ಜಿಲ್ಲಾದ್ಯಂತ ಕೋವಿಡ್ ಲಸಿಕೆ
Team Udayavani, Mar 13, 2021, 11:57 AM IST
ದೇವನಹಳ್ಳಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾದ್ಯಂತ ಕೋವಿಡ್ ಲಸಿಕಾ ಕಾರ್ಯಕ್ರಮವನ್ನುಹಮ್ಮಿಕೊಳ್ಳಲಾಗಿದ್ದು, ಈಗಾಗಲೇ ಆರೋಗ್ಯಕಾರ್ಯಕರ್ತರು ಮತ್ತು ಇತರೆ ಮುಂಚೂಣಿ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಮಂಜುಳಾದೇವಿ ತಿಳಿಸಿದರು.
ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಸ್ತುತ 60 ವರ್ಷ ಮೇಲ್ಪಟ್ಟವರು ಹಾಗೂ 45-59 ವರ್ಷದ ಹೃದಯ ಸಂಬಂಧಿ ಕಾಯಿಲೆ, ಮಧುಮೇಹ, ರಕ್ತದೊತ್ತಡ, ಶ್ವಾಸಕೋಶ,ಮೂತ್ರಪಿಂಡ, ಸಂಬಂಧಿಸಿದ ಖಾಯಿಲೆ ಹಾಗೂ ಇತರೆದೀರ್ಘಾವಧಿ ಖಾಯಿಲೆಗಳಿಂದ ಬಳಲುತ್ತಿರುವ ನಾಗರಿಕರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿರುವ ಹಿನ್ನೆಲೆ ಸಂಬಂಧಪಟ್ಟ ಫಲಾನುಭವಿಗಳು ಹತ್ತಿರದ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ, ಕೋವಿಡ್ ಲಸಿಕೆ ಬಗ್ಗೆ ಮಾಹಿತಿ ಪಡೆದು ಲಸಿಕೆಯನ್ನು ಹಾಕಿಸಿಕೊಳ್ಳಬಹುದಾಗಿದೆ ಎಂದರು.
ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆ ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ,ಸಮುದಾಯ ಆರೋಗ್ಯ ಕೇಂದ್ರ ವಿಜಯಪುರ, ನೆಲಮಂಗಲ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹೊಸಕೋಟೆ ಮತ್ತು ದೊಡ್ಡಬಳ್ಳಾಪುರ ಹಾಗೂ ಇತರೆಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಕೋವಿಡ್ ಲಸಿಕೆಯನ್ನು ನೀಡಲಾಗುವುದು ಹಾಗೂಖಾಸಗಿ ಆಸ್ಪತ್ರೆ ದೇವನಹಳ್ಳಿಯ ಆಕಾಶ್ ಆಸ್ಪತ್ರೆ, ರಾಮಯ್ಯ ಲೀನಾ ಆಸ್ಪತ್ರೆ/ ಹೊಸಕೋಟೆಯ ಎಂ.ವಿ.ಜೆ ಆಸ್ಪತ್ರೆ, ನೆಲಮಂಗಲದ ರಾಮಯ್ಯ ಹರ್ಷ ಆಸ್ಪತ್ರೆಯಲ್ಲಿಕೋವಿಡ್‌ಲಸಿಕೆ ಲಭ್ಯವಿದ್ದು, 250 ರೂ. ಗಳನ್ನು ಪಾವತಿಸಿ ಲಸಿಕೆ ಪಡೆಯಬಹುದಾಗಿದೆ ಎಂದರು. ಮಾಹಿತಿಗೆ ದೂ.080-29569449, ಕಂಟ್ರೋಲ್ ರೂಂ. ದೂ. ಸಂ080-29781021 ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.