ಕುತೂಹಲ ಕೆರಳಿಸಿದ ಚಿಕ್ಕಬಳ್ಳಾಪುರ ಕ್ಷೇತ್ರ

Team Udayavani, Mar 13, 2019, 7:50 AM IST

kutuhala.jpg

ದೇವನಹಳ್ಳಿ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಎಂ.ವೀರಪ್ಪ ಮೊಯ್ಲಿ ಅವರು ಮತ್ತೆ ಸ್ಪರ್ಧಿಸುವ ಸಾಧ್ಯತೆಗಳಿರುವುದರಿಂದ ರಾಜ್ಯದ ಪ್ರತಿಷ್ಠಿತ ಕ್ಷೇತ್ರಗಳ ಸಾಲಿನಲ್ಲಿ ನಿಲ್ಲುತ್ತದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ 8 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ಚಿಕ್ಕಬಳ್ಳಾಪುರ, ಗೌರಿಬಿದನೂರು, ಬಾಗೇಪಲ್ಲಿ, ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ ಕ್ಷೇತ್ರಗಳನ್ನು ಒಳಗೊಂಡಿದೆ. 

ಹಾಲಿ ಸಂಸದ ಎಂ.ವೀರಪ್ಪ ಮೊಯ್ಲಿ ಎರಡು ಬಾರಿ ಲೋಕಸಭಾ ಚುನಾವಣೆಯಲ್ಲಿ ಗೆದ್ದು, ಸತತ ಮೂರನೇ ಬಾರಿ ಗೆಲುವಿಗೆ ಕಸರತ್ತು ನಡೆಸಲಿದ್ದಾರೆ. ಕಳೆದ ಚುನಾವಣೆಯಲ್ಲಿ ವೀರಪ್ಪ ಮೊಯ್ಲಿಯವರ ಪ್ರತಿಸ್ಪರ್ಧಿಯಾಗಿದ್ದ ಮಾಜಿ ಸಚಿವ ಬಿ.ಎನ್‌.ಬಚ್ಚೇಗೌಡ 10ಸಾವಿರ ಮತಗಳ ಅಂತರದಿಂದ ಸೋಲುಂಡಿದ್ದರು. ಹಾಗಾಗಿ, ಈ ಬಾರಿ ಮತ್ತೆ ಬಿಜೆಪಿಯಿಂದ ಸ್ಪರ್ಧೆಗಿಳಿಯುವ ಮಾಜಿ ಸಚಿವ ಬಿ.ಎನ್‌.ಬಚ್ಚೇಗೌಡರು ಸಂಘಟನೆಯನ್ನು ಚುರುಕುಗೊಳಿಸಿದ್ದಾರೆ.

ಇತ್ತೀಚೆಗೆ ನಡೆದ ಬೂತ್‌ ಮಟ್ಟದ ಪದಾಧಿಕಾರಿಗಳ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು, ಬಿ.ಎನ್‌.ಬಚ್ಚೇಗೌಡರೇ ಕ್ಷೇತ್ರದ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪ್ರತ್ಯೇಕ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆ ಇಲ್ಲದಿದ್ದರೂ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಅನಿವಾರ್ಯತೆ ಎರಡೂ ಪಕ್ಷಕ್ಕೆ ಬಂದೊದಗಿದೆ. 

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಪ್ರಸ್ತುತ ಸಂಸದ ಎಂ.ವೀರಪ್ಪ ಮೊಯ್ಲಿ ಇದ್ದರು ಸಮಿಶ್ರ ಸರ್ಕಾರದಲ್ಲಿ ಅಭ್ಯರ್ಥಿ ಯಾರೆಂಬುವುದು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಕಾರ್ಯಕರ್ತರಲ್ಲಿ ಗೊಂದಲವುಂಟು ಮಾಡಿದೆ. ಈ ಬಗ್ಗೆ ಹಲವು ಚರ್ಚೆಗಳು ನಡೆಯುತ್ತಿವೆ. ಹಾಲಿ ಸಂಸದ ಎಂ.ವೀರಪ್ಪ ಮೊಯ್ಲಿ ಲೋಕಸಭಾ ಕ್ಷೇತ್ರದಲ್ಲಿ ಎರಡು ಅವಧಿಗೆ ಆಯ್ಕೆಗೊಂಡಿದ್ದು, ಮೂರನೇ ಬಾರಿಗೆ ಕೈ ಟಿಕೆಟ್‌ ಪಡೆಯಲು ಕಾಂಗ್ರೆಸ್‌ ಹೆ„ಕಮಾಂಡ್‌ ಮಟ್ಟದಲ್ಲಿ ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. 

ಕಳೆದ 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕೆ ಇಳಿದಿದ್ದ ಮಾಜಿ ಸಚಿವ ಬಿ.ಎನ್‌.ಬಚ್ಚೇಗೌಡ ಅವರು, ಕುಮಾರಸ್ವಾಮಿ ಜೆಡಿಎಸ್‌ನಿಂದ ಸ್ಪರ್ಧಿಸಿ ಮೂರನೇ ಸ್ಥಾನಕ್ಕೆ ದೂಡಲ್ಪಟ್ಟಿದ್ದರಿಂದ ವೀರಪ್ಪ ಮೊಯ್ಲಿ ವಿರುದ್ಧ ಕೇವಲ 10 ಸಾವಿರ ಮತಗಳ ಅಂತರದಿಂದ ಸೋಲನುಭವಿಸಿದ್ದರು.

ಆದರೆ, ಆ ಸಂದರ್ಭದಲ್ಲಿ ನರೇಂದ್ರ ಮೋದಿ ಹವಾ ಎಲ್ಲೆಂದರಲ್ಲೇ ಸಂಚಲನ ಸೃಷ್ಟಿಸಿತ್ತು ಎಂಬುದನ್ನು ಬಿಜೆಪಿ ಮುಖಂಡರು ಒಪ್ಪಿಕೊಳ್ಳುತ್ತಾರೆ. ಪ್ರಸ್ತುತ ರಾಜ್ಯ ಸಮಿಶ್ರ ಸರ್ಕಾರದ ಚುಕ್ಕಾಣಿ ಹಿಡಿದಿರುವ ಜೆಡಿಎಸ್‌ ಪಟ್ಟು ಹಿಡಿದಿರುವ ಕ್ಷೇತ್ರಗಳಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವೂ ಸೇರಿರುವುದರಿಂದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಅಭ್ಯರ್ಥಿಗಳು ಯಾರೆಂಬುದು ಇನ್ನೂ ಪಕ್ಕಾ ಆಗಿಲ್ಲ. 

ದೇವೇಗೌಡರ ಸ್ಪರ್ಧೆಗೆ ಒತ್ತಡ: ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡದಿರಲು ಜೆಡಿಎಸ್‌ನ ಸ್ಥಳೀಯ ಮುಖಂಡರು ಪಟ್ಟು ಹಿಡಿದಿದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಕಣಕ್ಕೆ ಇಳಿಯಲಿದ್ದಾರೆ ಎಂಬ ವದಂತಿಗಳು ಹೊರಬೀಳುತ್ತಿದ್ದಂತೆ, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ  ಮಾಜಿ ಪ್ರಧಾನಿ ದೇವೇಗೌಡರ ಸ್ಪರ್ಧೆಗೆ ಒತ್ತಡ ಹೆಚ್ಚಾಗುತ್ತಿದೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಯಾರು ಎನ್ನುವುದು ಕುಂತಲ್ಲಿ, ನಿಂತಲ್ಲಿ ಚರ್ಚಿತವಾಗುತ್ತಿದೆ. 

ಪಕ್ಷದ ಬಲ, ವ್ಯಕ್ತಿಗತ ವರ್ಚಸ್ಸು: ಕಳೆದ ಚುನಾವಣೆ ಸಂದರ್ಭದಲ್ಲೂ ಪಕ್ಷಗಳ ಬಲಾಬಲ ಅಷ್ಟೇ ಇತು ಎನ್ನುವುದು ಇಲ್ಲಿ ಗಮನಿಸಬೇಕಾದ ಮಹತ್ವದ ಅಂಶವಾಗಿದೆ. 1977 ರಿಂದ 2014ರ ವರೆಗೆ ನಡೆದ 11 ಚುನಾವಣೆಗಳ ಪೈಕಿ 10 ಬಾರಿ ಕಾಂಗ್ರೆಸ್‌, ಒಂದು ಬಾರಿ ಜನತಾದಳ ಗೆದ್ದಿದೆ. ವಿ.ಕೃಷ್ಣರಾವ್‌ ಮತ್ತು ಆರ್‌.ಎಲ್‌.ಜಾಲಪ್ಪ ಸತತ ನಾಲ್ಕು ಬಾರಿ ಮತ್ತು ಮೊಯ್ಲಿ ಸತತ ಎರಡು ಬಾರಿ ಜಯ ಗಳಿಸಿದ್ದಾರೆ. ಜಾತಿ ಹಿನ್ನೆ°ಲೆಗಿಂತ ಪಕ್ಷದ ಬಲ ಮತ್ತು ವೈಯಕ್ತಿಕ ವರ್ಚಸ್ಸಿನಿಂದಲೇ ಅಭ್ಯರ್ಥಿಗಳ ಕೊರಳಿಗೆ ಜಯದ ಮಾಲೆ ಬೀಳುವುದು ಇಲ್ಲಿನ ವಿಶೇಷವಾಗಿದೆ.

ನ್ಯಾ.ಗೋಪಾಲಗೌಡ ಜೆಡಿಎಸ್‌ ಅಭ್ಯರ್ಥಿ?: ಈ ಲೆಕ್ಕಾಚಾರದಿಂದಲೇ ಸಂಸದ ವೀರಪ್ಪ ಮೊಯ್ಲಿ ಯಾವುದೇ ಕಾರಣಕ್ಕೂ ಜೆಡಿಎಸ್‌ಗೆ ಟಿಕೆಟ್‌ ನೀಡಬಾರದು. ಕಾಂಗ್ರೆಸ್‌ ಅಭ್ಯರ್ಥಿಯನ್ನೇ ಕಣಕ್ಕಿಳಿಸಬೇಕೆಂದು ಬಲವಾದ ಒತ್ತಡ ಹೇರುತ್ತಿದ್ದಾರೆಂದು ಪಕ್ಷದ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಇವೆಲ್ಲದ ನಡುವೆ ಶತಾಯ ಗತಾಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲೇಬೇಕು.

ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯಕ್ಕೆ ಆದ್ಯತೆ ನೀಡಬೇಕೆಂದು ಹೇಳಲಾಗುತ್ತಿದೆ. ಈ ಬಗ್ಗೆ ಜೆಡಿಎಸ್‌ನ ಹಿರಿಯ ಮುಖಂಡರು ಸರ್ವೋತ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡರ ಹೆಸರನ್ನು ಈಗಾಗಲೇ ತೇಲಿಬಿಟ್ಟಿದ್ದಾರೆ. ಬಿಎಸ್‌ಪಿಯಿಂದ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ದ್ವಾರಕನಾಥ್‌ ಈಗಾಗಲೇ ಕ್ಷೇತ್ರದಲ್ಲಿ ಸಂಚಾರ ಕೈಗೊಂಡಿದ್ದಾರೆ.

ರೈತಸಂಘಟನೆ ಹೆಚ್ಚಾಗಿರುವ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ರೈತಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಕಣಕ್ಕಿಳಿಯಲು ಪೂರ್ವ ಸಿದ್ಧತೆ ಮಾಡಿಕೊಂಡಿದ್ದಾರೆ. 7.5 ಲಕ್ಷಕ್ಕೂ ಹೆಚ್ಚು ಪರಿಶಿಷ್ಟ ವರ್ಗಗಳ ಮತಗಳ ಮೇಲೆ ಕಣ್ಣಿಟ್ಟಿರುವ ಬಿಎಸ್‌ಪಿ ಈ ಬಾರಿ ಪ್ರಗತಿಪರ ಚಿಂತಕ ಡಾ.ದ್ವಾರಕನಾಥ್‌ರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಸಮಿಶ್ರ ಸರ್ಕಾರದಲ್ಲಿ ಅಧಿಕೃತ ಅಭ್ಯರ್ಥಿ ಯಾರೆಂಬುದು ಘೋಷಣೆಯಾದ ನಂತರ ಎಲ್ಲವೂ ಸ್ಪಷ್ಟವಾಗಲಿದೆ. 

* ಎಸ್‌.ಮಹೇಶ್‌

ಟಾಪ್ ನ್ಯೂಸ್

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.