ಡೀಸಿಗೆ ಸೋಂಕು: ಜಿಲ್ಲಾಡಳಿತ ಭವನ ಸೀಲ್‌ಡೌನ್‌

Team Udayavani, Jul 4, 2020, 6:44 AM IST

bhavana sesl

ದೇವನಹಳ್ಳಿ: ಜಿಲ್ಲಾಧಿಕಾರಿಗೆ ಕೋವಿಡ್‌ 19 ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ತಾಲೂಕಿನ ಬೀರಸಂದ್ರದ ಸಮೀಪದ ಜಿಲ್ಲಾಡಳಿತ ಭವನವನ್ನು 48 ಗಂಟೆಗಳವರೆಗೆ ಸೀಲ್‌ಡೌನ್‌ ಮಾಡಿ ಆದೇಶಿಸಲಾಗಿದೆ. ಎಲ್ಲ ಅಧಿಕಾರಿಗಳು,  ಸಿಬ್ಬಂದಿ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ನೂರಾರು ಜನ ಸಾರ್ವಜನಿಕರು ಬರುವುದರಿಂದ ಜಿಲ್ಲಾಡಳಿತ ಭವನದ ಎಲ್ಲ ಕಚೇರಿಗಳ ಒಳಾಂಗಣ ಮತ್ತು ಹೊರಾಂಗಣ ಸ್ಯಾನಿಟೈಸ್‌ಗೊಳಿಸಲಾಗಿದೆ.

ಈ ಅವಧಿಯಲ್ಲಿ  ಅಧಿಕಾರಿಗಳು, ಸಿಬ್ಬಂದಿ ಕಚೇರಿ ಆವರಣದಲ್ಲಿ ಹಾಜರಾಗುವಂತಿಲ್ಲ ಎಂದು ಸ್ಪಷ್ಟ ಪಡಿಸಿದೆ. ಜತೆಗೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ, ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಆದೇಶಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.  ಕಚೇರಿ ಕಾವಲುಗಾರರು ಮಾತ್ರ ಕಟ್ಟಡದ ಹೊರಭಾಗದಲ್ಲಿ ಹಾಜರಿದ್ದು, ಕಾವಲು ಕಾಯಲು ಮತ್ತು ಕಚೇರಿಯ ಹೊರ ಆವರಣದ ಗೇಟನ್ನು ಸಂಪೂರ್ಣವಾಗಿ ಮುಚ್ಚಲು ಕಾವಲುಗಾರರಿಗೆ ಸೂಚಿಸಲಾಗಿದೆ.

ಎಲ್ಲ ಕಚೇರಿ  ಶುಚಿಗೊಳಿಸಬೇಕು ಎಂದು ಜಿಲ್ಲಾಡಳಿತ ಭವನದ ಮೇಲ್ವಿಚಾರಕರಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗೆ ಕೋವಿಡ್‌ 19 ಪಾಸಿಟಿವ್‌ ವರದಿಯಾಗುತ್ತಿದ್ದಂತೆ, ಕೆಲವು ಅಧಿಕಾರಿಗಳಲ್ಲಿ ಆತಂಕ ಮನೆ ಮಾಡಿದೆ. ಮೂರು ದಿನದಿಂದ ಜಿಲ್ಲಾಧಿಕಾರಿ  ಕಚೇರಿಗೆ ಬಂದಿರಲಿಲ್ಲ. ಹೀಗಾಗಿ ಭಯಪಡುವ ಆತಂಕವಿಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಡೀಸಿ ಕಚೇರಿಗೆ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಮಾಡಿ, ಸ್ಯಾನಿಟೈಸ್‌ಗೊಳಿಸಲಾಗಿದೆ.

ಸೋಂಕು ತಗುಲಿದ್ದ ಅಧಿಕಾರಿಗಳ ಜೊತೆ  ನೇರ ಸಂಪರ್ಕದಲ್ಲಿದ್ದ 4 ತಾಲೂಕಿನ ತಹಶೀಲ್ದಾರ್‌, ಉಪವಿಭಾಗಾಧಿಕಾರಿ ಹಾಗೂ ಇಲಾಖೆಗಳ ಉಪನಿರ್ದೇಶಕ ಅಧಿಕಾರಿಗಳು ಕೆಳ ಹಂತದ ಸಿಬ್ಬಂದಿಯನ್ನು ಕ್ವಾರಂಟೈನ್‌ ಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕ್ರಮಕ್ಕೆ  ಮುಂದಾಗಿದೆ. ಆದರೆ ಟ್ರಾವೆಲ್‌ ಹಿಸ್ಟರಿ ಪತ್ತೆ ಹಚ್ಚುವುದು ಕಗ್ಗಂಟಾಗಿದೆ.

32 ಮಂದಿಗೆ ಬಿಡುಗಡೆ ಭಾಗ್ಯ: ಕೋವಿಡ್‌ 19 ಸೋಂಕು ಎಲ್ಲೆಡೆ ವ್ಯಾಪಿಸುತ್ತಿರುವುದರ ನಡುವೆ ಜಿಲ್ಲೆಯಲ್ಲಿ 32 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೂ 46 ಜನರು ಸೋಂಕಿನಿಂದ ಗುಣಮುಖರಾಗಿದ್ದು, 113 ಪ್ರಕರಣಗಳು ಸಕ್ರಿಯವಾಗಿವೆ.

ಜಿಲ್ಲಾಡಳಿತ ಭವನವನ್ನು ಸ್ಯಾನಿಟೈಸ್‌ಗೊಳಿಸಲಾಗಿದೆ. ಇಲ್ಲಿನ ಪ್ರತಿ ಸಿಬ್ಬಂದಿಗೆ ಕೋವಿಡ್‌ 19 ಸೋಂಕು ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರಿಸ್ಥಿತಿ ಆಧರಿಸಿ ಸೀಲ್‌ಡೌನ್‌ ಪ್ರಕ್ರಿಯೆ ನಡೆಯಲಿದೆ.
-ಡಾ.ಜಗದೀಶ್‌ ಕೆ.ನಾಯಕ್‌, ಅಪರ ಜಿಲ್ಲಾಧಿಕಾರಿ

ಟಾಪ್ ನ್ಯೂಸ್

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ssa

Malpe: ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.