ಕೋವಿಡ್ 3ನೇ ಅಲೆ ತಡೆಗೆ ಕ್ರಮ ಕೈಗೊಳ್ಳಿ
Team Udayavani, Jun 12, 2021, 5:09 PM IST
ದೇವನಹಳ್ಳಿ: ಬೆಂ.ಗ್ರಾ. ಜಿಲ್ಲಾದ್ಯಂತ ಮಕ್ಕಳ ತಜ್ಞವೈದ್ಯರ ತಂಡ ಹಳ್ಳಿಗಳಿಗೆ ತೆರಳಿ ಮಕ್ಕಳ ಆರೋಗ್ಯತಪಾಸಣೆ ಮೂಲಕ ಕೋವಿಡ್ 3ನೇ ಅಲೆ ತಡೆಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಡೀಸಿಕೆ.ಶ್ರೀನಿವಾಸ್ ತಿಳಿಸಿದರು.
ತಾಲೂಕಿನ ಜಿಲ್ಲಾಡಳಿತ ಭವನದ ಡೀಸಿ ಕಚೇರಿಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದಕೋವಿಡ್ ನೋಡಲ್ ಅಧಿಕಾರಿಗಳ ಸಭೆಯಲ್ಲಿಮಾತನಾಡಿ, ಮುಂಜಾಗ್ರತಾ ಕ್ರಮವಾಗಿ ಈಗಾಗಲೇಮಕ್ಕಳಿಗೆ ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಪ್ರತ್ಯೇಕವಾಗಿ50 ಹಾಸಿಗೆ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್,ದಿವ್ಯಾಂಗ ಮಕ್ಕಳಿಗೆ 2 ಕೇಂದ್ರ ಸ್ಥಾಪಿಸಲಾಗಿದೆ. ಪ್ರತಿತಾಲೂಕಿನಲ್ಲಿ 5 ಮಕ್ಕಳ ತಜ್ಞ ವೈದ್ಯರನ್ನು ನೇಮಕಮಾಡಿಕೊಂಡು ಮಕ್ಕಳ ಆರೋಗ್ಯ ತಪಾಸಣೆಮಾಡಬೇಕು. ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸುವ ಆಹಾರ,ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೆ ಮಾತ್ರೆಗಳನ್ನುನೀಡಬೇಕು ಎಂದು ಸಲಹೆ ನೀಡಿದರು.
ಜಾಗೃತಿ ಮೂಡಿಸಿ: ಶಾಲಾ-ಕಾಲೇಜುವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿನಡೆಯುತ್ತಿದ್ದು, ಶಿಕ್ಷಕರು ವಾರಕ್ಕೊಮ್ಮೆ ಕೋವಿಡ್‌ಕುರಿತಾದ ಮಾಹಿತಿ ಜೊತೆಗೆ ಜಾಗೃತಿಮೂಡಿಸಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣಇಲಾಖೆ ಕ್ರಮ ಕೈಗೊಳ್ಳಬೇಕು. ಜೂ.21ರಿಂದ 18ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲುಆದೇಶವಿದ್ದು, ಜಿಲ್ಲೆಯಲ್ಲಿ ಹೆಚ್ಚು ಲಸಿಕಾ ಕೇಂದ್ರತೆರೆಯಬೇಕು ಎಂದು ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಡಾ. ಜಗದೀಶ.ಕೆ.ನಾಯಕ,ಜಿಪಂ ಯೋಜನಾ ನಿರ್ದೇಶಕ ಮುನಿಕೃಷ್ಣಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಡಾ.ತಿಪ್ಪೇಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೃಷ್ಣಪ್ಪ, ಮಹಿಳಾ ಮತ್ತು ಮಕ್ಕಳಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪುಷ್ಪಲತಾಜಿ.ರಾಯರ್ ಹಾಜರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.