ಹೊಸಕೋಟೆ: ಕೋವಿಡ್ 19 ಸೋಂಕಿಗೆ ವೃದ್ಧೆ ಸಾವು
Team Udayavani, Jun 21, 2020, 7:11 AM IST
ಹೊಸಕೋಟೆ: ಶನಿವಾರ ಕೋವಿಡ್ 19 ಸೋಂಕಿನಿಂದಾಗಿ 60 ವರ್ಷದ ವೃದ್ಧೆ ಸಾವನ್ನಪ್ಪಿದ್ದಾರೆ. ಜಿಲ್ಲೆ ಯಲ್ಲಿ ಇದು ಕೋವಿಡ್ 19 ಸೋಂಕಿನಿಂದ ಸಂಭವಿಸಿರುವ 2ನೇ ಸಾವಾಗಿದೆ. ಅಲ್ಲದೇ ಮತ್ತೆ ನಾಲ್ಕು ಪ್ರಕರಣ ಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 30ಕ್ಕೇರಿದೆ.ವೃದ್ಧೆ, ನಗರದ ವಿಶ್ವೇಶ್ವರಯ್ಯ ಬಡಾವಣೆಯ 7ನೇ ಕ್ರಾಸ್‌ನ ನಿವಾಸಿಯಾಗಿದ್ದಾರೆ.
ಅವರು ಜೂ. 17ರಂದು ಎದೆನೋವು ಎಂದು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ತಪಾಸಣೆ ನಡೆಸಿದ ವೈದ್ಯರು ಉಸಿರಾಟದ ತೊಂದರೆಯೆಂದು ತಿಳಿಸಿ, ರಾಜೀವ್‌ಗಾಂಧಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಪರೀ ಕ್ಷೆಗೆ ಒಳಪಡಿಸಿದಾಗ ಜೂ.19ರಂದು ಕೋವಿಡ್ 19 ಸೋಂಕು ದೃಢ ಪಟ್ಟಿದ್ದು, ಜೂ.20ರಂದು ಬೆಳಗ್ಗೆ ಮೃತಪಟ್ಟಿದ್ದಾರೆ.
ಮತ್ತೆ 4 ಕೋವಿಡ್ 19 ಸೋಂಕು ದೃಢ: ಹೊಸ ಕೋಟೆಯಲ್ಲಿ 3 ಹಾಗೂ ವಿಜಯಪುರದಲ್ಲಿ 1 ಸೇರಿ ಶನಿವಾರ ಒಟ್ಟು ನಾಲ್ಕು ಕೋವಿಡ್ 19 ಪ್ರಕರಣಗಳು ದೃಢಪಟ್ಟಿವೆ. ತಾಲೂಕು ಸರಕಾರಿ ಆಸ್ಪತ್ರೆ ಯಲ್ಲಿ ಜೂ.17ರಂದು ಲ್ಯಾಬ್ ಟೆಕ್ನಿಶಿಯನ್‌ಗೆ ಸೋಂಕು ಇರು ವುದು ದೃಢಪಟ್ಟ ಕಾರಣದಿಂದಾಗಿ ವೈದ್ಯರು, ಸಿಬ್ಬಂದಿ ವರ್ಗದವ ರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿತ್ತು.
ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 30 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದ್ದು, ಉಳಿದ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರದು ನೆಗೆ ಟಿವ್ ಎಂದು ವರದಿಯಾಗಿದೆ. ಮಹಾರಾಷ್ಟ್ರದಿಂದ ಬಂದಿದ್ದ ತಾಲೂಕಿನ ಜಡಿಗೇನಹಳ್ಳಿಯ ಮೊರಾರ್ಜಿ ವಸತಿ ಶಾಲೆಯಲ್ಲಿ ಕ್ವಾರಂಟೈನ್‌ಗೆ ಒಳಗಾಗಿದ್ದ 18 ವರ್ಷದ ಯುವಕ, 39 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ. ಜೂ.17ರಿಂದ ಈವರೆಗೂ ತಾಲೂಕಿನಲ್ಲಿ ಒಟ್ಟು 8 ಕೋವಿಡ್ 19 ಸೋಂಕಿನ ಪ್ರಕರಣಗಳು ಕಂಡು ಬಂದಿವೆ.
ಶಾಸಕ ಬಚ್ಚೇಗೌಡ ಆತಂಕ: ತಾಲೂಕಿನಲ್ಲಿ ಕೋವಿಡ್ 19 ಸೋಂಕಿನಿಂದ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿರುವ ಬಗ್ಗೆ ಶಾಸಕ ಶರತ್ ಬಚ್ಚೇಗೌಡ ಆತಂಕ ವ್ಯಕ್ತಪಡಿಸಿದರು. ಲಾಕ್‌ಡೌನ್ ನಿಯಮ ಸಡಿಲಗೊಳಿಸಿದ ನಂತರ ತಾಲೂಕಿನಲ್ಲಿ ಹೆಚ್ಚಿನ ಪ್ರಕರಣ ಗಳು ಕಂಡುಬರುತ್ತಿರುವುದು ವಿಷಾದನೀಯ ಎಂದರು.
ವ್ಯಾಪಾರಿಗೆ ಸೋಂಕು ದೃಢ
ವಿಜಯಪುರ: ಪಟ್ಟಣದ ಚನ್ನಕೇಶವಸ್ವಾಮಿ ದೇವಾಲಯದ ಬಳಿ ವಾಸವಿದ್ದ 47 ವರ್ಷದ ವ್ಯಕ್ತಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ. ವ್ಯಕ್ತಿಯು ಪಟ್ಟಣದ ಗಾಂಧಿ ಚೌಕ್‌ನಲ್ಲಿ ದಿನಸಿ ಅಂಗಡಿ ಇಟ್ಟು ವ್ಯಾಪಾರ ಮಾಡುತ್ತಿದ್ದು, ಜೂನ್ 18ರಂದು ಜ್ವರ ಬಂದ ಕಾರಣ ದೇವನಹಳ್ಳಿಯ ಲೀನಾ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು.
ಅವರ ಗಂಟಲು ದ್ರವ ಮಾದರಿ ಪರೀಕ್ಷಿಸಿದಾಗ ಕೋವಿಡ್ 19 ಪಾಸಿಟಿವ್ ಬಂದಿದ್ದು, ಅವರನ್ನು ಬೆಂಗಳೂರಿನ ಸಿ.ವಿ. ರಾಮನ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಸೋಂಕಿತರ ಪತ್ನಿ, ಪುತ್ರಿಯನ್ನು ಕ್ವಾರಂಟೈನ್‌ಗೊಳಿಸಲಾಗಿದ್ದು, ವಾಸವಿದ್ದ ರಸ್ತೆ ಸೀಲ್‌ಡೌನ್ ಮಾಡಲಾಗಿದೆ. ವ್ಯಾಪಾರದ ಸ್ಥಳಗಳಲ್ಲಿ ಗ್ರಾಹಕರು ಅಥವಾ ಇತರರಿಂದ ಸೋಂಕು ತಗಲಿರುವ ಸಾಧ್ಯತೆ ಇರಬಹುದೆಂದು ಶಂಕಿಸಲಾಗಿದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ಸಂಜಯ್ ತಿಳಿಸಿದರು.
ಸೋಂಕಿತ ವಾಸವಿದ್ದ ಸ್ಥಳಕ್ಕೆ ವಿಜಯಪುರ ಠಾಣೆ ಪಿಎಸ್‌ಐ ಮಂಜುನಾಥ್, ಪುರಸಭೆ ಮುಖ್ಯಾಧಿಕಾರಿ ಎ.ಬಿ. ಪ್ರದೀಪ್ ಕುಮಾರ್, ಮುಖ್ಯ ಆರೋಗ್ಯ ಅಧಿಕಾರಿ ಚಿದಾನಂದ್, ಪುರಸಭೆ ಆರೋಗ್ಯಾಧಿಕಾರಿ ಉದಯ್ ಕುಮಾರ್, ಪರಿಸರ ಅಭಿಯಂತರ ಮಹೇಶ್, ಗ್ರಾಮ ಲೆಕ್ಕಾಧಿಕಾರಿ ಸುನಿಲ, ಪುರಸಭೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.