ಮಹಿಳೆಯಲ್ಲಿ ಕೋವಿಡ್ 19 ಸೊಂಕು ಪತ್ತೆ
Team Udayavani, Jun 2, 2020, 7:08 AM IST
ಆನೇಕಲ್: ಪಟ್ಟಣದ ಮಹಿಳೆಯೊಬ್ಬರಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ. ತಾಲೂಕಿನಲ್ಲಿ ಕಳೆದ ಎರಡು ದಿನಗಳ ಹಿಂದೆ ಎರಡು ಪ್ರಕರಣಗಳು ಪತ್ತೆಯಾಗಿದ್ದವು. ಬೆನ್ನಲ್ಲೆ ಮತ್ತೂಂದು ಪ್ರಕರಣ ಪತ್ತೆಯಾಗಿರುವುದು ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.
ಪಟ್ಟಣದ ವಾರ್ಡ್ ನಂ.7ರ ಬಾಬಯ್ಯನಗುಡಿ ರಸ್ತೆಯಲ್ಲಿದ್ದ ಮಹಿಳೆ, ಕಳೆದ ಎರಡು ದಿನಗಳಿಂದ ವಾಂತಿ, ಭೇದಿಯಿಂದ ಬಳಲುತ್ತಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಹೋಗಿದ್ದಾಗ ಕೋವಿಡ್ 19 ಸೋಂಕು ತಗುಲಿದೆ ಎಂಬುದು ತಿಳಿದಿದೆ. ಸೋಂಕಿತ ಮಹಿಳೆ ಮನೆ ರಸ್ತೆ ಸುತ್ತಮುತ್ತ 100 ಮೀ. ಸೀಲ್‌ಡೌನ್ ಮಾಡಲಾಗಿದ್ದು,
ಪುರಸಭೆ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಾಸಾಯನಿಕ ಜೌಷಧ ಸಿಂಪಡಿಸಿದರು. ಈ ಭಾಗದಲ್ಲಿ ಯಾರೂ ಓಡಾಡಬಾರದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದು, 14 ದಿನಗಳು ಈ ಭಾಗ ಸೀಲ್‌ಡೌನ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಸೋಂಕಿತ ಮಹಿಳೆಯ ಪತಿ, ಪುತ್ರ, ಆಟೋ ಚಾಲಕ ಹಾಗೂ ನೇರ ಸಂಪರ್ಕದಲ್ಲಿದ್ದ ಸುಮಾರು 18 ಮಂದಿಗೆ ಕ್ವಾರಂಟೈನ್ ಮಾಡಲಾಗಿದೆ ಎಂದು ಆರೋಗ್ಯಾಧಿಕಾರಿ ಜ್ಞಾನಪ್ರಕಾಶ್ ತಿಳಿಸಿದರು.
ಈ ಪ್ರಕರಣದ ಮೂಲಕ ಶಿಕಾರಿ ಪಾಳ್ಯದ ಇಬ್ಬರು, ಹೆಬ್ಬಗೋಡಿ ಎಎಸ್‌ಐ ಒಬ್ಬರು ಸೇರಿದಂತೆ 4 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬರು ಮಾತ್ರ ಮೃತ ಪಟ್ಟಿದ್ದು, ತಾಲೂಕಿನಲ್ಲಿ 5 ಪ್ರಕರಣಗಳು ದಾಖಲಾದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.