ಸ್ವಚ್ಛತೆಗಾಗಿ ನಗರಸಭೆಯೊಂದಿಗೆ ಸಹಕರಿಸಿ
Team Udayavani, Jan 7, 2020, 1:07 PM IST
ಹೊಸಕೋಟೆ : ನಗರದಲ್ಲಿ ಸ್ವಚ್ಚತೆ ಕಾಪಾಡುವಲ್ಲಿ ಬೀದಿ ಬದಿ ವ್ಯಾಪಾರಿಗಳು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಪೌರಾಯುಕ್ತ ನಿಸಾರ್ ಅಹಮದ್ ಮನವಿ ಮಾಡಿದರು.
ಸರಕಾರದ ಸೂಚನೆಯಂತೆ ರಚಿಸಿರುವ ಸಮಿತಿಯ ಸದಸ್ಯರು ಬೀದಿ ಬದಿ ವ್ಯಾಪಾರಿಗಳಿಗೆ ಅಗತ್ಯವಾದ ಸೌಲಭ್ಯಗಳನ್ನು ಕಲ್ಪಿಸಲು ಕ್ರಿಯಾಯೋಜನೆ ತಯಾರಿಸುವಲ್ಲಿ ಸೂಕ್ತ ಸಲಹೆಗಳನ್ನು ನೀಡಬೇಕು. ಇಲಾಖೆ ಜಾರಿಗೊಳಿಸುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಸುಗಮವಾದ ವಾಹನ ಸಂಚಾರ, ಪಾದಚಾರಿಗಳ ಓಡಾಟಕ್ಕೆ ಅಡಚಣೆಯಾಗದಂತೆ ನಿಗಾವಹಿಸಬೇಕು ಎಂದು ಸೂಚಿಸಿದರು.
ಸಮಿತಿಯ ಸದಸ್ಯರು: ಸಮಿತಿ ಸದಸ್ಯರುಗಳಾಗಿ ಆಯ್ಕೆಯಾಗಿರುವ ಎನ್. ಶಂಕರಪ್ಪ, ರವಿ, ಎಚ್. ಜೆ. ಆನಂದ್‌ಸಿಂಗ್, ಸಿ. ರಾಜ, ಮಂಜುಳ, ವರಲಕ್ಷ್ಮಿ, ಪ್ರತಿಭಾ, ನಿರಂಜನಿ, ಬಾಬು, ರವಿ, ಆರೀಫ್ರವರುಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ನಗರಸಭೆಯ ಸಮುದಾಯ ಸಂಘಟನಾಧಿಕಾರಿ ಮಂಗಮ್ಮ, ನಗರಸಭೆ ಮಾಜಿ ಅಧ್ಯಕ್ಷ ಎಚ್.ಎ. ಜಯರಾಮ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.