ಗ್ರಾಪಂ ಸದಸ್ಯ ಸ್ಥಾನ ಹರಾಜು ಆಗದಂತೆ ನೋಡಿಕೊಳ್ಳಿ


Team Udayavani, Dec 12, 2020, 2:18 PM IST

ಗ್ರಾಪಂ ಸದಸ್ಯ ಸ್ಥಾನ ಹರಾಜು ಆಗದಂತೆ ನೋಡಿಕೊಳ್ಳಿ

ದೇವನಹಳ್ಳಿ: ಇತರೆ ಜಿಲ್ಲೆಗಳಲ್ಲಿ ಗ್ರಾಪಂ ಸದಸ್ಯ ಸ್ಥಾನಗಳ ಆಯ್ಕೆ ಪ್ರಕ್ರಿಯೆ ಹರಾಜು ಮೂಲಕ ನಡೆಯುತ್ತಿರುವ ಬಗ್ಗೆ ವರದಿಯಾಗಿದ್ದು, ಇಂತಹ ಪ್ರಕ್ರಿಯೆಗಳು ನಡೆಯದಂತೆ ಅಧಿಕಾರಿಗಳು ಸೂಕ್ತಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ. ಎನ್‌.ರವೀಂದ್ರ ಸೂಚಿಸಿದರು.

ತಾಲೂಕಿನ ಜಿಲ್ಲಾಡಳಿತ ಭವನದಲ್ಲಿ ನಡೆದ ಗ್ರಾಪಂ ಸಾರ್ವತ್ರಿಕ ಚುನಾವಣೆ-2020ರ ಸಂಬಂಧ ಜಿಲ್ಲಾ ಮಟ್ಟದಲ್ಲಿ ರಚಿಸಲಾದ ವಿವಿಧ ತಂಡಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮಾಂತರ ಜಿಲ್ಲೆಗೆ ಚುನಾವಣಾ ವೀಕ್ಷಕರಾಗಿ ಹಿರಿಯ ಅಧಿಕಾರಿ ಚಂದ್ರಕಾಂತ್‌ ನೇಮಕವಾಗಿದ್ದಾರೆ. ಚುನಾವಣಾಸಂಬಂಧಯಾವುದೇ ಸಮಸ್ಯೆಗಳು, ದೂರುಗಳಿದ್ದರೆ ಅವರ ಗಮನಕ್ಕೆ ತರಬೇಕು ಎಂದು ಹೇಳಿದರು.

ಭದ್ರತೆ ಕಲ್ಪಿಸಲು ಸೂಚನೆ: ಅಬಕಾರಿ ಮತ್ತು ಪೊಲೀಸ್‌ ಇಲಾಖೆಗಳ ನಡುವೆ ಸಮನ್ವಯ ಅಗತ್ಯ ವಿದ್ದು, ಸಹಕಾರದಿಂದ ಕೆಲಸ ನಿರ್ವಹಿಸಬೇಕು. ಚುನಾವಣಾ ಸಂಬಂಧ ದೂರುಗಳನ್ನು ಪರಿಶೀಲಿಸಿ ಶೀಘ್ರವೇ ಕ್ರಮ ಕೈಗೊಳ್ಳಬೇಕು ಹಾಗೂ ಗ್ರಾಪಂ ಹಂತದಲ್ಲಿ ನೇಮಕವಾಗಿರುವ ಅಧಿಕಾರಿಗಳಿಗೆ ಸೂಕ್ತ ಭದ್ರತೆ ಕಲ್ಪಿಸುವಂತೆ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆನೀಡಿದರು.

ಕೋವಿಡ್‌ ನಿಯಮ ಪಾಲಿಸಿ: ಮತದಾರರಿಗೆ ಚುನಾವಣೆ ದಿನಾಂಕ, ಸಮಯವನ್ನು ತಿಳಿಸುವ ಕಾರ್ಯದೊಂದಿಗೆ ಮತದಾನದ ಸಂದರ್ಭದಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಸೇರಿ ಕೋವಿಡ್‌-19 ಕುರಿತಾದ ಜಾಗೃತಿ ಮೂಡಿಸುವ ಕೆಲಸವನ್ನು ಇಲಾಖೆಗಳ ಅಧಿಕಾರಿಗಳು ಮಾಡಬೇಕೆಂದು ತಾಪಂ ಇಒಗೆ ಸೂಚನೆ ನೀಡಿದರು.

ರಾತ್ರಿ ಗಸ್ತು ಹೆಚ್ಚಿಸಿ: ಜಿಪಂ ಸಿಇಒ ಎಂ.ಆರ್‌. ರವಿಕುಮಾರ್‌ ಮಾತ‌ನಾಡಿ, ನೆಲಮಂಗಲ ಮತ್ತು ಹೊಸಕೋಟೆ ಸೂಕ್ಷ್ಮ ಕ್ಷೇತ್ರಗಳಾಗಿದ್ದು, ಎಚ್ಚರ ವಹಿಸುವುದು ಅಗತ್ಯ ಎಂದರಲ್ಲದೆ, ಸ್ಥಳೀಯವಾಗಿ ಹಣ, ಮದ್ಯ, ಉಡುಗೊರೆ ಹಾಗೂ ಸಾಮಗ್ರಿ ಯನ್ನು ನೀಡುವ ಸಾಧ್ಯತೆ ಹೆಚ್ಚಾಗಿರುವ ಕಾರಣ, ಪೊಲೀಸ್‌ ಇಲಾಖೆಯವರು ರಾತ್ರಿ ಗಸ್ತು ಹೆಚ್ಚಿಸಬೇಕು ಜೊತೆಗೆ ಚುನಾವಣೆಗೆ ಸ್ಪರ್ಧಿಸುವ ಕೆಲವು ಸಮುದಾಯಅಭ್ಯರ್ಥಿಗಳಿಗೆ ಬೆದರಿಕೆಗಳು ಬರುವ ಸಾಧ್ಯತೆ ಇರುವುದರಿಂದ ಹೆಚ್ಚು ಗಮನಹರಿಸಬೇಕು ಎಂದು ಹೇಳಿದರು.

ಮೂಲ ಸೌಕರ್ಯ ಕಲ್ಪಿಸಿ: ಗ್ರಾಮೀಣ ಪ್ರದೇಶದಲ್ಲಿ ಪಾಳು ಬಿದ್ದ ಮನೆ, ಗೊಬ್ಬರದ ಗುಂಡಿಗಳಲ್ಲಿ ಅಕ್ರಮ ವಾಗಿ ಮದ್ಯ ಸಂಗ್ರಹಿಸುವ ‌ ಸಾಧ್ಯತೆ ಇರುವುದರಿಂದ ಅಬಕಾರಿ ಮತ್ತು ಪೊಲೀಸ್‌ ಇಲಾಖೆಗಳು ಗಸ್ತು ಹೆಚ್ಚಿಸಿ, ಅನುಮಾನ ‌ ಬಂದಲ್ಲಿಸೂಕ್ತ ರೀತಿಯಲ್ಲಿ ಪರಿಶೀಲಿಸಬೇಕು. ಮತದಾನ ಕೇಂದ್ರದಲ್ಲಿ ಕುಡಿಯುವ ನೀರು, ಶೌಚಾಲಯಸೇರಿ ಮೂಲ ಸೌಕರ್ಯ ಕಲ್ಪಿಸಲು ತಾಪಂ ಇಒಗೆ ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್‌. ಕೆ.ನಾಯಕ್‌ ಮಾತನಾಡಿ, ಸೂಕ್ಷ್ಮ ಮತಗಟ್ಟೆ ಕೇಂದ್ರಗಳಲ್ಲಿ ಕೋವಿಡ್‌-19 ಕುರಿತು ಆರೋಗ್ಯ ಇಲಾಖೆಯ ಸಿಬ್ಬಂದಿ ನೇಮಿಸುವುದರ ಜೊತೆಗೆ ಪ್ರಾಥಮಿಕ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಬೇಕು  ಎಂದು ಸೂಚಿಸಿದರು. ಜಿಲ್ಲಾ ಅಬಕಾರಿ ಉಪ ಆಯುಕ್ತ ರವೀಂದ್ರ, ಜಿಲ್ಲಾ ಉಪ ಆರಕ್ಷಕ ‌ ಅಧೀಕ್ಷಕರು, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Randeep-surgewala

ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ

rohit

BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು

kohli

Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ

MB-Patil-Mi

ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್‌

police crime

Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

1-dee

Maha Kumbh; 7 ಕೋಟಿ ರುದ್ರಾಕ್ಷಿಗಳಿಂದ 12 ಜ್ಯೋತಿರ್ ಲಿಂಗಗಳ ರಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Randeep-surgewala

ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ

rohit

BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು

kohli

Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ

MB-Patil-Mi

ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್‌

puttige-8-

Puthige Matha: ವಿಶ್ವ ಗೀತಾ ಪರ್ಯಾಯಕ್ಕೆ‌ ಇಂದಿಗೆ ವರ್ಷ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.