ಕೆರೆ ಹೂಳೆತ್ತಲು ಸಹಕಾರ ಅವಶ್ಯ: ಡೀಸಿ

Team Udayavani, Jul 23, 2019, 3:00 AM IST

kere-hooe

ದೇವನಹಳ್ಳಿ: ಅಳಿವಿನಂಚಿನಲ್ಲಿರುವ ಕೆರೆಗಳಿಗೆ ಮೂಲ ಸ್ವರೂಪ ನೀಡಿ ಜಲ ಸಂರಕ್ಷಣೆ ಮಾಡಲು ಸ್ಥಳೀಯರ ಸಹಕಾರದ ಸಹಭಾಗಿತ್ವದಲ್ಲಿ ಕೆರೆ ಹೂಳೆತ್ತುವ ಕಾರ್ಯ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಿ.ಎಸ್‌.ಕರೀಗೌಡ ತಿಳಿಸಿದರು. ತಾಲೂಕಿನ ಚನ್ನರಾಯ ಪಟ್ಟಣ ಹೋಬಳಿ ಬೂದಿಗೆರೆ ಗ್ರಾಮದಲ್ಲಿ ಕೆರೆ ಹೂಳೆತ್ತುವ ಕಾರ್ಯದ ಕುರಿತು ನಡೆದ ಸಾರ್ವಜನಿಕರ ಸಭೆಯಲ್ಲಿ ಮಾತನಾಡಿದರು.

ಕೆರೆಗಳ ಪುನಶ್ಚೇತನ ಅವಶ್ಯ: ಬೂದಿಗೆರೆ ಕೆರೆ 399 ಎಕರೆ 12 ಗುಂಟೆ ಜಾಗವಿದೆ. ಗುರುವಾರ ಹೂಳೆತ್ತುವ ಕಾಮಗಾರಿಗೆ ಚಾಲನೆ ಕೊಡಲಾಗುವುದು. ಸರ್ಕಾರದ ನಯಾ ಪೈಸೆ ಹಣ ಬಳಸದೆ ಸಾರ್ವಜನಿಕರಿಂದಲೇ ಹಣವನ್ನು ಕ್ರೋಢೀಕರಿಸಿ ಕೆರೆ ಹೂಳೆತ್ತಲಾಗುವುದು. ಕಾಮಗಾರಿಗಾಗಿ ಜೆಸಿಬಿ, ಹಿಟಾಚಿ, ಟ್ರಾÂಕ್ಟರ್‌ , ಲಾರಿ ಕೊಡಬಹುದು. ಕೆರೆಗಳು ಅಭಿವೃದ್ಧಿ ಆದರೆ ಮಾತ್ರ ಗ್ರಾಮಗಳ ಅಭಿವೃದ್ಧಿ. ಬತ್ತಿ ಹೋಗಿರುವ ಕೆರೆಗಳನ್ನು ಪುನಶ್ಚೇತನ ಮಾಡಬೇಕಾದ ಅನಿವಾರ್ಯತೆ ಇದೆ. ಇಲ್ಲವಾದರೆ ಉಳಿಗಾಲವಿಲ್ಲ ಎಂದು ಮನವರಿಕೆ ಮಾಡಿದರು.

ಅಂತರ್ಜಲ ಮಟ್ಟ ಹೆಚ್ಚುತ್ತೆ: ಜಿಲ್ಲಾ ಪಂಚಾಯ್ತಿ ಸದಸ್ಯ ಜಿ.ಲಕ್ಷ್ಮೀನಾರಾಯಣ್‌ ಮಾತನಾಡಿ, ಜಿಲ್ಲಾಧಿಕಾರಿಗಳು ಕೆರೆ ಹೂಳೆತ್ತುವ ಕಾರ್ಯವನ್ನು ಸಾರ್ವಜನಿಕರ ಹಣದಲ್ಲಿ ಮಾಡುತ್ತಿರುವುದು ಉತ್ತಮವಾಗಿದೆ. ಚನ್ನರಾಯ ಪಟ್ಟಣ ಹೋಬಳಿ ವ್ಯಾಪ್ತಿಯಲ್ಲಿ ಬರುವ ಕೆರೆಗಳನ್ನು ಹಂತ ಹಂತವಾಗಿ ಹೂಳೆತ್ತಿದರೆ ಕೆರೆಗಳಲ್ಲಿ ಮಳೆ ನೀರು ನಿಂತು ಅಂರ್ತಜಲ ಮಟ್ಟ ಏರಿಕೆಯಾಗಲಿದೆ ಎಂದು ತಿಳಿಸಿದರು.

ಉತ್ತಮ ಬೆಳವಣಿಗೆ: ಗ್ರಾಮ ಪಂಚಾಯ್ತಿ ಅಧ್ಯಕ್ಷ ಕೆ.ಶ್ರೀನಿವಾಸಗೌಡ ಮಾತನಾಡಿ, ಜಿಲ್ಲೆಯಲ್ಲಿ ಹಲವು ಕೆರೆಗಳನ್ನು ಸ್ಥಳೀಯರು ಅಭಿವೃದ್ಧಿಪಡಿಸುತ್ತಿರುವುದು ಉತ್ತಮ ಬೆಳೆವಣಿಗೆ. ಬೂದಿಗೆರೆ ಕೆರೆಯನ್ನು ಹೂಳೆತ್ತಿದರೆ ಕೆರೆ ಅಭಿವೃದ್ಧಿ ಹೊಂದಿ ಅಂರ್ತಜಲ ಮಟ್ಟವೂ ಹೆಚ್ಚುತ್ತದೆ. ಜನ ಜಾನುವಾರುಗಳಿಗೆ , ಪ್ರಾಣಿ ಸಂಕುಲಗಳಿಗೆ ನೀರು ದೊರೆಯಲಿದೆ ಎಂದು ಹೇಳಿದರು.

ಈ ವೇಳೆಯಲ್ಲಿ ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷೆ ಭಾರತಿ , ತಾಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಮಂಜುನಾಥ್‌, ತಾಪಂ ಮಾಜಿ ಸದಸ್ಯ ಲಕ್ಷ್ಮಣ್‌ ಗೌಡ, ಉಪ ತಹಶೀಲ್ದಾರ್‌ ಚಿದಾನಂದ್‌, ಚೌಡಪ್ಪನಹಳ್ಳಿ ಎಂಪಿಸಿಎಸ್‌ ಅಧ್ಯಕ್ಷ ಶಂಕರ್‌, ಗ್ರಾಪಂ ಸದಸ್ಯ ರಾಮಮೂರ್ತಿ, ಬೂದಿಗೆರೆ ವಿಎಸ್‌ಎಸ್‌ಎನ್‌ ಅಧ್ಯಕ್ಷ ಶಂಕರಪ್ಪ, ಗ್ರಾಪಂ ಮಾಜಿ ಅಧ್ಯಕ್ಷ ಸಿ.ಎಸ್‌.ರಾಜಣ್ಣ ಹಾಗೂ ಗ್ರಾಮಗಳ ಮುಖಂಡರು ಇದ್ದರು.

ಪ್ರತಿ ಕ್ರಿಮಿ, ಕೀಟ, ಪ್ರಾಣಿ , ಪಕ್ಷಿ , ಮನುಷ್ಯ ಸೇರಿದಂತೆ ಪ್ರತಿ ಜೀವಿಗಳಿಗೂ ಹಾಗೂ ಒಂದು ಕಡ್ಡಿ ಹುಲ್ಲು ಬೆಳೆಯಲೂ ನೀರು ಬೇಕಾಗಿದೆ. ಕೆರೆ ಅಭಿವೃದ್ಧಿಗಾಗಿ ಎಲ್ಲರ ಸಹಕಾರ ಅತ್ಯವಶ್ಯವಿದೆ. ಪ್ರತಿ ಕೆರೆಗಳನ್ನು ಹೂಳೆತ್ತಲು ಜನರು ಸ್ವಯಂ ಪ್ರೇರಿತವಾಗಿ ಮುಂದೆ ಬರುತ್ತಿರುವುದು ಶ್ಲಾಘನೀಯ.
-ಕರೀಗೌಡ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

1-man-mohan

Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Udupi: ತಂಡಗಳ ನಡುವೆ ಹಲ್ಲೆ; ಪ್ರಕರಣ ದಾಖಲು

2

Kasaragod: ಹೊಳೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Untitled-1

Kasaragod Crime News: ಮೂವರು ಮಕ್ಕಳ ಸಹಿತ ತಾಯಿ ನಾಪತ್ತೆ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.