ದೌರ್ಜನ್ಯ ಪ್ರಕರಣ: ಶೀಘ್ರ ಪರಿಹಾರಕ್ಕೆ ಸೂಚನೆ

ಸಂತ್ರಸ್ತರಿಗೆ ತ್ವರಿತವಾಗಿ ಪರಿಹಾರ ಮಂಜೂರು ಮಾಡಲು ಅಧಿಕಾರಿಗಳಿಗೆ ಡೀಸಿ ಕರೀಗೌಡ ತಾಕೀತು

Team Udayavani, Jun 28, 2019, 8:23 AM IST

br-t-dy-2

ದೇವನಹಳ್ಳಿ: 2017ರಲ್ಲಿ ದಾಖಲಾದ ದೌರ್ಜನ್ಯ ಪ್ರಕರಣಗಳು ಇನ್ನೂ ಇತ್ಯರ್ಥಗೊಂಡಿರುವುದಿಲ್ಲ. ಪೊಲೀಸ್‌ ಅಧಿಕಾರಿಗಳು ಆದಷ್ಟು ಶೀಘ್ರವಾಗಿ ತನಿಖೆ ನಡೆಸಬೇಕು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಪೊಲೀಸ್‌ ಇಲಾಖೆಯ ಸಂಪರ್ಕದಲ್ಲಿದ್ದು, ಸಹಕಾರ ನೀಡಬೇಕು ಮತ್ತು ಪರಿಹಾರವನ್ನು ಸಂತ್ರಸ್ತರಿಗೆ ತ್ವರಿತವಾಗಿ ಮಂಜೂರು ಮಾಡುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಕರೀಗೌಡ ತಿಳಿಸಿದರು.

ತಾಲೂಕಿನ ಚಪ್ಪರದ ಕಲ್ಲು ಸರ್ಕಲ್ ಬಳಿ ಇರುವ ಜಿಲ್ಲಾ ಸಂಕೀರ್ಣ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ (ದೌರ್ಜನ್ಯ ಪ್ರತಿಬಂಧ) ನಿಯಮಗಳು 1995ರ ನಿಯಮ 17ರಂತೆ ರಚಿಸಿರುವ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನರ ಮೇಲೆ ನಡೆದಿರುವ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣಗಳು ತ್ವರಿತವಾಗಿ ಇತ್ಯರ್ಥಗೊಳಿಸಿ, ಸಂತ್ರಸ್ತರಿಗೆ ಶೀಘ್ರ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮವಹಿಸಬೇಕು ಎಂದರು.

ಸಾಕಷ್ಟು ದೌರ್ಜನ್ಯ ಪ್ರಕರಣಗಳು ದಾಖಲಾಗಿದರೂ ಸಹ, ಕಡಿಮೆ ಸಂಖ್ಯೆಯಲ್ಲಿ ಪರಿಹಾರಗಳು ನೀಡಲಾಗಿದೆ. ಸರ್ಕಾರದ ಪರಿಹಾರ, ಸೌಲಭ್ಯ ಅನ್ಯಾಯಕ್ಕೆ ಒಳಗಾದವರಿಗೆ ಸಿಗಬೇಕು. ಪ್ರಕರಣಗಳು ಶೀಘ್ರ ಇತ್ಯರ್ಥಗೊಂಡರೆ, ಅನ್ಯಾಯವಾದವರಿಗೆ ನ್ಯಾಯ ಕೊಡಿಸುವುದರೊಂದಿಗೆ, ಕಾನೂನು ಹಾಗೂ ಆಡಳಿತ ನಡೆಸುವವರ ಮೇಲೆ ನಂಬಿಕೆ ಹೆಚ್ಚಾಗುತ್ತದೆ ಎಂದು ಹೇಳಿದರು.

ಉಪ ವಿಭಾಗ ಹಾಗೂ ತಾಲೂಕು ಮಟ್ಟದಲ್ಲಿ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಗಳು ನಿಗದಿಪಡಿಸಿದಂತೆ ನಡೆಯುತ್ತಿಲ್ಲ ಎಂದು ಸಮಿತಿ ಸದಸ್ಯರು ಹಾಗೂ ಸಾರ್ವಜನಿಕರಿಂದ ದೂರುಗಳು ಕೇಳಿಬಂದಿವೆ. ಪ್ರತಿ 3 ತಿಂಗಳಿಗೊಮ್ಮೆ ವರ್ಷದಲ್ಲಿ 4 ಸಭೆಯನ್ನು ಕಡ್ಡಾಯವಾಗಿ ಉಪ ವಿಭಾಗ ಮಟ್ಟದಲ್ಲಿ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆ ಹಾಗೂ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್‌ಗಳ ಅಧ್ಯಕ್ಷತೆಯಲ್ಲಿ ನಡೆಯುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್‌.ಲತಾ, ಮುಖ್ಯ ಯೋಜನಾಧಿಕಾರಿ ವಿನೂತಾ, ಹೆಚ್ಚವರಿ ಪಲೀಸ್‌ ವರಿಷ್ಠಾಧಿಕಾರಿ ಸಜಿತ್‌ ವಿ.ಜೆ, ಉಪವಿಭಾಗಾಧಿಕಾರಿ ಮಂಜುನಾಥ್‌, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪ್ರೇಮನಾಥ್‌ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.