ಕಳಪೆ ಕಾಮಗಾರಿ ಸರಿಪಡಿಸಿ
Team Udayavani, Apr 24, 2022, 12:59 PM IST
ದೇವನಹಳ್ಳಿ: ಪಟ್ಟಣದಲ್ಲಿ ನಿರ್ಮಾಣವಾಗಿ ರುವ ಅಂಬೇಡ್ಕರ್ ಭವನದ ಕೆಲವು ಭಾಗಗಳು ಕಳಪೆ ಕಾಮಗಾರಿ ಆಗಿದ್ದು, ಅದನ್ನು ಕೂಡಲೇ ಸರಿಪಡಿಸಬೇಕು ಎಂದು ಅಧಿಕಾರಿಗಳಿಗೆ ಶಾಸಕ ಎಲ್.ಎನ್. ನಾರಾಯಣಸ್ವಾಮಿ ಸೂಚಿಸಿದರು.
ಪಟ್ಟಣದ ಗಿರಿಯಮ್ಮ ವೃತ್ತದಲ್ಲಿರುವ ಅಂಬೇಡ್ಕರ್ ಭವನಕ್ಕೆ ಭೇಟಿ ನೀಡಿ ಸ್ವಚ್ಛತೆ ಮತ್ತು ನಿರ್ವಹಣೆ ಬಗ್ಗೆ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಬಡವರ್ಗದ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಅಂಬೇಡ್ಕರ್ ಭವನವನ್ನು ನಿರ್ಮಾಣ ಮಾಡಲಾಗಿದೆ. ಆದರೆ, ಸರಿಯಾದ ರೀತಿ ನಿರ್ವಹಣೆ ಇಲ್ಲದೆ ಸ್ವತ್ಛತೆ ಇಲ್ಲದಿರುವುದು ಕಂಡು ಬಂದಿದೆ. ಕಾರ್ಯಕ್ರಮ ಮಾಡಿದವರು ಹಾಗೇ ಸಚ್ಛತ್ಛ ಮಾಡದೇ ಬಿಟ್ಟು ಹೋಗಿರುವುದು ಸರಿಯಲ್ಲ ಎಂದು ಆಕೋಶ ವ್ಯಕ್ತಪಡಿಸಿದರು.
ಕಪ್ಪುಪಟ್ಟಿಗೆ ಸೇರಿಸಲಾಗುತ್ತದೆ: ಯಾರು ಅಂಬೇಡ್ಕರ್ ಭವನದ ಕಾಮಗಾರಿ ಗುತ್ತಿಗೆ ಮಾಡಿದ್ದಾರೆ. ಅವರು ಕೂಡಲೇ ಕಳಪೆ ಕಾಮಗಾರಿ ಸರಿಪಡಿಸಬೇಕು. ಇಲ್ಲದಿದ್ದರೆ ಅಂತಹ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸ ಲಾಗುತ್ತದೆ. ಈಗಾಗಲೇ ಜಗಜೀವನ್ ರಾಮ್ ಭವನ, ಹಿಂದುಳಿದ ವರ್ಗದ ದೇವರಾಜ್ ಅರಸು ಭವನ ಪರಿಶೀಲನೆ ಮಾಡಿದ್ದೇನೆ. ಅಲ್ಲಿ ಸರಿಯಾದ ರೀತಿ ಇಟ್ಟುಕೊಂಡಿದ್ದಾರೆ. ಹಿಂದುಳಿದ ವರ್ಗದ ಹಾಸ್ಟೆಲ್‌ಗೂ ಭೇಟಿ ನೀಡಿ ಅಲ್ಲಿನ ಸಮಸ್ಯೆ ಏನು ಇದೆ ಎಂಬುದರ ಮಾಹಿತಿ ಪಡೆದಿದ್ದೇನೆ ಎಂದರು.
ಅನುದಾನಕ್ಕೆ ಮನವಿ: ಅಂಬೇಡ್ಕರ್ ಭವನದ ಗ್ಲಾಸ್‌ನ್ನು ಹೊಡೆದಿರುವವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸ ಬೇಕು. ಮುಂದೆ ಈ ರೀತಿ ಆಗಬಾರದು. ಈಗಾಗಲೇ ವಿದ್ಯುತ್ ಬಿಲ್ ಬಾಕಿ ಉಳಿದು ಕೊಂಡಿದೆ. ಕಾರ್ಯಕ್ರಮಗಳಿಗೆ ನೀಡುವಾಗ ಇದರ ಸಮಿತಿ ಸದಸ್ಯರ ಗಮನಕ್ಕೆ ತಂದು ಸ್ವತ್ಛತೆ ಇತರೆ ಸೌಕರ್ಯಗಳ ಬಗ್ಗೆ ಪರಿಶೀಲಿಸಬೇಕು. ಶೌಚಾಲಯ ನಿರ್ವಹಣೆ ಇಲ್ಲದೆ ಹದಗೆಟ್ಟಿದೆ. ಹಿಂದುಳಿದ ವರ್ಗದ ಹಾಗೂ ಸಮಾಜ ಕಲ್ಯಾಣ ಸಚಿವರನ್ನು ಭೇಟಿ ನೀಡಿ ಯಾವ ಭವನಕ್ಕೆ ಎಷ್ಟು ಅನುದಾನ ಬೇಕಾಗುತ್ತದೆ ಅದಕ್ಕೆ ಮನವಿ ಮಾಡಲಾಗುವುದು. ಮಹಾನ್ ನಾಯಕರ ಭವನ ಮಾಡಿದರೆ ಸಾಲದು. ಅವುಗಳ ನಿರ್ವಹಣೆ ಆಗಬೇಕು ಎಂದರು.
ಪುರಸಭಾ ಸದಸ್ಯ ಜಿ.ಎ.ರವೀಂದ್ರ, ಮಾಜಿ ಸದಸ್ಯ ಕಾಳಪ್ಪನವರ ವೆಂಕಟೇಶ್, ತಾಲೂಕು ಸೊಸೈಟಿ ನಿರ್ದೇಶಕ ಎಸ್. ಗುರಪ್ಪ,, ಸಮಾಜ ಕಲ್ಯಾಣ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕಿ ನಳಿನಾಕ್ಷಿ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯ ಪಾಲಕ ಅಭಿಯಂತರ ರವೀಂದ್ರಸಿಂಗ್, ಮುಖಂಡ ನಟರಾಜ್, ಮುತ್ತು ಕುಮಾರ್ ಹಾಗೂ ಮತ್ತಿತರರು ಇದ್ದರು.
ಭವನದಲ್ಲಿ ಸ್ವತ್ಛತೆ ಇಲ್ಲ: ಆಕ್ರೋಶ ಅಂಬೇಡ್ಕರ್ ಭವನದಲ್ಲಿ ಸ್ವತ್ಛತೆಯಿಲ್ಲ. ಪುರಸಭೆ ಕಸದ ತೊಟ್ಟಿಗಿಂತಲೂ ಹದಗೆಟ್ಟಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇದರ ಸ್ವತ್ಛತೆ ನಿರ್ವಹಣೆ ಮಾಡಬೇಕು. ಇಲ್ಲದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸ ಬೇಕಾಗುತ್ತದೆ. ಕಾಮಗಾರಿ ಕಳಪೆ ಆಗಿರುವುದು ಕಂಡುಬಂದಿದೆ. ಈ ಹಿಂದಿನ ಪಿಡಬ್ಲ್ಯೂಡಿ ಅಭಿಯಂತ ರರನ್ನು ಕರೆಸಿ ಇನ್ನು ಯಾವ ಕಾಮಗಾರಿ ಆಗಬೇಕು. ಯಾವ ಗುತ್ತಿಗೆದಾರರು ಮಾಡಿದ್ದಾರೆ ಎನ್ನುವ ಎಲ್ಲಾ ಮಾಹಿತಿ ಪಡೆಯುತ್ತೇನೆ ಎಂದು ಶಾಸಕ ನಾರಾಯಣಸ್ವಾಮಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.