ಕೋವಿಡ್ ನಿಯಂತ್ರಣದಲ್ಲಿ ಲೋಪವಾಗದಿರಲಿ
Team Udayavani, Apr 20, 2021, 7:12 PM IST
ದೇವನಹಳ್ಳಿ: ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣಕ್ಕೆ ನೇಮಿಸಲಾಗಿರುವ ಅಧಿಕಾರಿಗಳು, ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದೆ ತಮ್ಮಕರ್ತವ್ಯ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.
ತಾಲೂಕಿನಲ್ಲಿ ಆರೋಗ್ಯ ಇಲಾಖೆ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳ ವರ್ಚ್ಯುವಲ್ ಸಭೆಯಲ್ಲಿ ಮಾತ ನಾಡಿದ ಅವರು, ಕೋವಿಡ್ ಸೋಂಕಿತರಿಗೆ ಶೇ.50 ಹಾಸಿಗೆ ಮೀಸಲಿಡಲು ಜಿಲ್ಲೆಯ ಖಾಸಗಿ ಆಸ್ಪತ್ರೆಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಈಬಗ್ಗೆ ಪರಿಶೀಲನೆ ನಡೆಸಿ, ಆರೋಗ್ಯ ಇಲಾಖೆಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದರು.
ವಸತಿ ಶಾಲೆ ಬಳಸಿಕೊಳ್ಳಿ: ಆಸ್ಪತ್ರೆಯಲ್ಲಿರುವ ಕೋವಿಡ್ ಸೋಂಕಿತರಲ್ಲಿ ರೋಗದ ಲಕ್ಷಣಗಳುಕಂಡು ಬರದಿದ್ದರೆ, ಅವರಿಗೆ ಕೋವಿಡ್ ಕೇರ್ ಕೇಂದ್ರ ಅಥವಾ ಮನೆಯಲ್ಲಿಯೇ ಚಿಕಿತ್ಸೆ ಪಡೆಯುವಂತೆ(ಹೋಂ ಐಸೋಲೇಷನ್) ತಿಳಿಸುವ ಮೂಲಕ ತೀವ್ರತರವಾಗಿ ಸೋಂಕಿನಿಂದ ಬಳಲುತ್ತಿರುವ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಸ್ಥಳಾವಕಾಶ ಕಲ್ಪಿಸಬೇಕು. ಹಾಸಿಗೆಗಳ ಕೊರತೆನೀಗಿಸಲು ಹಾಗೂ ಐಸೋಲೇಷನ್‌ಗಾಗಿ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸಮಾಜಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳಕಲ್ಯಾಣ ಇಲಾಖೆಯ ವಸತಿ ಶಾಲೆಗಳನ್ನು ಬಳಸಿಕೊಳ್ಳಲು ಸೂಚನೆ ನೀಡಿದರು.
ದಂಡ ವಿಧಿಸಿ, ಅರಿವು ಮೂಡಿಸಿ: ತಹಶೀಲ್ದಾರ್ ಗಳು, ನಗರಸಭೆ ಅಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳುಹೆಚ್ಚು ಜನಸಂದಣಿ ಸೇರಬಹುದಾದಸ್ಥಳಗಳಿಗೆ ಭೇಟಿ ನೀಡಿ, ಮಾಸ್ಕ್ ಧರಿಸದ, ಸಾಮಾಜಿಕ ಅಂತರ ಪಾಲನೆ ಮಾಡದವರಿಗೆ ದಂಡ ವಿಧಿಸುವ ಮೂಲಕಕೋವಿಡ್ ಸೋಂಕಿನ ಕುರಿತುಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು.ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಬೇಕು.ಕೋವಿಡ್ ಸೋಂಕು ದೃಢಪಟ್ಟ ವ್ಯಕ್ತಿಗಳ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪತ್ತೆ ಹಚ್ಚುವ ಮೂಲಕಅವರನ್ನು ಪರೀಕ್ಷೆಗೆ ಒಳಪಡಿಸಿ, ಕೋವಿಡ್‌ಹರಡುವಿಕೆ ತಡೆಗಟ್ಟುವ ಕೆಲಸ ಮಾಡಬೇಕು ಎಂದು ಹೇಳಿದರು.
45 ವರ್ಷ ಮೇಲ್ಪಟ್ಟ ಎಲ್ಲರೂ ಕೋವಿಡ್ ಲಸಿಕೆ ಪಡೆಯುವಂತೆ ಸಾರ್ವಜನಿಕರಿಗೆ ಉತ್ತೇಜಿಸುವಕಾರ್ಯವಾಗಬೇಕು. ಜಿಲ್ಲೆಯಲ್ಲಿರುವ 60 ವರ್ಷ ವಯಸ್ಸು ಮೇಲ್ಪಟ್ಟವರಿಗೆ ಲಸಿಕೆ ಪಡೆಯಲುಅಗತ್ಯವಿದ್ದರೆ ಸಾರಿಗೆ ವ್ಯವಸ್ಥೆ ಮಾಡಬೇಕು ಹಾಗೂ ತುರ್ತು ಚಿಕಿತ್ಸೆಗಾಗಿ ಆ್ಯಂಬುಲೆನ್ಸ್ ಸನ್ನದ್ದುರೀತಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಆ್ಯಪ್‌ಗೆ ಅಪ್‌ಲೋಡ್ ಮಾಡಿ: ಜಿಲ್ಲೆಯಲ್ಲಿ ಪ್ರತಿದಿನ ನಡೆಯುವ ಕೋವಿಡ್ ಪರೀಕ್ಷೆ, ಹೋಂ ಕ್ವಾರಂಟೈನ್‌ನಲ್ಲಿರುವ ರೋಗಿಗಳು, ಪಾಸಿಟಿವ್‌ಪ್ರಮಾಣ, ಕೋವಿಡ್ ಲಸಿಕೆ ಪಡೆದವರ ಅಂಕಿ-ಅಂಶಗಳನ್ನು ನಿಗದಿತ ವೆಬ್ ಸೈಟ್‌ಗಳಿಗೆ, ಆ್ಯಪ್‌ಗ್ಳಿಗೆ ಅಪ್ಲೋಡ್ ಮಾಡಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಗುಣಮಟ್ಟದ ಆಹಾರ ನೀಡಿ: ಜಿಲ್ಲೆಯ ಎಲ್ಲಾ ಕೋವಿಡ್ ಕೇಂದ್ರಗಳಲ್ಲಿನ ಕೊಠಡಿ, ಶೌಚಾಲಯ ಸೇರಿ ಎಲ್ಲಾ ಕಡೆಗಳಲ್ಲಿ ಶುಚಿತ್ವ ಕಾಪಾಡಬೇಕು. ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕು ಹಾಗೂ ಕೋವಿಡ್ ಸೋಂಕಿತರಿಗೆ ಗುಣಮಟ್ಟದ ಆಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆ ನಡೆಸುವಾಗ ಕೋವಿಡ್ ನಿಯಮ ಪಾಲಿಸುವುದುಕಡ್ಡಾಯವಾಗಿದೆ. ವಿಡಿಯೋ ಸಂವಾದದ ಮೂಲಕವೂ ಸಭೆಗಳನ್ನು ನಡೆಸಲು ಅವಕಾಶಕಲ್ಪಿಸಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ ಎಂದು ಅಧಿಕಾರಿಗಳ ಗಮನಕ್ಕೆ ತಂದರು.
ವರ್ಚ್ಯುವಲ್ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ ಕೆ.ನಾಯಕ, ಉಪ ವಿಭಾಗಾಧಿಕಾರಿ ಅರುಳ್‌ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ, ತಹಶೀಲ್ದಾರರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.