡೆಯಲಿದೆ. ಗೌರಿಬಿದನೂರು ದೊಡ್ಡಬಳ್ಳಾಪುರ ಗ್ರಾವಿಟಿ ಫೀಡರ್‌ ಕಾಲುವೆ ಯೋಜನೆಗೆ ದೊಡ್ಡಬಳ್ಳಾ ಪುರ ತಾಲೂಕಿನ 17 ಗ್ರಾಮಗಳ 53 ಎಕರೆ, ಗೌರಿಬಿದನೂರು ತಾಲೂಕಿನ35 ಗ್ರಾಮಗಳ92 ಎಕರೆ ಸೇರಿ 145 ಎಕರೆ ಭೂಸ್ವಾಧೀನ ನಡೆಯಲಿದೆ. ಇದರಿಂದ ಕೋಲಾರ – ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಎತ್ತಿನ ಹೊಳೆ ನೀರು ಹರಿಸಲು ಅನುಕೂಲವಾಗಲಿದೆ.

ಸರ್ವೆ ಕಾರ್ಯಕ್ಕೆ ಸಹಕಾರ ನೀಡಿ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಿಂದ ಬೆಂಗಳೂರು ಗ್ರಾಮಾಂತರ, ಕೋಲಾರ,ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಕಲ್ಪಿಸಲು ಉದ್ದೇಶಿಸಿ ರುವ ಬೈರಗೊಂಡಲು ಜಲಾಶಯದ ನಿರ್ಮಾಣಕ್ಕಾಗಿ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿ, ಗರಡುಗಲ್ಲು, ಮಚ್ಚೇನಹಳ್ಳಿ, ಶೀರಾಮನ ಹಳ್ಳಿ, ಶಿಂಗೇನಹಳ್ಳಿ, ಗಾಣದಾಳು, ಕಣಕೇನಹಳ್ಳಿ, ನರಸಾಪುರ, ಆಲಪ್ಪನಹಳ್ಳಿ, ಬೈಯಪ್ಪನಹಳ್ಳಿ ಮತ್ತು ಅಂಕೋನಹಳ್ಳಿ ಗ್ರಾಮಗಳಲ್ಲಿ ಜಲಾಶಯ ಮುಳುಗಡೆಯ ಸಾಧಕ ಬಾಧಕಗಳ ಸರ್ವೆ ಕಾರ್ಯ ಮಾಡಲು ಸರ್ಕಾರದಿಂದ ನಿರ್ದೇಶನವಿದೆ.

ದೊಡ್ಡಬಳ್ಳಾಪುರ ಜಲಾಶಯದ ಸರ್ವೆ ಕಾರ್ಯ ಮಾಡಿದ್ದಲ್ಲಿ ಮಾತ್ರ ಜಲಾಶಯದ ಮುಳುಗಡೆ ಪ್ರದೇಶದ ನಿಖರವಾಗಿ ಭೂ ಸ್ವಾಧೀನಕ್ಕೆ ಒಳಪಡುವ ವಿಸ್ತೀರ್ಣ,ಭೂ ಪರಿಹಾರ ಮೊತ್ತ, ಪುನರ್ವಸತಿ ಮತ್ತು ಪುನರ್‌ ನಿರ್ಮಾಣದ ಅಂದಾಜು ಲೆಕ್ಕಚಾರ ಮಾಡ ಲಾಗುವುದು. ಜಲಾಶಯದ ಸಾಧಕ ಬಾಧಕಗಳ ಸರ್ವೆ ಕಾರ್ಯದಿಂದ ಭೂಮಿಗಾಗಲಿ ಅಥವಾ ವೈಯಕ್ತಿಕ ದಿನ ನಿತ್ಯಕೆಲಸ ಕಾರ್ಯಗಳಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ತನಿಖೆ ಮಾಡಲು ಸ್ಥಳೀಯ ಜನರು ಅಡ್ಡಿಪಡಿಸದೆ ಸಹಕಾರ ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Supreme Court: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

SC: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

de

Mangaluru: ಅಪರಿಚಿತ ವ್ಯಕ್ತಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Supreme Court: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

SC: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.